LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅ.15ರಂದು ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಉದ್ಘಾಟನೆ, ಅ.11ರಿಂದ ಕಾವೇರಿ ಆರತಿ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಅಕ್ಟೋಬರ್ 15ರಂದು ನಟ ವಿ.ರವಿಚಂದ್ರನ್ ಅವರು ಉದ್ಘಾಟಿಸಲಿದ್ದು, ಅ.11ರಂದು ಕೆಆರ್‌ಎಸ್‌ ಜಲಾಶಯದ ಸಮೀಪ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ನಗರದ ಜಿ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣ ದಸರಾವು ಈ ಬಾರಿಯೂ ಸಂಪ್ರದಾಯಬದ್ಧವಾಗಿ ನಡೆಯಲಿದೆ ಎಂದರು.

ಶ್ರೀರಂಗಪಟ್ಟಣ ದಸರಾ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದರೂ, ಸಾಂಸ್ಕೃತಿಕ ಪರಂಪರೆಯ ಪ್ರತೀಕವಾದ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಗಳಲ್ಲಿ ಯಾವುದೇ ಕಡಿತ ಮಾಡುವುದಿಲ್ಲ. ಸ್ಥಳೀಯ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಲು ಮೈಸೂರು ಮಾದರಿಯಲ್ಲೇ ದಸರಾ ಆರಂಭಕ್ಕೂ ಎರಡು ದಿನ ಮುನ್ನ 'ಯುವ ಸಂಭ್ರಮ' ಕಾರ್ಯಕ್ರಮ ನಡೆಯಲಿದೆ. ಅಕ್ಟೋಬರ್ 12 ಮತ್ತು 13 ರಂದು ಯುವ ಸಂಭ್ರಮ ಹಾಗೂ ಅಕ್ಟೋಬರ್ 15 ರಿಂದ 18ರ ವರೆಗೆ ದಸರಾ ಮಹೋತ್ಸವ ನಡೆಯಲಿದೆ ಎಂದು ವಿವರಿಸಿದರು.

ಕಾವೇರಿ ಆರತಿ ಆರು ದಿನ

ಶ್ರೀರಂಗಪಟ್ಟಣದ ಕೆಆರ್‌ಎಸ್‌ ಜಲಾಶಯದ ಬಳಿ ಅಕ್ಟೋಬರ್ 11ರಿಂದ ಆರಂಭವಾಗಲಿರುವ ಕಾವೇರಿ ಆರತಿಯನ್ನು ಮುಖ್ಯಮಂತ್ರಿಗಳೇ ಉದ್ಘಾಟಿಸಲಿದ್ದು, ಒಟ್ಟು 6 ದಿನಗಳ ಕಾಲ ಕಾರ್ಯಕ್ರಮ ಜರುಗಲಿದೆ.

ಕಳೆದ ವರ್ಷ ಮೊದಲ ಬಾರಿಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಆರಂಭಿಸಲಾಗಿತ್ತು. ಇಂತಹ ಸಾಂಪ್ರದಾಯಿಕ ಆಚರಣೆಗಳು ನಿಲ್ಲಬಾರದು ಹಾಗೂ ನಾಡಿನ ಸಂಸ್ಕೃತಿಯನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವರು ವಿವರಿಸಿದರು.

ಸುದ್ದಿಗೋಷ್ಠಿಗೂ ಮುನ್ನ ಸಚಿವರೊಟ್ಟಿಗೆ ವೇದಿಕೆ ಗಣ್ಯರು ಶ್ರೀರಂಗಪಟ್ಟಣ ದಸರಾದ ಲೋಗೋ ಬಿಡುಗಡೆಗೊಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಂಡ್ಯ ಶಾಸಕ ರವಿ ಗಾಣಿಗ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಕಾವೇರಿ ನೀರಾವರಿ ನಿಗಮದ ಎಂಡಿ ಮಹೇಶ್, ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ, ಜಿ.ಪಂ. ಸಿಇಒ ನಂದಿನಿ ಇತರರಿದ್ದರು.

ಲೋಗೋ ವಿಶೇಷಗಳೇನು?

ಲೋಗೋದ ಮೇಲ್ಭಾಗದಲ್ಲಿ ಭವ್ಯವಾದ, ಚಿನ್ನದ ಬಣ್ಣದ ಕಲಾತ್ಮಕ ಗೋಪುರವಿದೆ. ಇದು ಶ್ರೀರಂಗಪಟ್ಟಣದ ಐತಿಹಾಸಿಕ ಶ್ರೀ ರಂಗನಾಥಸ್ವಾಮಿ ದೇವಾಲಯದ ಪ್ರಾಮುಖ್ಯತೆಯನ್ನು ಬಿಂಬಿಸುತ್ತದೆ.

ಗೋಪುರದ ಕೆಳಗೆ ಮತ್ತು ವೃತ್ತದ ಮೇಲ್ಭಾಗದಲ್ಲಿ "416ನೇ" ಎಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಇದು ಶ್ರೀರಂಗಪಟ್ಟಣ ದಸರಾ ಉತ್ಸವವು ತನ್ನ 416ನೇ ವರ್ಷದ ಐತಿಹಾಸಿಕ ಆಚರಣೆಯಲ್ಲಿದೆ ಎಂಬುದನ್ನು ಸೂಚಿಸುತ್ತದೆ.

ಲೋಗೋದ ಮಧ್ಯಭಾಗದಲ್ಲಿ ಕಡು ಹಸಿರು ಬಣ್ಣದ ಹಿನ್ನೆಲೆಯಿರುವ ವೃತ್ತಾಕಾರದ ವಿನ್ಯಾಸವಿದೆ. ಇದರೊಳಗೆ ಚಿನ್ನದ ಬಣ್ಣದಲ್ಲಿ ಸುಂದರವಾಗಿ ಅಲಂಕೃತಗೊಂಡ ಆನೆ ಮತ್ತು ಅದರ ಮೇಲಿರುವ ಜಂಬೂಸವಾರಿ ಅಂಬಾರಿಯ ಚಿತ್ರಣವಿದೆ. ಆನೆಯನ್ನು ಮುನ್ನಡೆಸುತ್ತಿರುವ ಮಾವುತನನ್ನೂ ಇದರಲ್ಲಿ ಕಾಣಬಹುದು.

ಕೇಂದ್ರ ವೃತ್ತದ ಸುತ್ತಲೂ ಕೆಂಪು ಮತ್ತು ಚಿನ್ನದ ಬಣ್ಣದ ಸಾಂಪ್ರದಾಯಿಕ ವಿನ್ಯಾಸದ ಅಂಚು (Border) ಇದೆ. ಇದರ ಎರಡೂ ಬದಿಗಳಲ್ಲಿ ರಾಜಮನೆತನದ ಶೈಲಿಯ ಚಿನ್ನದ ಕಂಬಗಳು/ಕಳಸಗಳು ಮತ್ತು ಹಸಿರು ಎಲೆಗಳ ಕಲಾಕೃತಿಯನ್ನು ಅಳವಡಿಸಲಾಗಿದೆ.
ಕೆಳಭಾಗದಲ್ಲಿ ಕಡು ಕೆಂಪು (ಮರೂನ್) ಬಣ್ಣದ ಆಕರ್ಷಕ ನಾಮಫಲಕವಿದೆ. ಇದರಲ್ಲಿ ಮೇಲ್ಭಾಗದಲ್ಲಿ "ಶ್ರೀರಂಗಪಟ್ಟಣ" ಎಂದು ಬಿಳಿ ಅಕ್ಷರಗಳಲ್ಲಿ ಬರೆಯಲಾಗಿದೆ. ಮಧ್ಯದಲ್ಲಿ "ದಸರಾ" ಎಂಬ ಪದವನ್ನು ಬಹಳ ಎದ್ದು ಕಾಣುವಂತೆ 3D ಶೈಲಿಯ ದೊಡ್ಡ ಚಿನ್ನದ ಅಕ್ಷರಗಳಲ್ಲಿ ವಿನ್ಯಾಸಗೊಳಿಸಲಾಗಿದೆ.

ಈ ಲೋಗೋವು ಶ್ರೀರಂಗಪಟ್ಟಣದ ಸಾಂಸ್ಕೃತಿಕ ಪರಂಪರೆ, ರಾಜಮನೆತನದ ಗತ್ತು ಮತ್ತು ನಾಡಹಬ್ಬ ದಸರಾದ ವೈಭವವನ್ನು ಚಿನ್ನ, ಕಡು ಹಸಿರು ಮತ್ತು ಕೆಂಪು ಬಣ್ಣಗಳ ಸಂಯೋಜನೆಗೊಂಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!