LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈತರೇ ಗಮನಿಸಿ : ಮೇ.17 ರ ಮಧ್ಯರಾತ್ರಿಯಿಂದ ಬೇಸಿಗೆ ಹಂಗಾಮಿನ ನೀರು ಬಂದ್

ಶಿವಮೊಗ್ಗ; ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ಕಾಲುವೆಗಳಲ್ಲಿ ಮೇ.17ರವರೆಗೆ ಹೆಚ್ಚುವರಿಯಾಗಿ ನೀರು ಹರಿಸುತ್ತಿದ್ದು, ಮೇ 17 ರ ಮಧ್ಯರಾತ್ರಿಯಿಂದ ನಿಲ್ಲಿಸಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಭದ್ರಾ ಜಲಾಶಯದಲ್ಲಿ ಕುಡಿಯುವ ನೀರು ಶೇಖರಣೆ ಮಾತ್ರ ಉಳಿದಿದ್ದು, ಹೆಚ್ಚುವರಿಯಾಗಿ ಬೆಳೆಗಳಿಗೆ ನೀರನ್ನು ಹರಿಸಲು ಜಲಾಶಯದಲ್ಲಿ ನೀರಿನ ಲಭ್ಯತೆ ಇರುವುದಿಲ್ಲ. ಅಚ್ಚುಕಟ್ಟು ಭಾಗದ ಎಲ್ಲಾ ರೈತರುಗಳು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಿದೆ.

ತಾಳೆಗರಿ ಹಸ್ತಪ್ರತಿಗಳ ಸಂರಕ್ಷಣೆಗೆ ಶಿವಮೊಗ್ಗದಲ್ಲಿ ಗಣತಿ ಮತ್ತು ಸಮೀಕ್ಷೆ ಕಾರ್ಯ ಆರಂಭ : ಪ್ರಭುಲಿಂಗ ಕವಳಿಕಟ್ಟಿ

ಶಿವಮೊಗ್ಗ :   ಕೇಂದ್ರ ಸರ್ಕಾರದ ‘ಜ್ಞಾನ ಭಾರತಂ ಮಿಷನ್’ ಯೋಜನೆಯಡಿ ರಾಷ್ಟ್ರದಾದ್ಯಂತ ಲಭ್ಯವಿರುವ ಶತಮಾನಗಳಷ್ಟು ಹಳೆಯ ಕೈಬರಹದ ಪಠ್ಯಗಳು, ಹಸ್ತಪ್ರತಿಗಳು ಮತ್ತು ದಾಖಲೆಗಳನ್ನು ಇಂದಿನ ತಂತ್ರಜ್ಞಾನದ ಮೂಲಕ ಸಂರಕ್ಷಣೆ ಹಾಗೂ‌ ಡಿಜಿಟಲೀಕರಣ ಮಾಡುವ ಯೋಜನೆ ಹಮ್ಮಿಕೊಂಡಿದ್ದು ಈ ಯೋಜನೆಯ ಭಾಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ತಾಳೆಗರಿ ಹಸ್ತಪ್ರತಿಗಳ ಗಣತಿ ಮತ್ತು ಸಮೀಕ್ಷೆ ಕಾರ್ಯವು ಪ್ರಸ್ತುತ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ ಅವರು ತಿಳಿಸಿದ್ದಾರೆ.

ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಹಸ್ತಪ್ರತಿಗಳನ್ನು ಸಮೀಕ್ಷೆ ಮಾಡಿ, ಡಿಜಿಟಲೀಕರಣದ ಮೂಲಕ ಭವಿಷ್ಯದ ಪೀಳಿಗೆಗಾಗಿ ಶಾಶ್ವತವಾಗಿ ಉಳಿಸುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ.

ರಾಷ್ಟ್ರೀಯ ಭಂಡಾರ: ಸಂಗ್ರಹಿಸಲಾದ ಹಸ್ತಪ್ರತಿಗಳ ಮಾಹಿತಿಯನ್ನು ಕೇಂದ್ರ ಸರ್ಕಾರ ಅಭಿವೃದ್ಧಿಪಡಿಸಿರುವ ಮೊಬೈಲ್ ಅಪ್ಲಿಕೇಶನ್ ಮೂಲಕ ಹಸ್ತಪ್ರತಿಗಳ ರಾಷ್ಟ್ರೀಯ ಭಂಡಾರಕ್ಕೆ (ನ್ಯಾಷನಲ್ ರೆಸ್ಪಾನ್ಸಿಬಿಲಿಟಿ) ಅಪ್‌ಲೋಡ್ ಮಾಡಲಾಗುತ್ತದೆ. ಇದರಿಂದ ಜಗತ್ತಿನಾದ್ಯಂತ ಈ ಜ್ಞಾನವನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತದೆ.

ಆದ್ದರಿಂದ ಸಾರ್ವಜನಿಕರು, ಸಂಘ-ಸಂಸ್ಥೆಗಳು, ಮಠ-ಮಂದಿರಗಳು ಮತ್ತು ದೇವಾಲಯಗಳಲ್ಲಿ ಹಸ್ತಪ್ರತಿಗಳು ಲಭ್ಯವಿದ್ದಲ್ಲಿ ಅವುಗಳ ಮಾಹಿತಿಯನ್ನು ನೀಡಿ ಸಹಕರಿಸಲು ಕೋರಲಾಗಿದೆ.ಹಸ್ತಪ್ರತಿಗಳ ಬಗ್ಗೆ ಮಾಹಿತಿ ನೀಡಲು ಇಚ್ಛಿಸುವವರು ವಿದ್ಯಾನ್ ಮಂಜುನಾಥ್, ಸಮನ್ವಯಾಧಿಕಾರಿ ಮೊ.ಸಂ. 9743250050 ಕುಮಾರ್ ಹೆಚ್.ಸಿ., ಸಹಾಯಕ ನಿರ್ದೇಶಕರು, ರಾಜ್ಯ ಪುರಾತತ್ವ ಇಲಾಖೆ 8105013149 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪ್ರವಾಸೋದ್ಯಮ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!