LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಆನ್‌ಲೈನ್‌ನಲ್ಲಿ ಹೂಡಿಕೆ ಮಾಡುವ ಮುನ್ನ ಎಚ್ಚರ..! ಹೆಚ್ಚಿನ ಲಾಭದ ಆಸೆಗೆ ₹24.49 ಲಕ್ಷ ಕಳೆದುಕೊಂಡ ವ್ಯಕ್ತಿ

ದಾವಣಗೆರೆ: ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ದಾವಣಗೆರೆ ನಗರದ ಶಂಕರ ವಿಹಾರ ಪ್ರದೇಶದ ವ್ಯಕ್ತಿಯೊಬ್ಬರಿಗೆ ಆನ್‌ಲೈನ್ ಮೂಲಕ ಬರೋಬ್ಬರಿ ₹24.49 ಲಕ್ಷ ವಂಚನೆ ಮಾಡಲಾಗಿದೆ.

ಆಗಸ್ಟ್ 8ರಂದು ವಾಟ್ಸಾಪ್ ಮೂಲಕ ಬಂದ ಸಂದೇಶವನ್ನು ನಂಬಿದ ವ್ಯಕ್ತಿ ಆರಂಭದಲ್ಲಿ ₹4 ಲಕ್ಷ ಹೂಡಿಕೆ ಮಾಡಿದ್ದರು. ಬಳಿಕ ₹100 ವಿತ್‌ಡ್ರಾ ಮಾಡಿಕೊಂಡು ಹಣ ಹಿಂಪಡೆಯಲು ಸಾಧ್ಯವಾಗುತ್ತದೆಯೇ ಎಂದು ಪರಿಶೀಲಿಸಿದ್ದರು. ಹಣ ಹಿಂಪಡೆಯಲು ಸಾಧ್ಯವಾಗಿದ್ದರಿಂದ ಆನ್‌ಲೈನ್ ಹೂಡಿಕೆ ನಿಜವೆಂದು ನಂಬಿದ ಅವರು, ವಂಚಕರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಹಣ ವರ್ಗಾಯಿಸಿದ್ದಾರೆ.

ಮೊದಲಿಗೆ ತಮ್ಮ ಉಳಿತಾಯದ ಹಣವನ್ನು ಹೂಡಿಕೆ ಮಾಡಿದ್ದ ಅವರು, ನಂತರ ಚಿನ್ನಾಭರಣಗಳನ್ನು ಅಡಮಾನವಿಟ್ಟು ಹಣ ಪಡೆದಿದ್ದಾರೆ. ಅಲ್ಲದೆ ಸ್ನೇಹಿತರು ಹಾಗೂ ಸಂಬಂಧಿಕರಿಂದ ಸಾಲ ಪಡೆದು ವಂಚಕರ ಖಾತೆಗಳಿಗೆ ಹಣ ವರ್ಗಾಯಿಸಿದ್ದಾರೆ.

ವಂಚಕರು ಅವರ ಹೆಸರಿನಲ್ಲಿ ತೆರೆದಿದ್ದ ಆನ್‌ಲೈನ್ ಖಾತೆಯಲ್ಲಿ ₹99.19 ಲಕ್ಷ ಹಣ ಇರುವುದಾಗಿ ತೋರಿಸಲಾಗಿತ್ತು. ಆದರೆ ಆ ಹಣವನ್ನು ಹಿಂಪಡೆಯಲು ಸಾಧ್ಯವಾಗದ ಹಿನ್ನೆಲೆಯಲ್ಲಿ ತಾನು ವಂಚನೆಗೆ ಒಳಗಾಗಿರುವುದು ಅವರಿಗೆ ತಿಳಿದುಬಂದಿದೆ.

ಈ ಕುರಿತು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿರುವ ಅವರು, ವಂಚಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

* ಮೈಸೂರಿಗೆ ಅಭಿಮನ್ಯುವಿಗೆ ಅದ್ಧೂರಿ ಸ್ವಾಗತ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಭರದಿಂದ ಸಾಗುತ್ತಿರುವ ನಡುವೆಯೇ, ಕಳೆದ ವರ್ಷದವರೆಗೆ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಅಭಿಮನ್ಯು ಸೋಮವಾರ ಮೈಸೂರಿಗೆ ಆಗಮಿಸಿದೆ.

ಚಿನ್ನದ ಅಂಬಾರಿ ಹೊರುವ ಜವಾಬ್ದಾರಿಯಿಂದ ನಿವೃತ್ತಿಯಾಗಿರುವ ಅಭಿಮನ್ಯುವನ್ನು ಈ ಬಾರಿಯ ದಸರಾ ಮಹೋತ್ಸವದಲ್ಲಿ ನಿಶಾನೆ ಆನೆಯಾಗಿ ಆಯ್ಕೆ ಮಾಡಲಾಗಿದೆ. ಅಭಿಮನ್ಯುವಿಗೆ ದಸರಾ ವೇಳೆ ಸೂಕ್ತ ಬೀಳ್ಕೊಡುಗೆ ನೀಡಬೇಕು ಎಂದು ಆತನ ಅಭಿಮಾನಿಗಳು ಈ ಹಿಂದೆ ಒತ್ತಾಯಿಸಿದ್ದರು.

ಅಭಿಮಾನಿಗಳ ಬೇಡಿಕೆಯಂತೆ ಅಭಿಮನ್ಯು ಈ ಬಾರಿಯ ದಸರಾ ಮಹೋತ್ಸವದಲ್ಲಿ ಭಾಗವಹಿಸುತ್ತಿದ್ದಾನೆ. ಸೋಮವಾರ ಅರಮನೆ ಮಂಡಳಿ ವತಿಯಿಂದ ಅಭಿಮನ್ಯುವಿಗೆ ಸಾಂಪ್ರದಾಯಿಕವಾಗಿ ಅದ್ಧೂರಿ ಸ್ವಾಗತ ನೀಡಲಾಯಿತು. ಈ ವೇಳೆ ಅಭಿಮಾನಿಗಳು ಕೆಂಪು ಮತ್ತು ಚಿನ್ನದ ಬಣ್ಣದ ವಿಶೇಷ ಪೇಟವನ್ನು ಉಡುಗೊರೆಯಾಗಿ ನೀಡಿದರು.

ಈ ಪೇಟವು ನಾಲ್ವಡಿ ಕೃಷ್ಣರಾಜ ಒಡೆಯರ್ ಧರಿಸುತ್ತಿದ್ದ ಪೇಟದ ಮಾದರಿಯಲ್ಲಿ ತಯಾರಿಸಲಾಗಿದ್ದು, ಸುಮಾರು 6ರಿಂದ 8 ಕೆ.ಜಿ. ತೂಕ ಹೊಂದಿದೆ.

ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಡಾ. ಪ್ರಭುಗೌಡ ಮಾತನಾಡಿ, ಸರ್ಕಾರ ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಆಯ್ಕೆ ಮಾಡಿದೆ. ಇಂದು ಪೂಜೆ ಸಲ್ಲಿಸುವ ಮೂಲಕ ಆನೆಗೆ ಸ್ವಾಗತ ನೀಡಲಾಗಿದೆ. ಅಭಿಮನ್ಯುವಿಗೆ ವಿಶೇಷ ತರಬೇತಿಯ ಅಗತ್ಯವಿಲ್ಲ. ಆತ ಶಬ್ದಗಳಿಗೆ ಈಗಾಗಲೇ ಒಗ್ಗಿಕೊಂಡಿದ್ದಾನೆ. ಮಂಗಳವಾರದಿಂದ ಅಭಿಮನ್ಯು ತರಬೇತಿಯಲ್ಲಿ ಭಾಗವಹಿಸಲಿದ್ದಾನೆ ಎಂದು ತಿಳಿಸಿದರು.

ಅಕ್ಟೋಬರ್ 7, 9 ಮತ್ತು 12ರಂದು ಫಿರಂಗಿ ಸಿಡಿಸುವ ತರಬೇತಿ ನೀಡಲಾಗುವುದು. ಸಾರ್ವಜನಿಕರು ಆನೆಗಳಿಂದ ಅಂತರ ಕಾಯ್ದುಕೊಂಡು ವೀಕ್ಷಿಸಬೇಕು. ಯಾವುದೇ ಕಾರಣಕ್ಕೂ ಆನೆಗಳ ಸಮೀಪ ಹೋಗಬಾರದು ಎಂದು ಅವರು ಮನವಿ ಮಾಡಿದರು.

ಚಾಮರಾಜ ಕ್ಷೇತ್ರದ ಶಾಸಕ ವಿ. ಶ್ರೀವತ್ಸ ಮಾತನಾಡಿ, “ಅಭಿಮನ್ಯು ಇಲ್ಲದೆ ದಸರಾ ಇಲ್ಲ ಎಂಬಂತಾಗಿದೆ. ಕೊನೆಗೂ ಆತ ದಸರಾಕ್ಕೆ ಬಂದಿದ್ದಾನೆ. ಅಭಿಮನ್ಯುವನ್ನು ನಿಶಾನೆ ಆನೆಯಾಗಿ ಆಯ್ಕೆ ಮಾಡಿರುವ ಸರ್ಕಾರಕ್ಕೆ ಧನ್ಯವಾದ ಸಲ್ಲಿಸುತ್ತೇನೆ. ನಾನೂ ಪೂಜೆಯಲ್ಲಿ ಭಾಗವಹಿಸಿದ್ದು ಸಂತಸ ತಂದಿದೆ” ಎಂದು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!