LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಏಷ್ಯನ್ ಗೇಮ್ಸ್ 2026: ಸೆಪ್ಟೆಂಬರ್ 28ಕ್ಕೆ ಹೈ-ವೋಲ್ಟೇಜ್ ಕದನ: ಕ್ವಾರ್ಟರ್ ಫೈನಲ್‌ನಲ್ಲಿ ಅಫ್ಘಾನಿಸ್ತಾನ್ ತಂಡವನ್ನು ಎದುರಿಸಲಿದೆ ಭಾರತ!

ಏಷ್ಯನ್ ಗೇಮ್ಸ್ 2026ರ ಪುರುಷರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಕ್ವಾರ್ಟರ್ ಫೈನಲ್ ಎದುರಾಳಿ ಯಾರು ಎಂಬುದು ಅಂತಿಮಗೊಂಡಿದೆ. ಸೆಪ್ಟೆಂಬರ್ 28 ರಂದು ಜಪಾನ್‌ನ ನಿಶಿನ್‌ನಲ್ಲಿ ನಡೆಯಲಿರುವ ಶೃಂಗಸಮರದಲ್ಲಿ ಭಾರತ ತಂಡ, ಬಲಿಷ್ಠ ಅಫ್ಘಾನಿಸ್ತಾನ್ ವಿರುದ್ಧ ಸೆಣೆಸಾಡಲಿದೆ. ಜಪಾನ್ ಮತ್ತು ನೇಪಾಳ ನಡುವಿನ ಗ್ರೂಪ್ ಹಂತದ ಪಂದ್ಯ ಮಳೆಯಿಂದಾಗಿ ರದ್ದಾದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ್ ತಂಡ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದೆ.

ಶನಿವಾರ ನಡೆದ ‘ಪೂಲ್ ಎ’ ಲೀಗ್ ಪಂದ್ಯದಲ್ಲಿ ಜಪಾನ್ ಹಾಗೂ ನೇಪಾಳ ಮುಖಾಮುಖಿಯಾಗಿದ್ದವು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನೇಪಾಳ ತಂಡ 15 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 149 ರನ್‌ಗಳ ಬೃಹತ್ ಮೊತ್ತ ಕಟ್ಟಿತ್ತು. ಸಂದೀಪ್ ಜೋರಾ (32 ಎಸೆತಗಳಲ್ಲಿ ಅಜೇಯ 57) ಹಾಗೂ ಲೋಕೇಶ್ ಬಾಮ್ (22 ಎಸೆತಗಳಲ್ಲಿ 6 ಸಿಕ್ಸರ್ ಸಹಿತ ಅಜೇಯ 52) ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನೇಪಾಳ ಬೃಹತ್ ಮೊತ್ತ ಕಲೆಹಾಕಲು ಸಾಧ್ಯವಾಯಿತು.

ಆದರೆ, 15 ಓವರ್‌ಗಳಲ್ಲಿ 150 ರನ್‌ಗಳ ಗುರಿ ಬೆನ್ನತ್ತಬೇಕಿದ್ದ ಜಪಾನ್ ತಂಡದ ಬ್ಯಾಟಿಂಗ್ ಆರಂಭವಾಗುವ ಮುನ್ನವೇ ಭಾರೀ ಮಳೆ ಸುರಿಯಿತು. ಪಂದ್ಯ ಪುನರಾರಂಭಗೊಳ್ಳದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಈ ಫಲಿತಾಂಶದಿಂದಾಗಿ ಗ್ರೂಪ್‌ನಲ್ಲಿ ಪ್ರಥಮ ಸ್ಥಾನ ಪಡೆದ ನೇಪಾಳ ಹಾಗೂ ಎರಡನೇ ಸ್ಥಾನದಲ್ಲಿದ್ದ ಅಫ್ಘಾನಿಸ್ತಾನ್ ತಂಡಗಳು ನಾಕೌಟ್ ಹಂತಕ್ಕೆ ಅರ್ಹತೆ ಪಡೆದವು. ಇತ್ತ ಪ್ರಭಾವಿ ಪ್ರದರ್ಶನ ನೀಡಿದ್ದ ಆತಿಥೇಯ ಜಪಾನ್ ಕೂಟದಿಂದ ಹೊರಬಿದ್ದಿದೆ.

ಈಗಾಗಲೇ ಬಲವಾದ ಸಿದ್ಧತೆ ನಡೆಸಿರುವ ಭಾರತ ತಂಡ, ಸೆಮಿಫೈನಲ್ ಹಂತಕ್ಕೇರಲು ಅಫ್ಘಾನಿಸ್ತಾನ್ ವಿರುದ್ಧ ಕಣಕ್ಕಿಳಿಯಲಿದ್ದು, ಕ್ರಿಕೆಟ್ ಪ್ರಿಯರಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್