ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಲ್ಲಿ ಬ್ಯುಸಿಯಾಗಿರುವ ದೇಶದ ಅನ್ನದಾತರಿಗೆ ಮೋದಿ ಸರ್ಕಾರ ಮತ್ತೊಂದು ಬಂಪರ್ ಸಿಹಿ ಸುದ್ದಿ ನೀಡಿದೆ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-Kisan) ಯೋಜನೆಯ ಬಹುನಿರೀಕ್ಷಿತ 23ನೇ ಕಂತಿನ ಹಣ ಬಿಡುಗಡೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಜೂನ್ 20ರ ನಾಳೆ ದೇಶಾದ್ಯಂತ ಇರುವ ಬರೋಬ್ಬರಿ 9.44 ಕೋಟಿಗೂ ಅಧಿಕ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ.
ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ನಡೆಯಲಿರುವ ಬೃಹತ್ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 3:45ಕ್ಕೆ ಸರಿಯಾಗಿ ಪ್ರಧಾನಿಯವರು ಡಿಜಿಟಲ್ ಇಂಡಿಯಾ ಪರಿಕಲ್ಪನೆಯಡಿ ಒಂದೇ ಒಂದು ಸಿಂಗಲ್ ಬಟನ್ ಒತ್ತುವ ಮೂಲಕ ಕೋಟ್ಯಂತರ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಿದ್ದಾರೆ.
ರೈತರ ಖಾತೆಗೆ ಬರಲಿದೆ ತಲಾ 2,000 ರೂಪಾಯಿ
ಪಿಎಂ ಕಿಸಾನ್ ಯೋಜನೆಯ ಗೇಮ್ ಪ್ಲಾನ್ ಪ್ರಕಾರ, ಅರ್ಹ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಪ್ರತಿ ವರ್ಷ ಒಟ್ಟು 6,000 ರೂಪಾಯಿಗಳ ಆರ್ಥಿಕ ನೆರವು ನೀಡುತ್ತಾ ಬಂದಿದೆ. ಈ ಮೊತ್ತವನ್ನು ತಲಾ 2,000 ರೂಪಾಯಿಗಳಂತೆ ಮೂರು ಸಮಾನ ಕಂತುಗಳಲ್ಲಿ ರೈತರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗಳಿಗೆ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (DBT) ಮೂಲಕ ಜಮಾ ಮಾಡಲಾಗುತ್ತದೆ. ನಾಳೆ ಬಿಡುಗಡೆಯಾಗುತ್ತಿರುವುದು ಯೋಜನೆಯ 23ನೇ ಕಂತಾಗಿದ್ದು, ನಿಮ್ಮ ಖಾತೆಗೂ ಸರಿಯಾಗಿ 2,000 ರೂಪಾಯಿ ಬಂದು ಬೀಳಲಿದೆ
ಜೂನ್ ತಿಂಗಳ ಈ ಬಿತ್ತನೆ ಸಮಯದಲ್ಲಿ ಬಿಡುಗಡೆಯಾಗುತ್ತಿರುವ ಈ ಹಣವು ರೈತರ ಮುಂಗಾರು ಕೃಷಿ ಚಟುವಟಿಕೆಗಳಿಗೆ ಭಾರಿ ಅನುಕೂಲ ಮಾಡಿಕೊಡಲಿದೆ. ಮಾರುಕಟ್ಟೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ಖರೀದಿಸಲು ಹಣವಿಲ್ಲದೆ ಒದ್ದಾಡುತ್ತಿದ್ದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಈ ಆರ್ಥಿಕ ನೆರವು ಸಖತ್ ಹೆಲ್ಪ್ ಆಗಲಿದೆ.