LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ತಿರುಪತಿ ದೇವಸ್ಥಾನಕ್ಕೆ 230 ಕೋಟಿ ಮೌಲ್ಯದ ಕಲಬೆರಕೆ ತುಪ್ಪ ಪೂರೈಕೆ ಪ್ರಕರಣ: ಇಡಿ ಅಧಿಕಾರಿಗಳಿಂದ ಎಂ/ಎಸ್ ಸುಕೃತಿ ಫುಡ್ಸ್ ಕಂಪನಿ ಪ್ರಮೋಟರ್ ಅರೆಸ್ಟ್

ಹೈದರಾಬಾದ್‌: ದೇಶಾದ್ಯಂತ ಭಾರಿ ಸುದ್ದಿ ಮಾಡಿದ್ದ ತಿರುಮಲ ತಿರುಪತಿ ದೇವಸ್ಥಾನಕ್ಕೆ ಕಲಬೆರಕೆ ತುಪ್ಪ ಪೂರೈಕೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಕಂಪನಿ ಪ್ರಮೋಟರ್‌ನನ್ನ ಬಂಧಿಸಿದ್ದಾರೆ.

ಎಂ/ಎಸ್ ಸುಕೃತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಮೋಟರ್‌ ಕೈಲಾಶ್‌ ಚಂದ್‌ ಮಂಗಲಾ ಬಂಧಿತ ಆರೋಪಿ. ‌ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ 2002 ರ ಸೆಕ್ಷನ್‌ 19ರ ಅಡಿಯಲ್ಲಿ ಕೈಲಾಶ್ ಚ್ಂದ್ ಮಂಗಲಾ ನನ್ನು ಬಂಧಿಸಲಾಗಿದೆ. ಬಳಿಕ ವಿಶಾಖಪಟ್ಟಣಂ ನಲ್ಲಿರುವ ಪಿಎಂಎಲ್‌ಎ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಕೋರ್ಟ್‌ ಕೈಲಾಶ್‌ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತಿರುಪತಿ ತಿರುಮಲ ದೇವಸ್ಥಾನಂ ಸಮಿತಿಗೆ ಬರೋಬ್ಬರಿ 230 ಕೋಟಿ ಮೌಲ್ಯದ ಕಲಬೆರಕೆ ತುಪ್ಪ ಪೂರೈಕೆ ಮಾಡಲಾಗಿತ್ತು. ಈ ಬಗ್ಗೆ ತಿರುಪತಿ ಪೂರ್ವ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಈ ಎಫ್‌ಐಆರ್‌ ಆಧರಿಸಿ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದರು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್‌ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್‌ಐಆರ್‌ ಉಲ್ಲೇಖವಾಗಿದ್ದವು.

ಇಡಿ ತನಿಖೆಯಲ್ಲಿ ರಿಫೈನ್ಡ್‌ ಪಾಮ್‌ ಆಯಿಲ್‌, ಪಾಮ್‌ ಕರ್ನಲ್‌ ಆಯಿಲ್‌, ಪಾಮೋಲಿನ್‌ ಸೇರಿದಂತೆ ಎಂಜಿ-90, ಮೊನೊಗ್ಲಿಸರೈಡ್ಸ್‌, Myvaset Soft 400 ಮತ್ತು ಅಸಿಟಿಕ್‌ ಆಸಿಡ್‌ ಎಸ್ಟರ್‌ ಮುಂತಾದ ಹಲವು ರಾಸಾಯನಿಕಗಳನ್ನ ಬಳಸಿ ಕಲಬೆರಕೆ ತುಪ್ಪ ತಯಾರಿಸಲಾಗುತ್ತಿತ್ತು. ನಂತರ ಈ ಉತ್ಪನ್ನವನ್ನ ‘Agmark Special Grade Cow Ghee’ ಎಂದು ಹೆಸರಿಸಿ ಟಿಟಿಡಿಗೆ ಪೂರೈಸಲಾಗುತ್ತಿತ್ತು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

2019 ರಿಂದ 2024 ರ ಅವಧಿಯಲ್ಲಿ ಈ ವಂಚನೆ ನಡೆದಿದ್ದು, ಒಟ್ಟು 230 ಕೋಟಿ ಮೌಲ್ಯದಷ್ಟು ಕಲಬೆರಕೆ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಪೂರೈಕೆ ಮಾಡಲಾಗಿದೆ ಎಂದು ಇಡಿ ತಿಳಿಸಿದೆ. ಇದರಲ್ಲಿ ಸುಮಾರು 96 ಕೋಟಿ ಮೌಲ್ಯದ ಕಲಬೆರಕೆ ತುಪ್ಪವನ್ನ ಕೈಲಾಶ್‌ ಚಂದ್‌ ಮಂಗಲಾ ಖುದ್ದು ಉತ್ಪಾದಿಸಿದ್ದ ಎಂದೂ ಇಡಿ ತಿಳಿಸಿದೆ.

ಎಂ/ಎಸ್ ಸುಕೃತಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಪ್ರಮೋಟರ್‌ ಆಗಿರುವ ಕೈಲಾಶ್‌ ಚಂದ್‌ ಮಂಗಲಾ ಈ ಪ್ರಕರಣದಲ್ಲಿ ಸಹ ಸಂಚುಕೋರನಾಗಿದ್ದಾನೆ. ಕಲಬೆರಕೆ ಪದಾರ್ಥಗಳ ಖರೀದಿಗೆ ಕೈಲಾಶ್‌ ನೆರವಾಗಿದ್ದು, ತಮ್ಮ ಕಾರ್ಖಾನೆಯಲ್ಲಿ ಕಲಬೆರಕೆ ತುಪ್ಪ ತಯಾರಿಸುತ್ತಿದ್ದ ಎಂದು ಇಡಿ ಹೇಳಿದೆ.

ಮೆಸರ್ಸ್ ಶ್ರೀ ವೈಷ್ಣವಿ ಡೈರಿ ಸ್ಪೆಷಾಲಿಟೀಸ್ ಪ್ರೈವೇಟ್ ಲಿಮಿಟೆಡ್, ಮೆಸರ್ಸ್ ಮಲ್ಗಂಗಾ ಮಿಲ್ಕ್ ಮತ್ತು ಅಗ್ರೋ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಮೆಸರ್ಸ್ ಎಆರ್ ಡೈರಿ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಹಲವು ಕಂಪನಿಗಳ ಮೂಲಕ ಕಲಬೆರಕೆ ತುಪ್ಪ ಪೂರೈಕೆ ಮಾಡಿದ್ದಾನೆ. ಕಲಬೆರಕೆ ತುಪ್ಪ ಮಾರಾಟಕ್ಕಾಗಿ ನಕಲಿ ದಾಖಲೆಗಳನ್ನೂ ಸೃಷ್ಟಿಸಿದ್ದ ಅನ್ನೋದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಕೈಲಾಅಶ್ ಚಂದ್ ಮಂಗಲಾನನ್ನು ಇಡಿ ಅಧಿಕಾರಿಗಳು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!