LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕ ಅದಾಲತ್ ನಲ್ಲಿ ವ್ಯಾಜ್ಯ ಇತ್ಯರ್ಥ ಬಳಿಕ ಕೋರ್ಟ್ ಮೊರೆ ಹೋದ ಅರ್ಜಿದಾರನಿಗೆ ಶಾಕ್: 25,000 ರೂ. ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಭೂ ವಿವಾದಕ್ಕೆ ಸಂಬಂಧಿಸಿದ ವ್ಯಾಜ್ಯವೊಂದು ಲೋಕ ಅದಾಲತ್ ನಲ್ಲಿ ಸಂಧಾನವಾದ ನಂತರ ಇತ್ಯರ್ಥ ಮಾಡಿಕೊಂಡು ಮೂರು ವರ್ಷದ ನಂತರ ಅದನ್ನು ಪ್ರಶ್ನಿಸಿದ್ದ ಅರ್ಜಿದಾರನಿಗೆ ಹೈಕೋರ್ಟ್ 25,000 ರೂ. ದಂಡ ವಿಧಿಸಿದೆ/.

ಲೋಕ ಅದಾಲತ್ ನಲ್ಲಿ ಇತ್ಯರ್ಥವಾಗಿದೆ ಎಂದು ಸಂಧಾನ ಅರ್ಜಿಯನ್ನು ಪುರಸ್ಕರಿಸಿ ಸಿವಿಲ್ ದಾವೆ ವಜಾಗೊಳಿಸಿ 2021ರ ಆಗಸ್ಟ್ 14ರಂದು ಚಿಕ್ಕಮಗಳೂರಿನ ತರೀಕೆರೆಯ ಹಿರಿಯ ಸಿವಿಲ್ ನ್ಯಾಯಾಲಯ ಮಾಡಿದ ಆದೇಶ ರದ್ದು ಕೋರಿ ಚೇತನ್ ಕುಮಾರ್ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯ ಪೀಠ ವಜಾಗೊಳಿಸಿದೆ.

4 ವಾರಗಳಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ದಂಡದ ಮೊತ್ತವನ್ನು ಪಾವತಿಸಬೇಕು. ಜುಲೈ 14 ರ ಒಳಗೆ ದಂಡ ಪಾವತಿಸದಿದ್ದರೆ ಭೂಕಂದಾಯ ಹಿಂಬಾಕಿ ಎಂದು ಪರಿಗಣಿಸಿ ಅದನ್ನು ವಸೂಲಿ ಮಾಡಬಹುದಾಗಿದೆ ಎಂದು ಜಿಲ್ಲಾಡಳಿತಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಾದ ಪ್ರತಿವಾದ ಆಲಿಸಿದ ನಂತರ ನ್ಯಾಯಾಲಯ ಲೋಕ ಅದಾಲತ್ ಗೆ ಹೋಗಿ ಸಹಿ ಮಾಡಿ ನಂತರ ಸಂಧಾನ ಪತ್ರದ ವಿಚಾರ ಗೊತ್ತಿರಲಿಲ್ಲ ಎಂದರೆ ಹೇಗೆ? ಕಾನೂನು ಪ್ರಕ್ರಿಯೆ ಆರಂಭಿಸಲು ನ್ಯಾಯಾಲಯ ಮುಂದಾಗ ಬೇಕೇ? ಈ ಪ್ರಕರಣವನ್ನು ವಕೀಲರ ಪರಿಷತ್ ಗೆ ಕಳುಹಿಸಲಾಗುತ್ತದೆ. ವಕೀಲರು ಸಂಧಾನದ ಬಗ್ಗೆ ನಿಮಗೆ ಮಾಹಿತಿ ನೀಡಿರಲಿಲ್ಲ ಎನ್ನುವ ವಿಚಾರದ ಕುರಿತು ತನಿಖೆಗೆ ಆದೇಶಿಸಬೇಕಾಗುತ್ತದೆ ಎಂದು ಹೇಳಿದೆ.

ರಾಜೀ ಮಾಡಿಕೊಂಡು ಈ ರೀತಿ ವಾದಿಸುತ್ತೀರಿ, ಅವರು ಏನೆಂದುಕೊಂಡಿದ್ದಾರೆ, ಇದು ನ್ಯಾಯಾಲಯವನ್ನು ಮೀರುವ ಯತ್ನ ಎಂದು ಹೈಕೋರ್ಟ್ ಖಾರವಾಗಿ ಹೇಳಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!