LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: 2015ರ ಕೊಲೆ ಪ್ರಕರಣ, ರೌಡಿಶೀಟರ್ ‘ಕಲ್ಲುಪಾಳ್ಯ ಸೂರಿ’ ಸೇರಿದಂತೆ ಮೂವರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಕೋರ್ಟ್!

ತುಮಕೂರು: ಸುಮಾರು 11 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ಸುರೇಶ್ ಅಲಿಯಾಸ್ ಕಲ್ಲುಪಾಳ್ಯ ಸೂರಿ ಸೇರಿದಂತೆ ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ತುಮಕೂರಿನ 1ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

2015ರ ಮಾರ್ಚ್ ತಿಂಗಳಲ್ಲಿ ಕುಣಿಗಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಪಾಳ್ಯದಲ್ಲಿ ಹಳೆ ದ್ವೇಷದ ಹಿನ್ನೆಲೆಯಲ್ಲಿ ರಮೇಶ್ ಎಂಬಾತನನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಸಮಗ್ರ ತನಿಖೆ ನಡೆಸಿದ್ದ ಕುಣಿಗಲ್ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಿದ್ದರು. ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಾದ ಸುರೇಶ್, ಮೋಹನ್ ಹಾಗೂ ಶಶಿಕುಮಾರ್ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಮೂವರಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುವ ಮೂಲಕ ತೀವ್ರ ಸುದ್ದಿಯಲ್ಲಿದ್ದ ರೌಡಿಶೀಟರ್ ಕಲ್ಲುಪಾಳ್ಯ ಸೂರಿ ವಿರುದ್ಧ 20ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿದ್ದ ಈತನನ್ನು ಇತ್ತೀಚೆಗೆ ಕುಣಿಗಲ್ ಠಾಣೆಯ ಪೊಲೀಸರು ‘ಗೂಂಡಾ ಕಾಯ್ದೆ’ಯಡಿ ಬಂಧಿಸಿ ಜೈಲಿಗಟ್ಟಿದ್ದರು. 

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!