ಬೆಂಗಳೂರು: ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಕೇಂದ್ರ ಜಲ ಆಯೋಗದ ಮುಂದೆ ಪರಿಷ್ಕೃತ ಡಿಪಿಆರ್ ಸಲ್ಲಿಸಲು ಸಿದ್ಧತೆ ನಡೆಸಿದೆ.
ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನೆ ಅರ್ಜಿಯನ್ನು ಇತ್ತೀಚಿಗೆ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಕರ್ನಾಟಕ ತಮ್ಮ ಜಾಗದಲ್ಲಿ ಯೋಜನೆ ಮಾಡಿಕೊಳ್ಳಲು ತಮಿಳುನಾಡು ಆಕ್ಷೇಪಣೆ ಸಲ್ಲಿಸಲು ಬರುವುದಿಲ್ಲ. ನಿಮ್ಮ ಪಾಲಿನ ನೀರು ಬಿಡುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಜಲ ಆಯೋಗ ನಿರ್ಧರಿಸಿ ನಿರ್ಧರಿಸಬೇಕು ಎಂದಿದೆ.
ಇದು ಕರ್ನಾಟಕದ ಪಾಲಿಗೆ ದೊಡ್ಡ ಗೆಲುವಾಗಿದ್ದು, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕುಡಿಯುವ ನೀರು, ಒದಗಿಸುವ ಯೋಜನೆಗೆ ಇದ್ದ ಪ್ರಮುಖ ಅಡಚಣೆ ನಿವಾರಣೆಯಾದಂತಾಗಿದೆ. ಹೀಗಾಗಿ ಇನ್ನು10 ರಿಂದ 15 ದಿನಗಳಲ್ಲಿ ಮತ್ತೆ ಪರಿಷ್ಕೃತ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದೆ.