LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗಾಕಾಂಕ್ಷಿಗಳಿಗೆ ಬಿಗ್ ಗಿಫ್ಟ್: 22 ಜಿಲ್ಲೆಗಳ 572 ಗ್ರಾಮ ಆಡಳಿತಾಧಿಕಾರಿ (VAO) ಹುದ್ದೆಗಳ ನೇರ ನೇಮಕಾತಿಗೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

ಬೆಂಗಳೂರು: ಸರ್ಕಾರಿ ಕೆಲಸದ ಕನಸು ಕಾಣುತ್ತಿರುವ ರಾಜ್ಯದ ಯುವಜನತೆಗೆ ರಾಜ್ಯ ಸರ್ಕಾರವು ಜೂನ್ ತಿಂಗಳಿನಲ್ಲಿ ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕದ 22 ಜಿಲ್ಲೆಗಳಲ್ಲಿ ಖಾಲಿ ಇರುವ ಬರೋಬ್ಬರಿ 572 ಗ್ರಾಮ ಆಡಳಿತ ಅಧಿಕಾರಿಗಳ (Village Administrative Officer – VAO) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆಯು ಅಧಿಕೃತವಾಗಿ ಅನುಮೋದನೆ ನೀಡಿದೆ

ಆರ್ಥಿಕ ಇಲಾಖೆಯ ಒಪ್ಪಿಗೆ ಸಿಗುತ್ತಿದ್ದಂತೆಯೇ ಅಲರ್ಟ್ ಆಗಿರುವ ಕಂದಾಯ ಇಲಾಖೆಯು, ಹುದ್ದೆಗಳ ಭರ್ತಿಗೆ ತಕ್ಷಣವೇ ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ 22 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ (DCs) ಖಡಕ್ ಪತ್ರ ಬರೆದಿದೆ. ಇದರಿಂದಾಗಿ ಶೀಘ್ರದಲ್ಲೇ ಈ ಹುದ್ದೆಗಳಿಗೆ ಬೃಹತ್ ಅಧಿಸೂಚನೆ (Notification) ಹೊರಬೀಳೋದು ಗ್ಯಾರಂಟಿ ಆಗಿದೆ.

ಆ 22 ಜಿಲ್ಲೆಗಳು ಯಾವುವು? ನಿಮ್ಮ ಜಿಲ್ಲೆಯೂ ಇದೆಯಾ ಚೆಕ್ ಮಾಡಿ

ರಾಜ್ಯದ ಕಂದಾಯ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ, ಈ ಕೆಳಗಿನ 22 ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ:

ಬೆಂಗಳೂರು ವಿಭಾಗ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ (ಬೆಂಗಳೂರು ದಕ್ಷಿಣ), ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಶಿವಮೊಗ್ಗ.

ಮೈಸೂರು ವಿಭಾಗ: ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ.

ಬೆಳಗಾವಿ ವಿಭಾಗ: ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ.

ಕಲಬುರಗಿ ವಿಭಾಗ: ಕಲಬುರಗಿ, ಬೀದರ್, ರಾಯಚೂರು.

ಪರಿಷ್ಕೃತ ರೋಸ್ಟರ್ ಬಿಂದು ಮೀಸಲಾತಿ ಜಾರಿ

ನೇರ ನೇಮಕಾತಿ ಕೋಟಾದಡಿ ಖಾಲಿ ಇರುವ ಈ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಮುನ್ನ, ಇಲಾಖೆಯು ಅನುಸರಿಸಬೇಕಾದ ಪರಿಷ್ಕೃತ ರೋಸ್ಟರ್ ಬಿಂದು ಮೀಸಲಾತಿಯ (Revised Roster Points) ವಿವರಗಳನ್ನು ಮರುನಿಗದಿಪಡಿಸಿದೆ.

ಯಾರಿಗೂ ಅನ್ಯಾಯವಾಗದಂತೆ ಈ ಎಲ್ಲಾ ಹೊಸ ನಿಯಮ ಹಾಗೂ ಅಂಶಗಳನ್ನು ಕಟ್ಟುನಿಟ್ಟಾಗಿ ಪರಿಗಣಿಸಿ, ಆಯಾ ಜಿಲ್ಲೆಗಳಿಗೆ ನಿಗದಿಪಡಿಸಲಾಗಿರುವ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿಗಳು ತಕ್ಷಣವೇ ಸರ್ಕಾರಕ್ಕೆ ರಿಪೋರ್ಟ್ ಕಳುಹಿಸಬೇಕು ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

ಶೀಘ್ರದಲ್ಲೇ ಅಧಿಕೃತ ನೋಟಿಫಿಕೇಶನ್ ಫಿಕ್ಸ್

ಆರ್ಥಿಕ ಇಲಾಖೆಯು ಆಡಳಿತಾತ್ಮಕ ಮತ್ತು ಆರ್ಥಿಕ ಅನುಮೋದನೆ ನೀಡಿರುವುದರಿಂದ, ಈ ನೇಮಕಾತಿ ಪ್ರಕ್ರಿಯೆಗೆ ಇದ್ದ ಅತಿ ದೊಡ್ಡ ಅಡ್ಡಿ ನಿವಾರಣೆಯಾಗಿದೆ. ಜಿಲ್ಲಾಧಿಕಾರಿಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗುತ್ತಿದ್ದಂತೆಯೇ, ಅರ್ಜಿ ಸಲ್ಲಿಕೆಯ ದಿನಾಂಕ, ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಪರೀಕ್ಷಾ ವಿಧಾನಗಳ ಕಂಪ್ಲೀಟ್ ಗೈಡ್‌ಲೈನ್ಸ್ ಒಳಗೊಂಡ ಅಧಿಕೃತ ಅಧಿಸೂಚನೆ ಹೊರಬೀಳಲಿದೆ.

ಕಂದಾಯ ಇಲಾಖೆಯು ಆರ್ಥಿಕ ಇಲಾಖೆಯ ಅನುಮೋದನೆ ಪಡೆದು, ಜಿಲ್ಲಾಧಿಕಾರಿಗಳಿಗೆ ಕಳುಹಿಸಿರುವ ಅಧಿಕೃತ ಆದೇಶದ ಪ್ರಕಾರ ಪ್ರಸ್ತುತ ಭರ್ತಿ ಮಾಡಲು ನಿರ್ಧರಿಸಲಾಗಿರುವ 572 ಹುದ್ದೆಗಳ ಜಿಲ್ಲಾವಾರು ಸಂಪೂರ್ಣ ವಿವರ ಹೀಗಿದೆ:

ಕ್ರ.ಸಂ.ಜಿಲ್ಲೆಯ ಹೆಸರುಮಂಜೂರಾದ ಹುದ್ದೆಗಳುಖಾಲಿ ಇರುವ ಹುದ್ದೆಗಳುನೇಮಕಾತಿ ಹುದ್ದೆಗಳು
1ಬೆಳಗಾವಿ6488248
2ತುಮಕೂರು3057850
3ಮಂಡ್ಯ2587150
4ಮೈಸೂರು4797545
5ದಕ್ಷಿಣ ಕನ್ನಡ1344837
6ಹಾಸನ4755235
7ಕಲಬುರಗಿ4106635
8ಚಾಮರಾಜನಗರ2155031
9ಬೆಂಗಳೂರು ದಕ್ಷಿಣ (ರಾಮನಗರ)3765530
10ಬೆಂಗಳೂರು ಗ್ರಾಮಾಂತರ2234729
11ಕೋಲಾರ2894422
12ಚಿಕ್ಕಬಳ್ಳಾಪುರ2664521
13ಬೆಂಗಳೂರು ನಗರ2523220
14ಶಿವಮೊಗ್ಗ2754418
15ಬಾಗಲಕೋಟೆ2973016
16ಬೀದರ್1933416
17ಚಿತ್ರದುರ್ಗ3563715
18ಹಾವೇರಿ2954115
19ಗದಗ್2323314
20ಉಡುಪಿ4592310
21ಚಿಕ್ಕಮಗಳೂರು3262910
22ರಾಯಚೂರು200225
ಒಟ್ಟು ಪರಿಗಣಿಸಿರುವ ಹುದ್ದೆಗಳು:572
Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿ