LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಮಾಜಿಕ ಜಾಲತಾಣದಲ್ಲಿ ಬ್ಲಾಕ್ ; 13,300 ಕಿಲೋಮೀಟರ್ ಪಯಣಿಸಿದ ಭಾರತೀಯ ಯುವಕ ಅಂದರ್‌ !

ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ಬ್ಲಾಕ್ ಮಾಡಿದ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಭೇಟಿಯಾಗಲು ಭಾರತದ ಮುಂಬೈನಿಂದ ಅಮೆರಿಕದ ಉತ್ತರ ಕೆರೊಲಿನಾಗೆ ಸುಮಾರು 13,374 ಕಿಲೋಮೀಟರ್ ಪ್ರಯಾಣ ಬೆಳೆಸಿದ್ದ 31 ವರ್ಷದ ಯುವಕನನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಮುಂಬೈ ಮೂಲದ ಪ್ರೀತ್ ಪಂಕಜ್ ಜೈನ್ ಎಂದು ಗುರುತಿಸಲಾಗಿದೆ. ಈ ಘಟನೆಯು ಸೆಪ್ಟೆಂಬರ್ 24, 2026 ರಂದು ನಡೆದಿದ್ದು, ಡೇವಿಡ್ಸನ್ ಕೌಂಟಿ ಶರೀಫ್ ಕಚೇರಿಯು ಈ ಕುರಿತು ಸೆಪ್ಟೆಂಬರ್ 29 ರಂದು ಅಧಿಕೃತವಾಗಿ ಮಾಹಿತಿ ಹೊರಹಾಕಿದೆ.

ಟ್ಯಾಕ್ಸಿ ಚಾಲಕನ ಸಮಯಪ್ರಜ್ಞೆ

ಆರೋಪಿ ಪ್ರೀತ್ ಪಂಕಜ್ ಜೈನ್, ಬಾಲಕಿಯ ಮನೆಗೆ ತಲುಪಲು ಖಾಸಗಿ ಟ್ಯಾಕ್ಸಿ ಬುಕ್ ಮಾಡಿಕೊಂಡು ತೆರಳುತ್ತಿದ್ದನು. ಪ್ರಯಾಣದ ವೇಳೆಯಲ್ಲಿ ಆತನ ನಡವಳಿಕೆ ಹಾಗೂ ಆತನ ಉದ್ದೇಶದ ಬಗ್ಗೆ ಟ್ಯಾಕ್ಸಿ ಚಾಲಕನಿಗೆ ಅನುಮಾನ ವ್ಯಕ್ತವಾಗಿದೆ. ಆತ ಅಪ್ರಾಪ್ತ ಬಾಲಕಿಯೊಬ್ಬಳನ್ನು ಬೆನ್ನಟ್ಟುತ್ತಿದ್ದಾನೆ ಎಂಬ ಶಂಕೆ ವ್ಯಕ್ತಪಡಿಸಿದ ಚಾಲಕ, ತಕ್ಷಣವೇ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.

ಪೋಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಜೈನ್ ಬಾಲಕಿಯ ಮನೆಯ ಬಳಿ ತಲುಪಿದ್ದನು. ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆನ್‌ಲೈನ್‌ನಲ್ಲಿ ಪರಿಚಯವಾದ ತನ್ನ ಗೆಳತಿಗೆ ಉಡುಗೊರೆ ನೀಡಲು ಬಂದಿರುವುದಾಗಿ ಹೇಳಿಕೊಂಡಿದ್ದಾನೆ. ಆದರೆ, ಪೊಲೀಸರು ಆತನ ಹೇಳಿಕೆಯನ್ನು ಪರಿಶೀಲಿಸಿದಾಗ ಆಕೆ ಅಪ್ರಾಪ್ತೆ ಎಂಬ ವಿಷಯ ಬೆಳಕಿಗೆ ಬಂದಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಮೊಬೈಲ್ ಫೋರೆನ್ಸಿಕ್ ತನಿಖೆಯಲ್ಲಿ ಬಯಲಾದ ಸತ್ಯ

ಅನುಮಾನಗೊಂಡ ಪೊಲೀಸರು ಆರೋಪಿಯ ಮೊಬೈಲ್ ಫೋನ್ ಅನ್ನು ವಿಧಿವಿಜ್ಞಾನ ತನಿಖೆಗೆ (ಫೋರೆನ್ಸಿಕ್ ಪರೀಕ್ಷೆ) ಒಳಪಡಿಸಿದ್ದಾರೆ. ಈ ವೇಳೆ ಆತ ಕಳೆದ 2 ವರ್ಷಗಳಿಂದ ಸ್ನಾಪ್‌ಚಾಟ್, ಇನ್‌‌ಸ್ಟಾಗ್ರಾಮ್ ಹಾಗೂ ಫೇಸ್‌ಬುಕ್ ಮೂಲಕ ಆ ಬಾಲಕಿಯೊಂದಿಗೆ ಸಂವಹನ ನಡೆಸುತ್ತಿದ್ದುದು ಪತ್ತೆಯಾಗಿದೆ. ಆರಂಭದಲ್ಲಿ ತನ್ನ ನಿಜವಾದ ವಯಸ್ಸನ್ನು ಮರೆಮಾಚಿ, ತಾನೂ ಕೂಡ ಅಪ್ರಾಪ್ತ ಎಂದು ನಂಬಿಸಿ ಸ್ನೇಹ ಬೆಳೆಸಿದ್ದನು. ಆದರೆ ಕೆಲವೇ ದಿನಗಳಲ್ಲಿ ಆತನ ನಿಜವಾದ ವಯಸ್ಸು ತಿಳಿದಾಗ ಬಾಲಕಿಯು ಆತನೊಂದಿಗಿನ ಸಂಪರ್ಕವನ್ನು ಕಡಿತಗೊಳಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಬ್ಲಾಕ್ ಮಾಡಿದ್ದಳು.

ನ್ಯಾಯಾಲಯದಿಂದ ಜಾಮೀನು ರಹಿತ ಬಂಧನ

ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಪ್ರೀತ್ ಪಂಕಜ್ ಜೈನ್ ವಿರುದ್ಧ ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್‌ಮೇಲ್ ಸೇರಿದಂತೆ ವಿವಿಧ ಕಠಿಣ ಕಾಯ್ದೆಗಳಡಿ ದೂರು ದಾಖಲಿಸಿಕೊಂಡಿದ್ದಾರೆ. ಸೆಪ್ಟೆಂಬರ್ 25, 2026 ರಂದು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಧೀಶರು ಆತನಿಗೆ ಜಾಮೀನು ರಹಿತ ಬಂಧನ ವಿಧಿಸಿ ಆದೇಶಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆ ಅಕ್ಟೋಬರ್ 6, 2026 ರಂದು ನಡೆಯಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!