LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮೈಸೂರು ದಸರಾಕ್ಕೆ 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ: ಸಚಿವ ಕೆ.ಜೆ. ಜಾರ್ಜ್

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ-2026ರ ಅಂಗವಾಗಿ ಈ ಬಾರಿ ಮೈಸೂರು ನಗರವನ್ನು ಇನ್ನಷ್ಟು ಆಕರ್ಷಕವಾಗಿ ಕಂಗೊಳಿಸಲು ಒಟ್ಟು 146 ಕಿ.ಮೀ. ರಸ್ತೆ ವ್ಯಾಪ್ತಿಯಲ್ಲಿ ಭವ್ಯ ವಿದ್ಯುತ್ ದೀಪಾಲಂಕಾರ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ನಗರದ 199 ರಸ್ತೆಗಳು, 123 ವೃತ್ತಗಳು ಹಾಗೂ 80 ವಿವಿಧ ಪ್ರತಿಕೃತಿಗಳಿಗೆ ವಿಶೇಷ ವಿನ್ಯಾಸದ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ದೀಪಾಲಂಕಾರ ವ್ಯವಸ್ಥೆ ಅಕ್ಟೋಬರ್ 11ರಿಂದ ಅಕ್ಟೋಬರ್ 31ರವರೆಗೆ ಒಟ್ಟು 21 ದಿನಗಳ ಕಾಲ ಕಾರ್ಯನಿರ್ವಹಿಸಲಿದೆ.

ಈ ಬಾರಿ ದಸರಾ ದೀಪಾಲಂಕಾರದ ಜೊತೆಗೆ 3,500 ಎಲ್‌ಇಡಿ ಡ್ರೋನ್‌ಗಳನ್ನು ಬಳಸಿ ನಾಲ್ಕು ದಿನ ವಿಶೇಷ ಡ್ರೋನ್ ಪ್ರದರ್ಶನ ಆಯೋಜಿಸಲು ಯೋಜಿಸಲಾಗಿದೆ. ಅಕ್ಟೋಬರ್ 17, 18, 20 ಮತ್ತು 21ರಂದು ರಾತ್ರಿ 8 ಗಂಟೆಗೆ ಡ್ರೋನ್ ಪ್ರದರ್ಶನ ನಡೆಯಲಿದೆ.

3,500 ಡ್ರೋನ್‌ಗಳನ್ನು ಏಕಕಾಲದಲ್ಲಿ ಬಳಸಿಕೊಂಡು ರಾಷ್ಟ್ರಪಕ್ಷಿ ನವಿಲಿನ ಬೃಹತ್ ಆಕೃತಿಯನ್ನು ಆಕಾಶದಲ್ಲಿ ಮೂಡಿಸಿ ಗಿನ್ನಿಸ್ ದಾಖಲೆಗೆ ಪ್ರಯತ್ನಿಸುವ ಯೋಜನೆಯೂ ಈ ಬಾರಿಯ ಪ್ರಮುಖ ಆಕರ್ಷಣೆಯಾಗಲಿದೆ.

“ಮೈಸೂರು ದಸರಾ ಕೇವಲ ಸಾಂಸ್ಕೃತಿಕ ಉತ್ಸವವಲ್ಲ; ಕರ್ನಾಟಕದ ಪರಂಪರೆ ಮತ್ತು ಪ್ರವಾಸೋದ್ಯಮವನ್ನು ದೇಶ-ವಿದೇಶಕ್ಕೆ ಪರಿಚಯಿಸುವ ದೊಡ್ಡ ವೇದಿಕೆಯಾಗಿದೆ. ಈ ಬಾರಿ ದೀಪಾಲಂಕಾರವನ್ನು ಮತ್ತಷ್ಟು ವಿಶಾಲ ಮತ್ತು ಆಕರ್ಷಕವಾಗಿ ರೂಪಿಸಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳು, ವೃತ್ತಗಳು ಮತ್ತು ಪ್ರತಿಕೃತಿಗಳೊಂದಿಗೆ ಡ್ರೋನ್ ಪ್ರದರ್ಶನವೂ ಪ್ರವಾಸಿಗರಿಗೆ ವಿಭಿನ್ನ ಅನುಭವ ನೀಡಲಿದೆ,” ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

“ದಸರಾಕ್ಕೆ ಬರುವ ಪ್ರವಾಸಿಗರು ಹಗಲಿನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ರಾತ್ರಿ ವೇಳೆ ಮೈಸೂರಿನ ದೀಪಾಲಂಕಾರದ ವೈಭವವನ್ನೂ ಅನುಭವಿಸಬೇಕು. ಸುರಕ್ಷತೆ, ವಿದ್ಯುತ್ ಪೂರೈಕೆ ಮತ್ತು ವ್ಯವಸ್ಥಿತ ನಿರ್ವಹಣೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ,” ಎಂದು ಅವರು ತಿಳಿಸಿದರು.

ದಸರಾ ದೀಪಾಲಂಕಾರಕ್ಕಾಗಿ ತಾತ್ಕಾಲಿಕವಾಗಿ 3,106 ಕೆವಿಎ ವಿದ್ಯುತ್ ಭಾರ ವ್ಯವಸ್ಥೆ ಮಾಡಲಾಗಿದ್ದು, ಒಟ್ಟು 2,60,920 ಯೂನಿಟ್ ವಿದ್ಯುತ್ ಬಳಕೆ ಅಂದಾಜಿಸಲಾಗಿದೆ. ದೀಪಾಲಂಕಾರ ಕಾಮಗಾರಿಗೆ ₹250 ಲಕ್ಷ ಅಂದಾಜು ವೆಚ್ಚ ನಿಗದಿಪಡಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!