LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: 2026-27ನೇ ಸಾಲಿನ NMMS ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: ಕೇಂದ್ರ ಸರ್ಕಾರದ ವಿದ್ಯಾರ್ಥಿ ವೇತನಕ್ಕಾಗಿ 2026-27ನೇ ಸಾಲಿನಲ್ಲಿ ನಡೆಸಲಾಗುವ ಎನ್‌ಎಂಎಂಎಸ್ (NMMS) ಪರೀಕ್ಷೆಯ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಅಧಿಕೃತವಾಗಿ ಪ್ರಕಟಿಸಿದೆ. ಮಂಡಳಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ಈ ಪರೀಕ್ಷೆಯನ್ನು ದಿನಾಂಕ 20 ಡಿಸೆಂಬರ್ 2026 ರಂದು ರಾಜ್ಯಾದ್ಯಂತ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪರೀಕ್ಷೆಗೆ ಯಾರೆಲ್ಲ ಅರ್ಹರು?

2026-27ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಶಾಲೆಗಳಲ್ಲಿ (Local body schools) ಪ್ರಸ್ತುತ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಅರ್ಹರಾಗಿದ್ದಾರೆ. ಜತೆಗೆ, ಈ ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ. 3.50 ಲಕ್ಷದ ಮಿತಿಯೊಳಗೆ ಇರಬೇಕಾಗಿರುವುದು ಕಡ್ಡಾಯವಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ

ಈ ಪರೀಕ್ಷೆಗೆ ಸಂಬಂಧಿಸಿದ ಆನ್‌ಲೈನ್ ಅರ್ಜಿ ನಮೂನೆ ಹಾಗೂ ಇತರ ಸಮಗ್ರ ವಿವರಗಳನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯಗೊಳಿಸಲಾಗಿದೆ. ಅರ್ಹ ವಿದ್ಯಾರ್ಥಿಗಳ ಪರವಾಗಿ ಸಂಬಂಧಪಟ್ಟ ಶಾಲಾ ಮುಖ್ಯ ಶಿಕ್ಷಕರು ತಮ್ಮ ಅಧಿಕೃತ ಶಾಲಾ ಲಾಗಿನ್ ಮೂಲಕ ಮಂಡಳಿಯ ವೆಬ್‌ಸೈಟ್ https://kseab.karnataka.gov.in/ ನಲ್ಲಿ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಮುಖ ದಿನಾಂಕ ಮತ್ತು ಸಹಾಯವಾಣಿ ಮಾಹಿತಿ

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ 30 ಅಕ್ಟೋಬರ್ 2026 ಅಂತಿಮ ದಿನವಾಗಿದ್ದು, ಪರೀಕ್ಷೆಯು ದಿನಾಂಕ 20 ಡಿಸೆಂಬರ್ 2026 ರಂದು ನಡೆಯಲಿದೆ. ಪರೀಕ್ಷೆ ಹಾಗೂ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಅಥವಾ ಗೊಂದಲಗಳಿದ್ದಲ್ಲಿ ಕಚೇರಿ ಕೆಲಸದ ವೇಳೆಯಲ್ಲಿ ದೂರವಾಣಿ ಸಂಖ್ಯೆ 080-23341615 ಯನ್ನು ಸಂಪರ್ಕಿಸಬಹುದು ಎಂದು ಕೆ.ಎಸ್.ಕ್ಯು.ಎ.ಎ.ಸಿ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?