LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮಣ್ಣಿನ ಮೂರ್ತಿಗಳನ್ನಷ್ಟೇ ಪ್ರತಿಷ್ಠಾಪಿಸಿ, ಡಿಜೆ ಬಳಸುವಂತಿಲ್ಲ: ಮಂಡ್ಯ ಎಸ್‌ಪಿ ಡಾ.ವಿ.ಜೆ. ಶೋಭಾರಾಣಿ ಕಟ್ಟುನಿಟ್ಟಿನ ಸೂಚನೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ವೇಳೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಅಥವಾ ಗಲಭೆಗಳಿಗೆ ಆಸ್ಪದ ನೀಡದೆ, ಆಯೋಜಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ.ಜೆ. ಶೋಭಾರಾಣಿ ನಿರ್ದೇಶನ ನೀಡಿದ್ದಾರೆ.

ಮದ್ದೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸೋಮವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ತಾಲೂಕು ಮಟ್ಟದ ಸರ್ವಧರ್ಮ ಸೌಹಾರ್ದ ಹಾಗೂ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಸರ ಸ್ನೇಹಿ ಗಣೇಶ ಹಾಗೂ ಅನುಮತಿ ಕಡ್ಡಾಯ

ತಾಲೂಕಿನ ಎಲ್ಲಾ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾತ್ರ ಪ್ರತಿಷ್ಠಾಪಿಸಬೇಕು. ಸ್ಥಳೀಯ ಸಂಸ್ಥೆಗಳಿಂದ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಯಿಂದ ಅಗತ್ಯ ಅನುಮತಿ ಪತ್ರಗಳನ್ನು ಪಡೆದು, ಇಲಾಖೆಯ ಸೂಚನೆಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ತಿಳಿಸಿದರು.

ಡಿಜೆಗೆ ನಿಷೇಧ, ರಾತ್ರಿ 10ರ ನಂತರ ಮೈಕ್ ಬಂದ್

ಗಣೇಶ ಮಂಟಪಗಳಲ್ಲಿ ರಾತ್ರಿ 10 ಗಂಟೆಯ ನಂತರ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಮತ್ತು ಸಭ್ಯ ಹಾಡುಗಳನ್ನು ಮಾತ್ರ ಹಾಕಬೇಕು. ಯಾವುದೇ ಕಾರಣಕ್ಕೂ ಡಿಜೆ ಬಳಸಲು ಅವಕಾಶವಿಲ್ಲ. ಒಂದು ವೇಳೆ ನಿಯಮ ಮೀರಿ ಡಿಜೆ ಹಾಕಿದರೆ ಆಯೋಜಕರ ವಿರುದ್ಧವೇ ದೂರು ದಾಖಲಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಸಿಸಿಟಿವಿ ಕಣ್ಗಾವಲು ಹಾಗೂ ಸುರಕ್ಷತಾ ಮಾರ್ಗಸೂಚಿ

ಮೆರವಣಿಗೆ ಸಾಗುವ ಪ್ರಮುಖ ಮಾರ್ಗಗಳಲ್ಲಿ ಪೊಲೀಸ್ ಇಲಾಖೆಯಿಂದಲೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ವಿಸರ್ಜನಾ ಸ್ಥಳಗಳಲ್ಲಿ ಬ್ಯಾರಿಕೇಡ್, ಸೂಕ್ತ ವಿದ್ಯುತ್ ದೀಪದ ವ್ಯವಸ್ಥೆ ಹಾಗೂ ಈಜು ಪರಿಣಿತರನ್ನು ಸಜ್ಜುಗೊಳಿಸಬೇಕು. ಕತ್ತಲಾಗುವ ಮುನ್ನವೇ ಮೂರ್ತಿ ವಿಸರ್ಜನೆ ಪೂರ್ಣಗೊಳಿಸಲು ಆಯೋಜಕರು ಸಹಕರಿಸಬೇಕು ಎಂದು ಎಸ್‌ಪಿ ಮನವಿ ಮಾಡಿದರು.

ಹಬ್ಬದ ನೆಪದಲ್ಲಿ ಅನಗತ್ಯವಾಗಿ ಗಲಭೆ ಅಥವಾ ಘರ್ಷಣೆಗೆ ಯತ್ನಿಸುವ ಕಿಡಿಗೇಡಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬರೂ ಶಾಂತಿ, ಸೌಹಾರ್ದತೆಯಿಂದ ಹಬ್ಬ ಆಚರಿಸಬೇಕೆಂದು ಕೋರಿದರು. ಸಭೆಯಲ್ಲಿ ಸಾರ್ವಜನಿಕರು ನೀಡಿದ ಸಲಹೆಗಳಿಗೆ ಎಸ್‌ಪಿ ಸೂಕ್ತ ಅಭಯ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಡಾ. ಶಿವಕುಮಾರ್ ಬಿರಾದಾರ್, ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐಗಳಾದ ನವೀನ್, ನಾರಾಯಣಿ, ಅನಿಲ್ ಕುಮಾರ್, ಸೆಸ್ಕ್ ಇಇ ಶಿವಕುಮಾರ್, ತಾಪಂ ಎಒ ಗಂಗರಾಜು ಹಾಗೂ ಪೊಲೀಸ್ ಸಿಬ್ಬಂದಿ, ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ: ಗಿರೀಶ್ ರಾಜ್, ಮಂಡ್ಯ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!