LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು: ನಾಲ್ವರು ಹಿರಿಯ IAS ಅಧಿಕಾರಿಗಳನ್ನು ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಲವು ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಸೆಪ್ಟೆಂಬರ್ 7, 2026 ರಂದು ಈ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ.

ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ ಪ್ರಮುಖ ಬದಲಾವಣೆಗಳು

ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾಗಿದ್ದ ಡಾ. ರಾಕೇಶ್ ಕುಮಾರ್ ಕೆ. ಅವರನ್ನು ಗ್ರೇಟರ್ ಬೆಂಗಳೂರು ಪ್ರದೇಶದ 'ಬೆಂಗಳೂರು ದಕ್ಷಿಣ ನಗರ ಪಾಲಿಕೆ'ಯ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ. ಇಲ್ಲಿಯವರೆಗೆ ಆಯುಕ್ತರಾಗಿದ್ದ ಕೆ.ಎನ್. ರಮೇಶ್ ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರನ್ನಾಗಿ (ಆರೋಗ್ಯ ಮತ್ತು ಶಿಕ್ಷಣ) ನಿಯೋಜಿಸಲಾಗಿದೆ.

ಇದೇ ವೇಳೆ, ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದ ಶ ಶಿಲ್ಪಾ ನಾಗ್ ಸಿ.ಟಿ. ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರ (ಅರಣ್ಯ, ಪರಿಸರ ಮತ್ತು ವಾಯುಗುಣ ವೈಪರೀತ್ಯ, ಚುನಾವಣೆ, ವಿಪತ್ತು ನಿರ್ವಹಣೆ, ಸಾರ್ವಜನಿಕ ಸಂಪರ್ಕ ಹಾಗೂ ಸಮನ್ವಯ) ಜವಾಬ್ದಾರಿ ನೀಡಲಾಗಿದೆ.

ಇತರೆ ಅಧಿಕಾರಿಗಳ ನೂತನ ಹುದ್ದೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತರಾಗಿದ್ದ (ಆರೋಗ್ಯ ಮತ್ತು ಶಿಕ್ಷಣ) ವೆಂಕಟಾಚಲಪತಿ ಆರ್. ಅವರನ್ನು ಗ್ರೇಟರ್ ಬೆಂಗಳೂರು ಪ್ರದೇಶದ 'ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್'ನ ಹೆಚ್ಚುವರಿ ಆಯುಕ್ತರನ್ನಾಗಿ (ಅಭಿವೃದ್ಧಿ) ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಎಲ್ಲಾ ವರ್ಗಾವಣೆಗಳು ತಕ್ಷಣದಿಂದಲೇ ಜಾರಿಗೆ ಬರಲಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!