LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

1,000 ಉದ್ಯೋಗಿಗಳಿಗೆ ಗುಡ್‌ಬೈ.. 50 ರೋಬೋಗಳಿಗೆ ವೆಲ್‌ಕಮ್ ! ಜಿಎಮ್ ನಿರ್ಧಾರಕ್ಕೆ ಕಾರ್ಮಿಕ ಸಂಘಗಳ ಆಕ್ರೋಶ

ಪ್ರಮುಖ ಅಂತರರಾಷ್ಟ್ರೀಯ ವಾಹನ ತಯಾರಿಕಾ ದಿಗ್ಗಜ ಜಿಎಮ್ (General Motors ) ಡೆಟ್ರಾಯಿಟ್‌ನಲ್ಲಿರುವ ತನ್ನ ಪ್ರಮುಖ ಅಸೆಂಬ್ಲಿ ಘಟಕದಲ್ಲಿ ತೆಗೆದುಕೊಂಡಿರುವ ಒಂದು ಸಂಚಲನಕಾರಿ ನಿರ್ಧಾರ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಅಮೆರಿಕದ ವಾಹನ ತಯಾರಿಕಾ ಸಂಸ್ಥೆಯಾದ ಜನರಲ್ ಮೋಟಾರ್ಸ್ (GM) ತನ್ನ Factory ZERO ಘಟಕದಲ್ಲಿ 1,000ಕ್ಕೂ ಹೆಚ್ಚು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿ, ಅವರ ಸ್ಥಾನದಲ್ಲಿ 50 ‘ಕೋಬೋಟ್ಸ್’ (Collaborative Robots) ಗಳನ್ನು ನಿಯೋಜಿಸಿದೆ. ವಾಹನಗಳ ಅಸೆಂಬ್ಲಿ ಲೈನ್‌ನಲ್ಲಿ ಬಾಡಿ ಪ್ಯಾನೆಲ್‌ಗಳನ್ನು ಅಳವಡಿಸುವ ಕಾರ್ಯಗಳಲ್ಲಿ ಈ ರೋಬೋಗಳು ಉಳಿದ ಉದ್ಯೋಗಿಗಳೊಂದಿಗೆ ಸೇರಿ ಕೆಲಸ ಮಾಡುತ್ತಿವೆ.

ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವುದರ ಜೊತೆಗೆ ಸುರಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಂಡಿರುವುದಾಗಿ ಜಿಎಮ್ ಆಡಳಿತ ಮಂಡಳಿ ತಿಳಿಸಿದೆ. ಆದರೆ, ಉದ್ಯೋಗ ಕಡಿತದ ನಂತರ ರೋಬೋಗಳನ್ನು ಪರಿಚಯಿಸಿರುವ ಕ್ರಮವನ್ನು ಕಾರ್ಮಿಕ ಸಂಘಗಳು ತೀವ್ರವಾಗಿ ವಿರೋಧಿಸುತ್ತಿವೆ.

United Auto Workers (UAW) ಸ್ಥಳೀಯ ಘಟಕ 22ರ ಅಧ್ಯಕ್ಷ James Cotton ಪ್ರತಿಕ್ರಿಯಿಸಿ, “ರೋಬೋಗಳು ಕಾರ್ಮಿಕರ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿವೆ. ನಮ್ಮ ಸದಸ್ಯರ ಉದ್ಯೋಗವನ್ನು ರಕ್ಷಿಸುವ ಅಗತ್ಯವಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರ ನಡುವೆ, ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ನಿಧಾನಗೊಂಡಿರುವ ಹಿನ್ನೆಲೆಯಲ್ಲಿ ಜಿಎಮ್ ಸ್ವಯಂಚಾಲಿತ ತಂತ್ರಜ್ಞಾನ (Automation) ಕಡೆ ಹೆಚ್ಚು ಗಮನ ಹರಿಸುತ್ತಿರುವುದಾಗಿ ತಿಳಿದುಬಂದಿದೆ. ಇದೇ ವೇಳೆ, 2026ರ ಮೊದಲ ತ್ರೈಮಾಸಿಕದಲ್ಲಿ ಸಂಸ್ಥೆ 4.25 ಬಿಲಿಯನ್ ಡಾಲರ್‌ಗಳ ಲಾಭ ದಾಖಲಿಸಿರುವುದು ಗಮನಾರ್ಹವಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!