LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಅವಘಡ: 137 ವರ್ಷದಷ್ಟು ಹಳೆಯ ಗಡಿಯಾರ ಗೋಪುರ ಕುಸಿತ

ತಿರುವನಂತಪುರಂ: ಭಾರಿ ಮಳೆಯಿಂದಾಗಿ ಕೋಝಿಕ್ಕೋಡ್ ರೈಲು ನಿಲ್ದಾಣದಲ್ಲಿ ಅವಘಡವೊಂದು ಸಂಭವಿಸಿದೆ. ನವೀಕರಣ ಕಾರ್ಯ ನಡೆಯುತ್ತಿರುವಾಗ 137 ವರ್ಷಗಳಷ್ಟು ಹಳೆಯದಾದ ಗಡಿಯಾರ ಗೋಪುರ ಕುಸಿದು ಬಿದ್ದಿದ್ದು, ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿದೆ.

ಕೋಝಿಕ್ಕೋಡ್ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿರುವ 137 ವರ್ಷದ ಹಳೆಯ ಗಡಿಯಾರ ಗೋಪುರ ಕುಸಿದಿದೆ. ಪರಿಣಾಮ ಹಲವು ರೈಲು ಸೇವೆಗಳ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.

ಹಳೆಯ ರಚನೆಯು, ನಿಲ್ದಾಣದ ನವೀಕರಣ ಯೋಜನೆಯ ಭಾಗವಾಗಿ ಪುನರಾಭಿವೃದ್ಧಿ ಕಾರ್ಯ ನಡೆಯುತ್ತಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಹತ್ತಿರದ ರೈಲ್ವೆ ಹಳಿಗೆ ಅಪ್ಪಳಿಸಿದೆ. ಐಕಾನಿಕ್ ಗಡಿಯಾರ ಗೋಪುರವು ಕುಸಿದು ಬೀಳುವ ಮೊದಲು ಎರಡು ಹೋಳಾಗಿದೆ. ಅವಶೇಷಗಳು ಮೂರನೇ ರೈಲ್ವೆ ಮಾರ್ಗ ಮತ್ತು ಪ್ಲಾಟ್‌ಫಾರ್ಮ್‌ನ ಕೆಲವು ಭಾಗಗಳ ಮೇಲೆ ಬಿದ್ದಿವೆ.

ಘಟನೆಯ ಸಮಯದಲ್ಲಿ ಮೂರನೇ ಹಳಿಯಲ್ಲಿ ರೈಲು ನಿಂತಿತ್ತು. ಅದೃಷ್ಟವಶಾತ್‌ ಕುಸಿದ ರಚನೆಯ ಕೆಲವು ಭಾಗಗಳು ನೇರವಾಗಿ ಬೋಗಿಗಳ ಮೇಲೆ ಬಿದ್ದಿಲ್ಲ. ಬದಲಾಗಿ ಪಕ್ಕದಲ್ಲಿ ಬಿದ್ದಿವೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಸುತ್ತಮುತ್ತ ಯಾವುದೇ ಪ್ರಯಾಣಿಕರು ಇಲ್ಲದ ಸಮಯದಲ್ಲಿ ಈ ಘಟನೆ ಸಂಭವಿಸಿರುವುದರಿಂದ ಭಾರಿ ಅನಾಹುತ ತಪ್ಪಿದೆ ಎಂದಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!