LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸನ : ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಡಿಜೆ ಬಳಕೆ ಆರೋಪ : 15 ಜನರ ವಿರುದ್ಧ FIR ದಾಖಲು!

ಹಾಸನ: ನಗರದ ಸಾಹಿತ್ಯ ಪರಿಷತ್ ಭವನದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ವಿಸರ್ಜನೆ ಮೆರವಣಿಗೆಯಲ್ಲಿ ನಿಯಮ ಮೀರಿ ಡಿಜೆ (DJ) ಬಳಸಿದ ಆರೋಪದ ಹಿನ್ನೆಲೆಯಲ್ಲಿ, ಆಯೋಜಕರು ಸೇರಿದಂತೆ ಒಟ್ಟು 15 ಜನರ ವಿರುದ್ಧ ಹಾಸನ ನಗರ ಪೊಲೀಸ್ ಠಾಣೆಯಲ್ಲಿ ನಾಲ್ಕು ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿವೆ. ಸೆಪ್ಟೆಂಬರ್ 23 ರಂದು ನಡೆದ ಗಣಪತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಶಬ್ದ ಮಾಲಿನ್ಯ ಮತ್ತು ಸರ್ಕಾರಿ ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಈ ಕ್ರಮ ಕೈಗೊಳ್ಳಲಾಗಿದೆ.

ಹಾಸನ ನಗರ ಠಾಣೆಯ ಪಿಎಸ್‌ಐ ಪ್ರಿಯಾಂಕ ಸರೋಜಾಬಾಯಿ ಹಾಗೂ ಪೊಲೀಸ್ ಸಿಬ್ಬಂದಿಗಳಾದ (ಪಿಸಿ) ಹರೀಶ್ ಮತ್ತು ಪತೇಶ್ ನೀಡಿದ ದೂರುಗಳನ್ನು ಆಧರಿಸಿ ಈ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸುಪ್ರೀಂ ಕೋರ್ಟ್ ಹಾಗೂ ಜಿಲ್ಲಾಡಳಿತದ ಮಾರ್ಗದರ್ಶಿ ಸೂತ್ರಗಳನ್ನು ಮೀರಿ ಗಣಪತಿ ವಿಸರ್ಜನೆ ವೇಳೆ ಅತಿಯಾದ ಸೌಂಡ್‌ನೊಂದಿಗೆ ಡಿಜೆ ಧ್ವನಿವರ್ಧಕ ಬಳಸಿದ್ದೇ ಪ್ರಕರಣ ದಾಖಲಾಗಲು ಮುಖ್ಯ ಕಾರಣವಾಗಿದೆ. ಸದ್ಯ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!