LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ ವಿಡಿಯೋ ಮಾಡಿ ಬ್ಲಾಕ್ ಮೇಲ್: 120 ಗ್ರಾಂ ಚಿನ್ನ ದೋಚಿದ್ದ ಇಬ್ಬರು ಅರೆಸ್ಟ್

ಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ ಅದನ್ನು ವಿಡಿಯೋ ಮಾಡಿಕೊಂಡು ಬ್ಲಾಕ್ ಮೇಲ್ ಮಾಡಿದ್ದಲ್ಲದೇ 120 ಗ್ರಾಂ ಚಿನ್ನ ದೋಚಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಕುಷ್ಟಗಿ ಠಾಣೆ ಪೊಲೀಸರು ಆರೋಪಿತರಾದ ಬಸವರಾಜ ಅಂಗಡಿ ಮತ್ತು ನವೀನ್ ಎಂಬುವರನ್ನು ಬಂಧಿಸಿದ್ದು, 120 ಗ್ರಾಂ ಚಿನ್ನ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಮೊದಲಿಗೆ ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿದ್ದಾರೆ. ನಂತರ ಅದನ್ನು ವಿಡಿಯೋ ಮಾಡಿಟ್ಟುಕೊಂಡು ವಿಡಿಯೋವನ್ನು ನಿನ್ನ ಪೋಷಕರಿಗೆ ತೋರಿಸುತ್ತೇವೆ ಎಂದು ಬೆದರಿಕೆ ಹಾಕಿ ಹಣಕ್ಕೆ ಬ್ಲಾಕ್ ಮೇಲ್ ಮಾಡಿದ್ದರು. ಆರೋಪಿಗಳ ಬೆದರಿಕೆಗೆ ಹೆದರಿದ್ದ ಬಾಲಕ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಒಂದೊಂದಾಗಿ ತೆಗೆದುಕೊಂಡು ಕೊಡುತ್ತಿದ್ದ ಸುಮಾರು 120 ಗ್ರಾಂ ಚಿನ್ನಾಭರಣಗಳನ್ನು ಬಾಲಕ ಆರೋಪಿಗಳಿಗೆ ನೀಡಿರುವುದು ತನಿಖೆಯಿಂದ ಗೊತ್ತಾಗಿದೆ.

ಮನೆಯಲ್ಲಿದ್ದ ಚಿನ್ನಾಭರಣಗಳು ಕಾಣೆಯಾದ ಬಗ್ಗೆ ಪೋಷಕರು ಕುಷ್ಟಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಕುಷ್ಟಗಿ ಪೊಲೀಸರ ಕಾರ್ಯವನ್ನು ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಶ್ಲಾಘಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!