LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ಕಟ್ಟದ ಮಾಲೀಕರ ಗಮನಕ್ಕೆ: 2400 ಚದರ ಅಡಿವರೆಗಿನ ಕಟ್ಟಡಗಳಿಗೆ ಒಸಿ ವಿನಾಯಿತಿ; ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಬೆಸ್ಕಾಂ ಮನವಿ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ 2400 ಚದರ ಅಡಿವರೆಗಿನ ( +ಶೇ. 20ರಷ್ಟು ಹೆಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ನಿರ್ಮಿಸಿರುವ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭ ಪ್ರಮಾಣಪತ್ರ (ಒಸಿ) ವಿನಾಯಿತಿ ನೀಡಲಾಗಿದ್ದು, ಜಿ+3 ಅಥವಾ ಸಿಲ್ಟ್‌ ಪಾರ್ಕಿಂಗ್‌ + 4 ಮಹಡಿಗಳಿರುವ ವಸತಿ ಕಟ್ಟಡಗಳ ಮಾಲೀಕರು ಜುಲೈ 6, 2026ರೊಳಗೆ ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಬೆಸ್ಕಾಂ ಮನವಿ ಮಾಡಿದೆ.

ಮೇ 31, 2026ರಂದು ಅಥವಾ ಅದಕ್ಕೂ ಮೊದಲು ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಮಾತ್ರ ಅನ್ವಯವಾಗುವಂತೆ 2400(+ಶೇ.20ರಷ್ಟು ಹೆಚುವರಿ ವ್ಯತ್ಯಾಸದ ಮಿತಿಯೊಂದಿಗೆ) ಅಳತೆಯ ನಿವೇಶನಗಳಲ್ಲಿ ಒಸಿ ಇಲ್ಲದೆ ನಿರ್ಮಿಸಿರುವ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಲು ಒಂದು ಬಾರಿಯ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಸೋಮವಾರ (ಜೂನ್‌ 22) ರಂದು ಆದೇಶ ಹೊರಡಿಸಿ 15 ದಿನಗಳೊಳಗೆ ಅರ್ಜಿ ಸಲ್ಲಿಸಲು ಸೂಚಿಸಿತ್ತು.

ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ವ್ಯಾಪ್ತಿಯೊಳಿಗಿರುವ ವಸತಿ ಕಟ್ಟಡಗಳಿಗೆ ಮಾತ್ರ ಶಾಶ್ವತ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬೆಸ್ಕಾಂ ಈಗಾಗಲೇ ಚಾಲನೆ ನೀಡಿದ್ದು, ಸಾರ್ವಜನಿಕರು ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗಳಿಗೆ ಭೇಟಿ ನೀಡಿ, ಅಥವಾ ಬೆಸ್ಕಾಂ ಆನ್ಲೈನ್ ಜಾಲತಾಣದ ಮೂಲಕ ಜುಲೈ 6ರೊಳಗೆ ಅರ್ಜಿ ಸಲ್ಲಿಸಿ ಯೋಜನೆಯ ಉಪಯೋಗ ಪಡೆಯಲು ಬೆಸ್ಕಾಂ ವಿನಂತಿಸಿದೆ.

ಶಾಶ್ವತ ವಿದ್ಯುತ್‌ ಸಂಪರ್ಕ ಪಡೆಯಲು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಸಾರ್ವತ್ರಿಕ ರಜೆ ದಿನಗಳಾದ ಜೂನ್‌ 26 (ಮೊಹರಂ ಕೊನೆದಿನ), ಜೂನ್‌ 27 (ನಾಲ್ಕನೇ ಶನಿವಾರ), 28 (ಭಾನುವಾರ) ಹಾಗೂ ಜುಲೈ 5 (ಭಾನುವಾರ) ರಂದು ಬೆಸ್ಕಾಂನ ಉಪ ವಿಭಾಗ ಕಚೇರಿಗಳು ಕಾರ್ಯನಿರ್ವಹಿಸುತ್ತವೆ.

ಶಾಶ್ವತ ವಿದ್ಯುತ್‌ ಸಂಪರ್ಕಕ್ಕೆ ಮಾರ್ಗಸೂಚಿ

ಶಾಶ್ವತ ಸಂಪರ್ಕ ಕೋರಿರುವ ಅರ್ಜಿಗಳು: ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡು, ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಮಾಲೀಕರು ಅರ್ಜಿ ಸಲ್ಲಿಸಿದ್ದರೆ, ಅರ್ಜಿದಾರರು/ಮಾಲೀಕರು ಸೇವಾ ಸಂಪರ್ಕ ಕಲ್ಪಿಸುವ ಅಧಿಕಾರಿಗಳ ಸಮ್ಮುಖದಲ್ಲಿ ಕಟ್ಟಡದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಶಾಶ್ವತ ವಿದ್ಯುತ್ ಸಂಪರ್ಕವನ್ನು ಪಡೆಯಬೇಕು.

ತಾತ್ಕಾಲಿಕ ವಿದ್ಯುತ್ ಸಂಪರ್ಕವನ್ನು ಮಾತ್ರ ಪಡೆದ ಪ್ರಕರಣಗಳು: ಮೇ 31, 2026ರೊಳಗೆ ಕಟ್ಟಡ ಪೂರ್ಣಗೊಂಡು, ತಾತ್ಕಾಲಿಕ ವಿದ್ಯುತ್‌ ಸಂಪರ್ಕದಲ್ಲಿದ್ದು, ಶಾಶ್ವತ ಸಂಪರ್ಕಕ್ಕೆ ಅರ್ಜಿ ಸಲ್ಲಿಸದಿದ್ದಲ್ಲಿ, ಅರ್ಜಿದಾರರು/ಮಾಲೀಕರು ಕಟ್ಟಡದ ಸಮ್ಮುಖದಲ್ಲಿ ತೆಗೆಸಿದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಭೇಟಿ ನೀಡಿ ಅಥವಾ ಬೆಸ್ಕಾಂ ಆನ್ಲೈನ್ ಜಾಲತಾಣದ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳಬೇಕು.

ತಾತ್ಕಾಲಿಕ / ಶಾಶ್ವತ ಸಂಪರ್ಕ ಪಡೆಯದ ಪ್ರಕರಣಗಳು: ಮೇ 31,2026ರೊಳಗೆ ವಸತಿ ಕಟ್ಟಡ ಪೂರ್ಣಗೊಂಡಿದ್ದರೂ ಯಾವುದೇ ತಾತ್ಕಾಲಿಕ ಅಥವಾ ಶಾಶ್ವತ ವಿದ್ಯುತ್ ಸಂಪರ್ಕಕ್ಕೆ ಅರ್ಜಿ ಸಲ್ಲಿಸದಿದ್ದರೆ ಅರ್ಜಿದಾರರು/ಮಾಲೀಕರು ಕಟ್ಟಡದ ಸಮ್ಮುಖದಲ್ಲಿ ತೆಗೆಸಿದ ಜಿಯೋ ಟ್ಯಾಗ್ ಆಧರಿತ ಫೋಟೋವನ್ನು ಸಲ್ಲಿಸಿ ಹತ್ತಿರದ ಬೆಸ್ಕಾಂ ಉಪ ವಿಭಾಗ ಕಚೇರಿಗೆ ಭೇಟಿ ನೀಡಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ನೋಂದಣಿ ಮಾಡಿಕೊಳ್ಳಬೇಕು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ರಾಜ್ಯದ ಬಸ್ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಸಿದ್ಧರಾಮಯ್ಯ5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಇಂದಿನಿಂದ ಜು.1 ರವರೆಗೆ ಪಲ್ಸ್ ಪೋಲಿಯೋ: 65 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿBREAKING: ರಾಜ್ಯದಲ್ಲಿ 13,675 ಅಕ್ರಮ ವಲಸಿಗರು ಪತ್ತೆ: ಜಿಲ್ಲಾವಾರು ಪಟ್ಟಿ ಸಿದ್ಧಪಡಿಸಿದ ಗೃಹ ಇಲಾಖೆ2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಆಯ್ಕೆ ಬೇಡ: ವಿವಾದ ಸೃಷ್ಟಿಸಲಿದೆಯೇ ಮಾಜಿ ಕ್ರಿಕೆಟಿಗನ ಹೇಳಿಕೆ?ಇಂದು ಬೆಂಗಳೂರು ಮೊಟ್ಟಮೊದಲ ಸುರಂಗ ರಸ್ತೆ ನಿರ್ಮಾಣಕ್ಕೆ ಸಿಎಂ ಶಂಕುಸ್ಥಾಪನೆBREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊ