LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

108 ಅಂಬುಲೆನ್ಸ್‌ ನೌಕರರ ಸಾಮೂಹಿಕ ರಾಜೀನಾಮೆ ಎಚ್ಚರಿಕೆ : ಸೆಪ್ಟೆಂಬರ್ 20ರಿಂದ ಸೇವೆ ಬಂದ್‌ ಭೀತಿ

ಬೆಂಗಳೂರು : 108 ಅಂಬುಲೆನ್ಸ್‌ ನೌಕರರ ಸಾಮೂಹಿಕ ರಾಜೀನಾಮೆ ಎಚ್ಚರಿಕೆ: ಸೆಪ್ಟೆಂಬರ್ 20ರಿಂದ ಸೇವೆ ಬಂದ್‌ ಭೀತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳನ್ನು ತಕ್ಷಣವೇ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಅಂಬುಲೆನ್ಸ್‌ ನೌಕರರು ಸರ್ಕಾರಕ್ಕೆ ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ಸೆಪ್ಟೆಂಬರ್ 20 ರಿಂದ ಸಾಮೂಹಿಕವಾಗಿ ರಾಜೀನಾಮೆ ನೀಡಿ ಬೃಹತ್ ಹೋರಾಟಕ್ಕಿಳಿಯುವುದಾಗಿ ನೌಕರರ ಸಂಘಟನೆಗಳು ಸ್ಪಷ್ಟಪಡಿಸಿವೆ.

ಈ ಕುರಿತು ‘ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ’ ಹಾಗೂ ‘ಕರ್ನಾಟಕ ರಾಜ್ಯ ಆರೋಗ್ಯ ಕವಚ ಆಂಬುಲೆನ್ಸ್ ನೌಕರರ ಸಂಘ’ದ ಪದಾಧಿಕಾರಿಗಳು ಆರೋಗ್ಯ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಸಮಸ್ಯೆಗಳನ್ನು ತೋಡಿಕೊಂಡಿದ್ದಾರೆ. ಜಿವಿಕೆ ಸಂಸ್ಥೆಯ ಅಧೀನದಲ್ಲಿ ಸುಮಾರು 35,000 ಕಾರ್ಮಿಕರು ಸೇವೆಯಲ್ಲಿದ್ದು, ಅವರಿಗೆ ಎದುರಾಗುತ್ತಿರುವ ಹಲವು ಕೊರತೆಗಳನ್ನು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನೇಮಕಾತಿ ಸಂದರ್ಭದಲ್ಲಿ ಭರವಸೆ ನೀಡಿದಂತೆ ಪ್ರತಿ ವರ್ಷ ವೇತನವನ್ನು ಪರಿಷ್ಕರಣೆ ಮಾಡಬೇಕು ಎಂಬುದು ನೌಕರರ ಮುಖ್ಯ ಬೇಡಿಕೆಯಾಗಿದೆ. 2017 ರಿಂದ 2022ರ ಅವಧಿಯಲ್ಲಿ ಯಾವುದೇ ವೇತನ ಹೆಚ್ಚಳವಾಗಿಲ್ಲದಿರುವುದರಿಂದ ನೌಕರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರೊಂದಿಗೆ 3 ಪಾಳಿಗಳಲ್ಲಿ ಅಂಬುಲೆನ್ಸ್ ವಾಹನದ ಸೌಕರ್ಯ ಒದಗಿಸುವುದು, ವಲಯವಾರು ವಿಂಗಡಣೆ ಮಾಡಿ ನಿಗದಿಪಡಿಸಿರುವ ವೇತನವನ್ನು ರದ್ದುಪಡಿಸಿ ಎಲ್ಲರಿಗೂ ಏಕರೂಪ ವೇತನ ಜಾರಿಗೊಳಿಸುವುದು ಹಾಗೂ ಜ್ಯೇಷ್ಠತೆಯ ಆಧಾರದ ಮೇಲೆ ವೇತನ ನಿಗದಿಪಡಿಸುವುದು ಅವರ ಇತರ ಪ್ರಮುಖ ನಿರೀಕ್ಷೆಗಳಾಗಿವೆ.

ಕಾರ್ಮಿಕ ಇಲಾಖೆಯ ನಿಯಮಾವಳಿಯಂತೆ ಪ್ರತಿ ತಿಂಗಳ 7ನೇ ತಾರೀಖಿನ ಒಳಗೆ ಬಾಕಿ ಇಲ್ಲದೆ ವೇತನ ಪಾವತಿಸಬೇಕು, ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಧನ ಒದಗಿಸಬೇಕು ಮತ್ತು ಎಲ್ಲಾ ಕೆಲಸದ ಸ್ಥಳಗಳಲ್ಲಿ ಶೌಚಾಲಯ, ವಿಶ್ರಾಂತಿ ಕೊಠಡಿ ಹಾಗೂ ಅಂಬುಲೆನ್ಸ್ ಸ್ವಚ್ಛಗೊಳಿಸಲು ಸೂಕ್ತ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.

ಈ ನಡುವೆ ನೌಕರರ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾದರೆ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್‌ ಎಚ್ಚರಿಕೆ ನೀಡಿದ್ದಾರೆ. ಚಾಲಕರಿಗೆ ಅಥವಾ ಸಿಬ್ಬಂದಿಗೆ ಏನಾದರೂ ಸಮಸ್ಯೆಗಳಿದ್ದರೆ ಅವರು ತಕ್ಷಣ ಸಂಬಂಧಪಟ್ಟ ಸೇವಾ ಸಂಸ್ಥೆಯೊಂದಿಗೆ ಮಾತುಕತೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಇನ್ಮೇಲೆ ಡೆಡ್ ಬಾಡಿ ಮೇಲೆ ಬಿಲ್ ವಸೂಲಿ ಬಂದ್ : ಮೃತದೇಹ ಹಸ್ತಾಂತರಕ್ಕೆ ಶೀಘ್ರ ಹೊಸ ಪಾಲಿಸಿ!ಬೆಂಗಳೂರಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ!BREAKING : ಖಾಸಗಿ ಆಸ್ಪತ್ರೆಗಳ ಕಳ್ಳಾಟಕ್ಕೆ ಬ್ರೇಕ್ : ಇನ್ಮುಂದೆ ರಶೀದಿಯಲ್ಲಿ ಔಷಧಗಳ ಬೆಲೆ ನಮೂದು ಕಡ್ಡಾಯ!🌺🌼🔱 ನವರಾತ್ರಿ ಮೊದಲನೇ ದಿನ – ಶ್ರೀ ಶೈಲಪುತ್ರಿ ದೇವಿ ಆರಾಧನೆ 🔱🌼🌺BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!