LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಮ್ಮ ಮೆಟ್ರೋ ಮೂರು ವರ್ಷದಲ್ಲಿ 21 ಬಾರಿ ಎಡವಟ್ಟು: BMRCLಗೆ 5 ಪ್ರಶ್ನೆಗಳು: ರೈಲ್ವೆ ಸುರಕ್ಷತಾ ಕಮಿಷನರ್ ಹಾಗೂ ಸಚಿವ ಕೃಷ್ಣಬೈರೇಗೌಡಗೆ ಪತ್ರ ಬರೆದ ಸಂಸತ ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗರ ಜೀವನಾಡಿ ನಮ್ಮ ಮೆಟ್ರೋ ಇತ್ತೀಚಿನ ದಿನಗಳಲ್ಲಿ ತಾಂತ್ರಿಕ ದೋಷಗಳಿಂದಾಗಿ ಕೆಟ್ಟು ನಿಂತು ಪ್ರಯಾಣಿಕರು ಸಮಸ್ಯೆಗೆ ಸಿಲುಕುವಂತಾಗಿದೆ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ರೈಲ್ವೆ ಹಳಿ, ಸಿಗ್ನಲಿಂಗ್ ಸಮಸ್ಯೆ, ವಿದ್ಯುತ್ ವ್ಯತ್ಯಯ ಹಾಗೂ ಸ್ಮಾರ್ಟ್ ಕಾರ್ಡ್ ಸರ್ವರ್ ವೈಫಲ್ಯ ಸೇರಿದಂತೆ ಹಲವು ತಾಂತ್ರಿಕ ಸಮಸ್ಯೆಗಳಿಂದಾಗಿ 2024 ರಿಂದ 2026 ರ ಜೂನ್ 26 ರವರೆಗಿನ ಕೇವಲ ಮೂರು ವರ್ಷಗಳ ಅವಧಿಯಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 21 ಬಾರಿ ತಾಂತ್ರಿಕ ಅಡಚಣೆಗಳು ವರದಿಯಾಗಿವೆ. ಕಚೇರಿ ಅವಧಿಯಲ್ಲೇ (Peak Hours) ಈ ಯಡವಟ್ಟುಗಳು ಮರುಕಳಿಸುತ್ತಿರುವುದು ಪ್ರಯಾಣಿಕರು ಪರದಾಡುವಂತಾಗಿದೆ.

ನಮ್ಮ ಮೆಟ್ರೋ ತಾಂತ್ರಿಕ ಸಮಸ್ಯೆಗಳ ವಿರುದ್ಧ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಂಆರ್ ಸಿಎಲ್ ಗೆ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ರೈಲ್ವೆ ಕಮೀಷನರ್ ಆಫ್ ಸೇಫ್ಟಿ (ದಕ್ಷಿಣ ವಲಯ) ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಪತ್ರ ಬರೆದಿದ್ದಾರೆ.

ಜೂನ್ 23, 2026 ರಂದು ಕರೆಂಟ್ ಕಲೆಕ್ಟರ್ ಡಿವೈಸ್ (CCD) ದೋಷದಿಂದ ಇಡೀ ನಗರದ ಸಂಚಾರ ವ್ಯವಸ್ಥೆ ಸ್ತಬ್ಧಗೊಂಡಿದ್ದನ್ನು ಪತ್ರದಲ್ಲಿ ಅವರು ನೆನಪಿಸಿದ್ದಾರೆ. ಬಿಎಂಆರ್‌ಸಿಎಲ್ ಪ್ರಯಾಣಿಕರಿಂದ ದೇಶದಲ್ಲೇ ಅತ್ಯಧಿಕ ಪ್ರಮಾಣದ ದರ ವಸೂಲಿ ಮಾಡುತ್ತದೆ, ಆದರೂ ಇಷ್ಟೊಂದು ಭಾರಿ ಪ್ರಮಾಣದಲ್ಲಿ ತಾಂತ್ರಿಕ ದೋಷಗಳು ಬೇರೆಲ್ಲೂ ಕಂಡುಬರುವುದಿಲ್ಲ ಎಂದು ಉಲ್ಲೇಖಿಸಿ ಕಿಡಿಕಾರಿದ್ದಾರೆ.

ಬಿಎಂಆರ್‌ಸಿಎಲ್ ಆಡಳಿತ ಮಂಡಳಿಯು ಸಾರ್ವಜನಿಕರಿಗೆ ಉತ್ತರದಾಯಿಯಾಗಬೇಕಿದೆ ಎಂದಿರುವ ತೇಜಸ್ವಿ ಸೂರ್ಯ, 5 ಪ್ರಮುಖ ಪ್ರಶ್ನೆಗಳಿಗೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಥರ್ಡ್ ರೈಲ್ (Third Rail) ಮೂಲಸೌಕರ್ಯದ ಘಟಕಗಳ ತಪಾಸಣೆಯ ನಿಗದಿತ ಅವಧಿ ಎಷ್ಟು? ತೊಂದರೆಗೊಳಗಾದ ಮಾರ್ಗದ ಕೊನೆಯ ತಪಾಸಣೆ ಯಾವಾಗ ನಡೆದಿತ್ತು ಮತ್ತು ಅದರ ವರದಿ ಏನಾಗಿತ್ತು? ಈ ತಪಾಸಣೆಯನ್ನು ಬಿಎಂಆರ್‌ಸಿಎಲ್ ಸಿಬ್ಬಂದಿ ಮಾಡಿದ್ದಾರೋ ಅಥವಾ ಥರ್ಡ್ ಪಾರ್ಟಿ ಏಜೆನ್ಸಿಗೆ ವಹಿಸಲಾಗಿತ್ತೇ? ಕಳೆದ 12 ತಿಂಗಳ ತಪಾಸಣಾ ವರದಿ ಹಾಗೂ ಆಡಿಟ್ ದಾಖಲೆಗಳನ್ನು ಸಾರ್ವಜನಿಕರ ಅವಗಾಹನೆಗೆ ಮುಕ್ತವಾಗಿ ಇಡುತ್ತೀರಾ? ಈ ಸರಣಿ ದೋಷಗಳ ಮೂಲ ಕಾರಣದ ತನಿಖೆ (Root Cause Analysis) ಮುಗಿದಿದೆಯೇ? ಆ ವರದಿಯನ್ನು ಬಹಿರಂಗಪಡಿಸಿ.

2024ರ ಪ್ರಮುಖ ಘಟನೆಗಳು: ಜನವರಿ 27 ರಂದು ಎಂಜಿ ರೋಡ್ ನಿಲ್ದಾಣದಲ್ಲಿ ತಾಂತ್ರಿಕ ದೋಷ, ಫೆಬ್ರವರಿ 20 ರಂದು ಮೆಜೆಸ್ಟಿಕ್‌ನಿಂದ ಬೈಯಪ್ಪನಹಳ್ಳಿವರೆಗೆ ರೈಲು ಸ್ಥಗಿತ, ಮಾರ್ಚ್ 27 ರಂದು ಇಡೀ ನೇರಳೆ ಮಾರ್ಗದಲ್ಲಿ ಸಿಗ್ನಲ್ ವೈಫಲ್ಯ, ಜುಲೈ 30 ರಂದು ಹಸಿರು ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯ.
2025ರ ಪ್ರಮುಖ ಘಟನೆಗಳು: ಮಾರ್ಚ್ 3 ರಂದು ಅತ್ತಿಗುಪ್ಪೆ ನಿಲ್ದಾಣದ ಸಮಸ್ಯೆ, ಏಪ್ರಿಲ್ 8 ರಂದು ಸ್ಮಾರ್ಟ್ ಕಾರ್ಡ್ ರೀಚಾರ್ಜ್ ಸಮಸ್ಯೆ, ಜೂನ್ 16 ರಂದು ಇಡೀ ದಿನ ರೈಲು ವೇಳಾಪಟ್ಟಿಯಲ್ಲಿ ಬದಲಾವಣೆ,
ಸೆಪ್ಟೆಂಬರ್ ಮತ್ತು ಅಕ್ಟೋಬರ್ ಅವಧಿಯಲ್ಲಿ ಹೊಸದಾಗಿ ಆರಂಭವಾದ ಹಳದಿ ಮಾರ್ಗದಲ್ಲೇ 3 ಬಾರಿ ತಾಂತ್ರಿಕ ದೋಷ,
ನವೆಂಬರ್‌ನಲ್ಲಿ ಟಿಕೆಟಿಂಗ್ ಕೌಂಟರ್ ಸರ್ವರ್ ಸ್ಥಗಿತ.
2026ರ ಇತ್ತೀಚಿನ ಘಟನೆಗಳು: ಜನವರಿ 15 ರಂದು ಹಳದಿ ಮಾರ್ಗದಲ್ಲಿ ಚಾಲಕರಹಿತ ಮೆಟ್ರೋ ಹಳಿತಪ್ಪಿದ್ದು,
ಫೆಬ್ರವರಿ 10 ರಂದು ಆರ್‌ವಿ ರಸ್ತೆ ನಿಲ್ದಾಣದಲ್ಲಿ ದೋಷ, ಮೇ 4 ರಂದು ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಪವರ್ ಕಟ್. ಇನ್ನು ಜೂನ್ ತಿಂಗಳೊಂದರಲ್ಲೇ ಜೂನ್ 12 ರಂದು ಕಾರ್ಡ್ ರೀಚಾರ್ಜ್ ಸಮಸ್ಯೆ, ಜೂನ್ 21 ರಂದು ನಾಗಾಸಂದ್ರ ನಿಲ್ದಾಣದ ನಾಮಫಲಕದಲ್ಲಿ ಬೆಂಕಿ ಅವಘಡ,
ಜೂನ್ 23 ರಂದು ಕಬ್ಬನ್ ಪಾರ್ಕ್ ದೋಷ ಮತ್ತು ಜೂನ್ 26 ರಂದು ಕಬ್ಬನ್ ಪಾರ್ಕ್ ನಿಲ್ದಾಣದಲ್ಲೇ ಬಾಗಿಲು ಮುಚ್ಚದ ಸಮಸ್ಯೆ ಕಂಡುಬಂದಿದೆ.

ಕಳೆದ ಮೂರು ವರ್ಷಗಳಲ್ಲಿ ಅತಿ ಹೆಚ್ಚು ಅಂದರೆ 11 ಬಾರಿ ನೇರಳೆ ಮಾರ್ಗವೊಂದರಲ್ಲೇ ತಾಂತ್ರಿಕ ದೋಷಗಳು ವರದಿಯಾಗಿವೆ. ಬೆಂಗಳೂರಿನ ನಿವಾಸಿಗಳು ಮತ್ತು ಪ್ರಯಾಣಿಕರು ಸುರಕ್ಷಿತ, ನಂಬಿಕಸ್ಥ ಹಾಗೂ ಪಾರದರ್ಶಕ ಮೆಟ್ರೋ ವ್ಯವಸ್ಥೆಯನ್ನು ಹೊಂದಲು ಅರ್ಹರಾಗಿದ್ದು, ಬಿಎಂಆರ್‌ಸಿಎಲ್ ತಕ್ಷಣವೇ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!