ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ಈ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳು ಸೆ.19ರೊಳಗೆ ನಿಗದಿತ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆ.21ರೊಳಗೆ ಕಾಲೇಜುಗಳಲ್ಲಿ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರು ತಿಳಿಸಿದ್ದಾರೆ.
ಒಟ್ಟು 12,010 ವೈದ್ಯಕೀಯ ಸೀಟುಗಳ ಪೈಕಿ 11,551 ಸೀಟು ಹಂಚಿಕೆಯಾಗಿದ್ದು, ಇನ್ನೂ 459 ಸೀಟು ಉಳಿದಿವೆ. ದಂತ ವೈದ್ಯಕೀಯ ಕೋರ್ಸ್ ನಲ್ಲಿ ಇದ್ದ ಎಲ್ಲ 2,689 ಸೀಟು ಹಂಚಿಕೆಯಾಗಿವೆ ಎಂದು ಅವರು ವಿವರಿಸಿದ್ದಾರೆ.