ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ನಿರ್ದೇಶನಾಲಯವು 2026-27ನೇ ಶೈಕ್ಷಣಿಕ ಸಾಲಿನ ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಪೋಸ್ಟ್‌ಮ್ಯಾಟ್ರಿಕ್ (1ನೇ ತರಗತಿಯಿಂದ 1-8 ವರೆಗೆ) ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಅರ್ಹ ವಿದ್ಯಾರ್ಥಿಗಳು 2026ರ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?
- ಮುಸ್ಲಿಂ, ಕ್ರೈಸ್ತ, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು
- ಕರ್ನಾಟಕ ರಾಜ್ಯದ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ₹1 ಲಕ್ಷ ಮೀರಿರಬಾರದು
ಅರ್ಜಿ ಸಲ್ಲಿಸುವ ವೆಬ್‌ಸೈಟ್‌ಗಳು
- SSP ಪೋರ್ಟಲ್: https://ssp.postmatric.karnataka.gov.in/ssppre/
- ಅಲ್ಪಸಂಖ್ಯಾತರ ನಿರ್ದೇಶನಾಲಯ: https://dom.karnataka.gov.in
ಪ್ರಮುಖ ಸೂಚನೆಗಳು
- 2025-26ನೇ ಸಾಲಿನಲ್ಲಿ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು 2026-27ನೇ ಸಾಲಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ.
- ಕಳೆದ ವರ್ಷ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನ ಪಡೆಯದವರು ಮರು ಅರ್ಜಿ ಸಲ್ಲಿಸಬೇಕು.
- NPCI Mapping ಮಾಡಿಸಿರುವ ಬ್ಯಾಂಕ್ ಖಾತೆ ಹೊಂದಿರುವ ವಿದ್ಯಾರ್ಥಿಗಳಿಗೆ ಮಾತ್ರ ವಿದ್ಯಾರ್ಥಿವೇತನ ಜಮೆಯಾಗುತ್ತದೆ.
- 1ನೇ ತರಗತಿಯಿಂದ ಅಧ್ಯಯನ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಬಹುದು.
- ವಿದ್ಯಾರ್ಥಿವೇತನದ ಅರ್ಹತಾ ಮಾನದಂಡಗಳು ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಹೊಸ ಅರ್ಜಿದಾರರು ಏನು ಮಾಡಬೇಕು?
- SSP ಪೋರ್ಟಲ್‌ಗೆ ಭೇಟಿ ನೀಡಬೇಕು.
- New Registration ಮೂಲಕ ನೋಂದಣಿ ಮಾಡಿಕೊಳ್ಳಬೇಕು.
- Login ಮಾಡಿ ಅರ್ಜಿ ಭರ್ತಿ ಮಾಡಬೇಕು.
- ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.
- ಅರ್ಜಿ ಸಲ್ಲಿಸಿ ಪ್ರಿಂಟ್ ಪಡೆದುಕೊಳ್ಳಬೇಕು.