LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ನೌಕರರ ಮನೆ ಮಹಿಳೆಯರಿಗೆ ತಟ್ಟಲಿದೆಯೇ ಗೃಹಲಕ್ಷ್ಮಿ ಬಿಸಿ? ಯಾರಿಗೆಲ್ಲಾ ₹2,000 ಹಣ ಸಿಗೋಲ್ಲ? ಈ 4 ಹೊಸ ರೂಲ್ಸ್ ನೋಡಿ

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಜನಪ್ರಿಯ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಅರ್ಜಿ ಸಲ್ಲಿಸುವ ಫಲಾನುಭವಿಗಳಿಗೆ ಸರ್ಕಾರ ಭರ್ಜರಿ ಶಾಕ್ ನೀಡಲು ಮುಂದಾಗಿದೆ. ಇನ್ಮುಂದೆ ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದ್ದು, ಅರ್ಜಿಯಲ್ಲಿ ಮಹತ್ವದ ಬದಲಾವಣೆಗಳನ್ನು ತರಲಾಗಿದೆ. ಹೊಸ ಅರ್ಜಿಯಲ್ಲಿ 4 ಹೊಸ ಕಠಿಣ ಪ್ರಶ್ನೆಗಳನ್ನು ಸೇರ್ಪಡೆ ಮಾಡಲು ಸರ್ಕಾರ ಅಧಿಕೃತ ಒಪ್ಪಿಗೆ ನೀಡಿದೆ

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಈ ಹೊಸ ನಿಯಮವನ್ನು ತರುತ್ತಿದ್ದು, ಹೊಸ ಪ್ರಶ್ನೆಗಳ ಮೂಲಕ ಸರ್ಕಾರಿ ನೌಕರರ ಕುಟುಂಬಗಳಿಗೆ ಗೃಹಲಕ್ಷ್ಮಿಯ ₹2,000 ಹಣ ಕಟ್ ಆಗುವ ಲಕ್ಷಣಗಳು ದಟ್ಟವಾಗಿ ಕಾಣಿಸುತ್ತಿವೆ. ಹಾಗಾದರೆ ಆ ಹೊಸ ಪ್ರಶ್ನೆಗಳು ಯಾವುವು? ಯಾರೆಲ್ಲಾ ಇದರಿಂದ ಹೊರಗುಳಿಯಬಹುದು? ಕಂಪ್ಲೀಟ್ ಮಾಹಿತಿ ಇಲ್ಲಿದೆ

ಹೊಸ ಅರ್ಜಿಯಲ್ಲಿ 12 ಪ್ರಶ್ನೆಗಳು ಕಡ್ಡಾಯ

ಈ ಹಿಂದೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವಾಗ ಕೇವಲ ಬಯೋಮೆಟ್ರಿಕ್ ಜೊತೆಗೆ 6 ರಿಂದ 8 ಸಾಮಾನ್ಯ ಪ್ರಶ್ನೆಗಳನ್ನು ಕೇಳಲಾಗುತ್ತಿತ್ತು. ಆದರೆ ಇನ್ಮುಂದೆ ಹೊಸ ಅರ್ಜಿ ಸಲ್ಲಿಕೆ ಮಾಡುವಾಗ ಫಲಾನುಭವಿಗಳು ಬರೋಬ್ಬರಿ 12 ಪ್ರಶ್ನೆಗಳಿಗೆ ಕಡ್ಡಾಯವಾಗಿ ಉತ್ತರಿಸಬೇಕಾಗುತ್ತದೆ. ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ಮೂಲಗಳ ಪ್ರಕಾರ, ಅನರ್ಹರನ್ನು ಯೋಜನೆಯಿಂದ ಹೊರದಬ್ಬಲು ಈ ಹೊಸ ಮಾಸ್ಟರ್ ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ.

ಹೊಸದಾಗಿ ಸೇರ್ಪಡೆಯಾಗಿರುವ ಆ 4 ಬಿಗ್ ಪ್ರಶ್ನೆಗಳು ಯಾವುವು?

ಹೊಸ ಅರ್ಜಿಯಲ್ಲಿ ಸೇರಿಸಲಾಗಿರುವ 4 ಪ್ರಮುಖ ಪ್ರಶ್ನೆಗಳ ವಿವರ ಇಂತಿದೆ:

ನಿಮ್ಮ ಕುಟುಂಬದಲ್ಲಿ ಯಾರಾದರೂ ಸರ್ಕಾರಿ ನೌಕರರು ಇದ್ದಾರಾ?: (ಈ ಪ್ರಶ್ನೆಯ ಮೂಲಕ ಸರ್ಕಾರಿ ನೌಕರರ ಕುಟುಂಬವನ್ನು ಪತ್ತೆ ಹಚ್ಚಿ, ಅವರಿಗೆ ಯೋಜನೆ ಕಟ್ ಮಾಡುವ ಸಾಧ್ಯತೆ ಇದೆ).

ಬ್ಯಾಂಕ್ ಅಕೌಂಟ್‌ಗೆ ಆಧಾರ್ ಲಿಂಕ್ ಆಗಿದೆಯಾ?: (ಆಧಾರ್ ಲಿಂಕ್ ಆಗದಿದ್ದರೆ ಅರ್ಜಿ ಸಲ್ಲಿಕೆಯೇ ಆಗುವುದಿಲ್ಲ).

ವೋಟ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಇದೆಯಾ?: (ಕರ್ನಾಟಕದ ಮತದಾರರ ಪಟ್ಟಿಯಲ್ಲಿ ಹೆಸರು ಇರಲೇಬೇಕು).

ವೋಟರ್ ಐಡಿ ಇದೆಯಾ? ಇದ್ರೆ ತೋರಿಸಿ?: (ಮತದಾರರ ಗುರುತಿನ ಚೀಟಿಯ ಪರಿಶೀಲನೆ ಕಡ್ಡಾಯ).

ಹಳೆಯ ಅರ್ಜಿಯಲ್ಲಿದ್ದ ಪ್ರಶ್ನೆಗಳು ಯಾವ್ಯಾವು?

ಹೊಸ ಪ್ರಶ್ನೆಗಳ ಜೊತೆಗೆ ಈ ಹಳೆಯ ಪ್ರಶ್ನೆಗಳಿಗೂ ಉತ್ತರಿಸಬೇಕಾಗುತ್ತದೆ:

ಮನೆಯ ಯಜಮಾನಿ ಹೆಸರು, ವಿಳಾಸ ಮತ್ತು ಆಧಾರ್ ಸಂಖ್ಯೆ.

ಮನೆಯ ಯಜಮಾನಿಯ ಬ್ಯಾಂಕ್ ಖಾತೆ ವಿವರ.

ಪತಿಯ ಹೆಸರು ಮತ್ತು ಪತಿಯ ಆಧಾರ್ ಸಂಖ್ಯೆ.

ಯಾವ ಜಾತಿ ಹಾಗೂ ಸಂಪರ್ಕಿಸಬೇಕಾದ ಮೊಬೈಲ್ ನಂಬರ್.

ನೀವು ಐಟಿ (Income Tax) ಮತ್ತು ಜಿಎಸ್‌ಟಿ (GST) ಪಾವತಿದಾರರೇ?

ಯಾರಿಗೆ ಸಿಗುತ್ತೆ? ಯಾರಿಗೆ ಕಟ್ ಆಗುತ್ತೆ?

ಈ ಹೊಸ ಪ್ರಶ್ನೆಗಳ ಪೈಕಿ “ಕುಟುಂಬದಲ್ಲಿ ಸರ್ಕಾರಿ ನೌಕರರಿದ್ದಾರಾ?” ಎಂಬ ಪ್ರಶ್ನೆ ಇಡೀ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಮೂಲಕ ಸರ್ಕಾರಿ ನೌಕರರ ಮನೆಯ ಮಹಿಳೆಯರಿಗೆ ₹2,000 ಗೃಹಲಕ್ಷ್ಮಿ ಹಣವನ್ನು ಸಂಪೂರ್ಣವಾಗಿ ನಿಲ್ಲಿಸಲು ಸರ್ಕಾರ ಜರಡಿ ಹಿಡಿಯಲು ಮುಂದಾಗಿದೆ ಎಂಬ ಶಂಕೆ ಮೂಡಿದೆ. ಇದರ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಇಲ್ಲದವರ ಅರ್ಜಿಗಳೂ ಕೂಡ ರಿಜೆಕ್ಟ್ ಆಗುವ ಸಾಧ್ಯತೆ ಹೆಚ್ಚಾಗಿದೆ. ಯಾವೆಲ್ಲಾ ಮಾನದಂಡಗಳ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಹೊಸ ಅರ್ಜಿ ಸ್ವೀಕರಿಸಲಾಗುತ್ತದೆ ಎಂಬುದನ್ನು ಸರ್ಕಾರ ಶೀಘ್ರದಲ್ಲೇ ಸ್ಪಷ್ಟಪಡಿಸಲಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!