LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು: ಗಣೇಶೋತ್ಸವದ ಮೊದಲ ದಿನವೇ ಬರೋಬ್ಬರಿ 1.84 ಲಕ್ಷಕ್ಕೂ ಹೆಚ್ಚು ಮೂರ್ತಿಗಳ ವಿಸರ್ಜನೆ!

ಬೆಂಗಳೂರು : ನಗರದಲ್ಲಿ ಗಣೇಶ ಚತುರ್ಥಿಯ ಸಂಭ್ರಮ ಮುಗಿಲು ಮುಟ್ಟಿದ್ದು, ಹಬ್ಬದ ಮೊದಲ ದಿನವೇ ನಗರಾದ್ಯಂತ ಬರೋಬ್ಬರಿ 1.84 ಲಕ್ಷಕ್ಕೂ ಹೆಚ್ಚು ಗಣಪತಿ ಮೂರ್ತಿಗಳನ್ನು ಯಶಸ್ವಿಯಾಗಿ ವಿಸರ್ಜನೆ ಮಾಡಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಹಾಗೂ ನಗರ ಪೊಲೀಸರ ಕಟ್ಟುನಿಟ್ಟಿನ ವಿಸರ್ಜನಾ ವ್ಯವಸ್ಥೆಯಿಂದಾಗಿ, ಎಲ್ಲ ವಲಯಗಳಲ್ಲೂ ಅತ್ಯಂತ ಸುಸೂತ್ರ ಹಾಗೂ ಪರಿಸರ ಸ್ನೇಹಿಯಾಗಿ ಗಣೇಶ ಮೂರ್ತಿಗಳ ನಿಮಜ್ಜನ ಕಾರ್ಯ ನೆರವೇರಿದೆ.

ಜಿಬಿಎ ಬಿಡುಗಡೆ ಮಾಡಿರುವ ಅಧಿಕೃತ ದತ್ತಾಂಶದ ಪ್ರಕಾರ, ಪಶ್ಚಿಮ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಂದರೆ ಬರೋಬ್ಬರಿ 1,20,079 ಗಣೇಶ ಮೂರ್ತಿಗಳನ್ನು ಕಲ್ಯಾಣಿ ಹಾಗೂ ಮೊಬೈಲ್ ಟ್ಯಾಂಕ್‌ಗಳಲ್ಲಿ ವಿಸರ್ಜಿಸಲಾಗಿದೆ. ಉಳಿದಂತೆ ಸೆಂಟ್ರಲ್ ವಲಯದಲ್ಲಿ 28,860, ಉತ್ತರ ವಲಯದಲ್ಲಿ 16,857, ದಕ್ಷಿಣ ವಲಯದಲ್ಲಿ 10,372 ಹಾಗೂ ಪೂರ್ವ ವಲಯ ಪಾಲಿಕೆ ವ್ಯಾಪ್ತಿಯಲ್ಲಿ 8,460 ಮೂರ್ತಿಗಳು ನಿಮಜ್ಜನಗೊಂಡಿದ್ದು, ಒಟ್ಟು 1,84,568 ಕ್ಕೂ ಅಧಿಕ ಮೂರ್ತಿಗಳು ವಿಸರ್ಜನೆಯಾಗಿವೆ.

ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಬಿಎ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು. ನಗರದ 42 ಪ್ರಮುಖ ಕೆರೆಗಳ ಆವರಣದಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಕಲ್ಯಾಣಿಗಳನ್ನು ನಿರ್ಮಿಸಲಾಗಿತ್ತು. ಜೊತೆಗೆ ಸಾರ್ವಜನಿಕರು ತಮ್ಮ ವಾರ್ಡ್‌ನಲ್ಲೇ ಮೂರ್ತಿ ವಿಸರ್ಜಿಸಲು ಅನುಕೂಲವಾಗುವಂತೆ ಪ್ರತಿಯೊಂದು ವಾರ್ಡ್ ಮಟ್ಟದಲ್ಲೂ ಒಟ್ಟು 659 ಸಂಚಾರಿ (ಮೊಬೈಲ್) ಟ್ಯಾಂಕರ್ ವ್ಯವಸ್ಥೆಯನ್ನು ಒದಗಿಸಲಾಗಿತ್ತು. ಕಲ್ಯಾಣಿ ಹಾಗೂ ಟ್ಯಾಂಕರ್ ವಿವರಗಳನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲೂ ನೀಡಲಾಗಿತ್ತು.

ಸಾರ್ವಜನಿಕ ಹಾಗೂ ಗಣೇಶ ಮಂಡಳಿಗಳ ಅನುಕೂಲಕ್ಕಾಗಿ ಜಿಬಿಎ ಐದೂ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 122 ‘ಏಕಗವಾಕ್ಷಿ ಕೇಂದ್ರ’ಗಳನ್ನು ತೆರೆದಿತ್ತು. ಇದರ ಮೂಲಕ ಸಾರ್ವಜನಿಕ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗೆ ಯಾವುದೇ ಅಡಚಣೆಯಿಲ್ಲದೆ ತಕ್ಷಣವೇ ಅನುಮತಿ ಪತ್ರ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗಿತ್ತು. ಈ ಏಕಗವಾಕ್ಷಿ ವ್ಯವಸ್ಥೆಯು ಆಯೋಜಕರಿಗೆ ಸಕಾಲದಲ್ಲಿ ಪರವಾನಗಿ ಪಡೆಯಲು ನೆರವಾಗಿದೆ.

ಪ್ರಕೃತಿ ಹಾಗೂ ಕೆರೆಗಳ ನೀರು ಕಲುಷಿತಗೊಳ್ಳದಂತೆ ತಡೆಯಲು ಜಿಬಿಎ ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮೂರ್ತಿಗಳ ಮಾರಾಟ ಮತ್ತು ಬಳಕೆಯ ವಿರುದ್ಧ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದ್ದು, ಮೊಬೈಲ್ ಟ್ಯಾಂಕ್‌ಗಳ ಪ್ರತ್ಯೇಕ ಬಳಕೆ ಯಶಸ್ಸು ಕಂಡಿದೆ. ಮುಂಬರುವ ದಿನಗಳಲ್ಲೂ ಗಣಪತಿ ವಿಸರ್ಜನೆಗೆ ಜಿಬಿಎ ಮತ್ತು ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿಕೊಂಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!