LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆಟವಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು 14 ವರ್ಷದ ಬಾಲಕಿ ದುರಂತ ಸಾವು ಹೃದಯಾಘಾತದ ಶಂಕೆ

ಗಾಂಧಿನಗರ: ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಇಡೀ ದೇಶವೇ ಕಣ್ಣೀರು ಹಾಕುವಂತಹ ಅತ್ಯಂತ ಕರುಣಾಜನಕ ಹಾಗೂ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಹೋಟೆಲ್‌ನಲ್ಲಿ ಕುಟುಂಬಸ್ಥರೊಂದಿಗೆ ಸಂತೋಷದಿಂದ ಊಟ ಮುಗಿಸಿ, ಮಕ್ಕಳೊಂದಿಗೆ ನಗುನಗುತ್ತಾ ಆಟವಾಡುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ನೆಲಕ್ಕೆ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಈ ದುರಂತ ಸ್ಥಳೀಯವಾಗಿ ತೀವ್ರ ದಿಗ್ಭ್ರಮೆ ಮತ್ತು ವಿಷಾದವನ್ನು ಉಂಟುಮಾಡಿದೆ.

ಗುಜರಾತ್‌ನ ಜಾಮ್‌ನಗರ ಮೂಲದ ನಿವಾಸಿ ಆನಂದಿ ಮೋದಿ (14) ಮೃತಪಟ್ಟ ದುರ್ದೈವಿ ಬಾಲಕಿ. ಶಾಲೆಗಳಿಗೆ ಬೇಸಿಗೆ ರಜೆ ಇದ್ದ ಕಾರಣ, ಆನಂದಿ ರಾಜ್‌ಕೋಟ್‌ನಲ್ಲಿರುವ ತನ್ನ ಮಾವನ ಮನೆಗೆ ರಜೆ ಕಳೆಯಲು ಅತ್ಯಂತ ಖುಷಿಯಿಂದ ಬಂದಿದ್ದಳು. ಆದರೆ ವಿಧಿಯ ಆಟವೇ ಬೇರೆಯಾಗಿತ್ತು.

ಭಾನುವಾರ ಸಂಜೆ ಆನಂದಿ ಹಾಗೂ ಆಕೆಯ ಕುಟುಂಬಸ್ಥರು ರಾಜ್‌ಕೋಟ್‌ನ ಹೋಟೆಲೊಂದಕ್ಕೆ ರಾತ್ರಿಯ ಭೋಜನಕ್ಕಾಗಿ ತೆರಳಿದ್ದರು. ಎಲ್ಲರೂ ಒಟ್ಟಾಗಿ ಊಟ ಮುಗಿಸಿದ ಬಳಿಕ, ಹೋಟೆಲ್ ಆವರಣದಲ್ಲಿ ಆನಂದಿ ತನ್ನ ಕುಟುಂಬದ ಇತರ ಮಕ್ಕಳೊಂದಿಗೆ ಅತ್ಯಂತ ಉತ್ಸಾಹದಿಂದ ಆಟವಾಡಲು ಪ್ರಾರಂಭಿಸಿದ್ದಾಳೆ. ಆದರೆ, ಆಟದ ಮೂಡ್‌ನಲ್ಲಿದ್ದ ಬಾಲಕಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಜಾರಿ ಬಿದ್ದಿದ್ದಾಳೆ.

ಬಾಲಕಿ ದಿಢೀರನೆ ನೆಲಕ್ಕೆ ಬಿದ್ದಿದ್ದನ್ನು ಕಂಡು ಆತಂಕಗೊಂಡ ಕುಟುಂಬಸ್ಥರು ಮತ್ತು ಹೋಟೆಲ್ ಸಿಬ್ಬಂದಿ ತಕ್ಷಣವೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಬಾಲಕಿಯ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು. ವೈದ್ಯರು ತಕ್ಷಣವೇ ಚಿಕಿತ್ಸೆ ಆರಂಭಿಸಿದರಾದರೂ, ಯಾವುದೇ ಫಲಪ್ರದವಾಗದೆ ಆ ಪುಟ್ಟ ಬಾಲಕಿ ಕೊನೆಯುಸಿರೆಳೆದಿದ್ದಾಳೆ. ರಜೆ ಕಳೆಯಲು ಬಂದ ಮಗಳು ಹೆಣವಾಗಿ ಬದಲಾಗಿದ್ದನ್ನು ಕಂಡು ಹೆತ್ತ ಕರುಳು ಆಕ್ರಂದನ ಮುಗಿಲು ಮುಟ್ಟಿದೆ.

ಮಕ್ಕಳಿಗೂ ಕಾಡುತ್ತಿದೆಯೇ ಹೃದಯಾಘಾತ?

ವೈದ್ಯರ ಪ್ರಾಥಮಿಕ ವರದಿಗಳ ಪ್ರಕಾರ, ಇಷ್ಟು ಚಿಕ್ಕ ವಯಸ್ಸಿನ ಬಾಲಕಿಯ ದಿಢೀರ್ ಸಾವಿಗೆ ಹೃದಯಾಘಾತ (Heart Attack) ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಸಣ್ಣ ವಯಸ್ಸಿನ ಮಕ್ಕಳಲ್ಲೂ ಇಂತಹ ಹೃದಯಾಘಾತದ ಪ್ರಕರಣಗಳು ಹೆಚ್ಚುತ್ತಿರುವುದು ಪೋಷಕರಲ್ಲಿ ಭಾರಿ ಕಳವಳ ಮೂಡಿಸಿದೆ. ಪ್ರಸ್ತುತ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!