LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಿರಿಯೂರಲ್ಲಿ ಇಸ್ಪಿಟ್ ಅಡ್ಡೆಯ ಮೇಲೆ ಪೊಲೀಸರ ಭರ್ಜರಿ ದಾಳಿ; 13 ಮಂದಿ ಅರೆಸ್ಟ್, ₹3.36 ಲಕ್ಷ ನಗದು ಜಪ್ತು

ಹಿರಿಯೂರು: ತಾಲೂಕಿನ ಲಕ್ಕವ್ವನಹಳ್ಳಿ ರಸ್ತೆಯ ಸಮೀಪವಿರುವ ಜಮೀನೊಂದರಲ್ಲಿ ಕಾನೂನುಬಾಹಿರವಾಗಿ ನಡೆಯುತ್ತಿದ್ದ ಜೂಜಾಟದ ಅಡ್ಡಡೆಯ ಮೇಲೆ ದಾಳಿ ನಡೆಸಿದ ಪೊಲೀಸರು, 13 ಮಂದಿಯನ್ನು ದಸ್ತಗಿರಿ ಮಾಡಿ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಘಟನೆಯ ವಿವರ ಹಾಗೂ ಬಂಧಿತರ ಮಾಹಿತಿ

ಸೆಪ್ಟೆಂಬರ್ 19ರಂದು ಬೆಳಿಗ್ಗೆ ಲಕ್ಕವ್ವನಹಳ್ಳಿ ರಸ್ತೆಯ ಜಾಲಿಗಿಡಗಳಿದ್ದ ಜಮೀನಿನಲ್ಲಿ ಅಂದರ್-ಬಹರ್ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಚಿತ್ರಲಿಂಗೇಶ್ವರ, ರವಿಕುಮಾರ್, ಸೋಮಶೇಖರ, ನಾಗೇಂದ್ರಪ್ಪ, ಶಿವಣ್ಣ, ಹನುಮಂತಪ್ಪ, ಬೋರಯ್ಯ, ಮಂಜುನಾಥ, ಚಂದ್ರಣ್ಣ, ನರಸೇಗೌಡ, ಸಿದ್ದೇಶ, ಮೇಘರಾಜಸಿಂಗ್ ಹಾಗೂ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಮೂಲದ ವೀರಣ್ಣ ವೈ.ಎಸ್. ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಹಿರಿಯೂರು ಟೌನ್ ಮೂಲದ ಅಭಿಪಾಟೀಲ್ ಎಂಬಾತ ಪರಾರಿಯಾಗಿದ್ದು, ಆತನ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ನಗದು ಹಾಗೂ ವಾಹನಗಳು ಜಪ್ತಿ

ಕಾರ್ಯಾಚರಣೆ ವೇಳೆ ಜೂಜು ಅಡ್ಡಡೆಯಲ್ಲಿದ್ದ 3.36 ಲಕ್ಷ ರೂಪಾಯಿ ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಇದರ ಜೊತೆಗೆ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ 4 ದ್ವಿಚಕ್ರ ವಾಹನಗಳು ಹಾಗೂ ಸುಮಾರು 1 ಲಕ್ಷ ರೂಪಾಯಿ ಮೌಲ್ಯದ 10 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ತಂಡದ ಭರ್ಜರಿ ಕಾರ್ಯಾಚರಣೆ

ಚಿತ್ರದುರ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಆರ್. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ರೂಪಿಸಲಾಗಿತ್ತು. ಹಿರಿಯೂರು ಉಪವಿಭಾಗದ ಡಿಎಸ್‌ಪಿ ಟಿ. ಎಂ. ಶಿವಕುಮಾರ್ ನೇತೃತ್ವದಲ್ಲಿ, ಡಿಎಆರ್ ಇನ್‌ಸ್ಪೆಕ್ಟರ್ ಮಹಮ್ಮದ್ ಸಿರಾಜ್, ಸಿಬ್ಬಂದಿಗಳು ಹಾಗೂ ಹಿರಿಯೂರು ನಗರ ಠಾಣೆಯ ಸಿಬ್ಬಂದಿಯನ್ನು ಒಳಗೊಂಡ ವಿಶೇಷ ತಂಡ ಈ ದಾಳಿಯನ್ನು ಯಶಸ್ವಿಯಾಗಿ ನಡೆಸಿದೆ. ಜೂಜುಕೋರರನ್ನು ಸೆರೆಹಿಡಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!