LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯಮಿಗೆ 2.66 ಕೋಟಿ ರೂ. ವಂಚನೆ: ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಬಾಗಲಗುಂಟೆ ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿರುದ್ಧ ವಂಚನೆ ಆರೋಪದಡಿ ದೂರು ನೀಡಲಾಗಿದೆ.

ವಂಚನೆಗೊಳಗಾದ ಉದ್ಯಮಿ ಸುಬ್ರಮಣ್ಯ ಪೊಲೀಸರಿಗೆ ದೂರು ನೀಡಿದ್ದಾರೆ. ಆಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಮಲ್ಲಿಕಾರ್ಜುನ ಸೇರಿದಂತೆ ಹಲವರ ವಿರುದ್ಧ ಸುಬ್ರಹ್ಮಣ್ಯ ದೂರು ದಾಖಲಿಸಿದ್ದಾರೆ.

ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ವಿನೋದ್ ಕುಮಾರ್, ಅರುಣ್ ಮತ್ತು ಕಿರಣ್ ಎಂಬುವರನ್ನು ಬಂಧಿಸಲಾಗಿದೆ. ಸುಬ್ರಮಣ್ಯ ಅವರು ಲಾಜಿಸ್ಟಿಕ್ಸ್ ಕಂಪನಿ ನಡೆಸುತ್ತಿದ್ದು, ಬಾಗಲಗುಂಟೆ ಆಕ್ಸಿಸ್ ಬ್ಯಾಂಕ್ ನಲ್ಲಿ ಖಾತೆಯನ್ನು ತೆರೆದಿದ್ದರು. ಅವರ ವ್ಯವಹಾರದ ಮೇಲೆ ಕಣ್ಣಿಟ್ಟಿದ್ದ ವಿನೋದ್ ಕುಮಾರ್ ಉದ್ಯಮಿಗೆ 30 ಕೋಟಿ ರೂಪಾಯಿ ಮೌಲ್ಯದ ವ್ಯವಹಾರ ಕೊಡಿಸುತ್ತೇನೆ ಎಂದು ಹೇಳಿದ್ದ. ಜೊತೆಗೆ ಮ್ಯಾನ್ ಪವರ್ ವ್ಯವಹಾರ ಕೊಡಿಸುವುದಾಗಿ ನಂಬಿಸಿದ್ದ. ಇದಕ್ಕೆ ಮುಂಗಡವಾಗಿ 2.66 ಕೋಟಿ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಬಾಗಲಗುಂಟೆ ದೂರು ನೀಡಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!