LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ 11 ಜಿಲ್ಲೆಗಳ 326 ಕೇಂದ್ರಗಳಲ್ಲಿ 1.29 ಲಕ್ಷ ಅಭ್ಯರ್ಥಿಗಳಿಗೆ ಕೆ-ಸೆಟ್ ಪರೀಕ್ಷೆ: ಕೆಇಎ ಕಟ್ಟುನಿಟ್ಟಿನ ನಿಗಾ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಅ.11) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ಒಟ್ಟು  37 ವಿವಿಧ ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಗೆ 1,29,212 ಮಂದಿ ಅರ್ಜಿ ಸಲ್ಲಿಸಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು ಉತ್ತರ & ದಕ್ಷಿಣ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ) 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಶನಿವಾರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲ 37 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 13 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆಯಲಿವೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆ ನಡೆಯಲಿದ್ದು, ಒಮ್ಮೆಗೇ ಎರಡೂ ಪತ್ರಿಕೆಗಳ (ಪತ್ರಿಕೆ 1 & 2) ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕಾಗುತ್ತದೆ. ಎರಡೂ ಪತ್ರಿಕೆಗಳಿಗೆ ಪ್ರತ್ಯೇಕ ಓಎಂಆರ್‌ ನೀಡುತ್ತಿದ್ದು, ಆಯಾಯ ಓಎಂಆರ್‌ ನಲ್ಲೇ ಅವುಗಳ ಉತ್ತರಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈ ಹಿಂದಿನ ಎಲ್ಲ ಪರೀಕ್ಷೆಗಳ ಹಾಗೆಯೇ ಈ ಪರೀಕ್ಷೆಗೂ ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳನ್ನು ಮುಖ ಚಹರೆ ಪತ್ತೆ ಮೂಲಕ ತೀವ್ರ ಶೋಧ ನಡೆಸಿಯೇ ಒಳ ಬಿಡಲಾಗುತ್ತದೆ. ಇದಕ್ಕೆ ಅಗತ್ಯ ಪೊಲೀಸ್‌ ಮತ್ತು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!