LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೈದರಾಬಾದ್–ಮಂಗಳೂರು ಸೆಂಟ್ರಲ್ ನಡುವಿನ ವಿಶೇಷ ರೈಲುಗಳ ವಿಸ್ತರಣೆ

ಬೆಂಗಳೂರು: ದಕ್ಷಿಣ ಮಧ್ಯ ರೈಲ್ವೆಯು ರೈಲು ಸಂಖ್ಯೆ 07097/07098 ಹೈದರಾಬಾದ್-ಮಂಗಳೂರು ಸೆಂಟ್ರಲ್-ಹೈದರಾಬಾದ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸೇವೆಯನ್ನು ಹಾಲಿ ಇರುವ ನಿಲ್ದಾಣಗಳು ಮತ್ತು ಬೋಗಿಗಳ ಸಂಯೋಜನೆಯೊಂದಿಗೆ ಹಾಗೂ ರೈಲು ಸಂಖ್ಯೆ 07098ರ ವೇಳಾಪಟ್ಟಿಯನ್ನು ಕೆಲವು ನಿಲ್ದಾಣಗಳಲ್ಲಿ ಪರಿಷ್ಕೃತ ಸಮಯದೊಂದಿಗೆ ವಿಸ್ತರಿಸಲು ಸೂಚಿಸಿದೆ.

ಈ ಮೊದಲು 02.09.2026ರವರೆಗೆ ಮಾತ್ರ ಸಂಚರಿಸಲು ಸೂಚಿಸಲಾಗಿದ್ದ ರೈಲು ಸಂಖ್ಯೆ 07097 ಹೈದರಾಬಾದ್–ಮಂಗಳೂರು ಸೆಂಟ್ರಲ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್, ಈಗ 09.09.2026 ರಿಂದ 25.11.2026 ರವರೆಗೆ ವಿಸ್ತರಣೆಯಾಗಲಿದೆ.

ಅದೇ ರೀತಿ, ಹಿಂದೆ 03.09.2026 ರವರೆಗೆ ಸೂಚಿಸಲಾಗಿದ್ದ ರೈಲು ಸಂಖ್ಯೆ 07098 ಮಂಗಳೂರು ಸೆಂಟ್ರಲ್-ಹೈದರಾಬಾದ್ ಸಾಪ್ತಾಹಿಕ ವಿಶೇಷ ಎಕ್ಸ್’ಪ್ರೆಸ್, ಈಗ 10.09.2026 ರಿಂದ 26.11.2026 ರವರೆಗೆ ವಿಸ್ತರಣೆಯಾಗಲಿದೆ. ಈ ವಿಸ್ತರಿತ ಅವಧಿಯಲ್ಲಿ ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ತಲಾ 12 ಸಂಚಾರಗಳನ್ನು (Trips) ನಡೆಸಲಿವೆ. ರೈಲು ಸಂಖ್ಯೆ 07098 ರ ಪರಿಷ್ಕೃತ ಸಮಯವು ರಾಷ್ಟ್ರೀಯ ರೈಲು ವಿಚಾರಣಾ ವ್ಯವಸ್ಥೆ ವೆಬ್ಸೈಟ್ನಲ್ಲಿ (https://enquiry.indianrail.gov.in/mntes/) ಲಭ್ಯವಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!