LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಜೂ. 25 ತುಂಗಭದ್ರಾ ಜಲಾಶಯದ ನೂತನ 33 ಸ್ವಿಲ್‌ ವೇ ಗೇಟುಗಳ ಲೋಕಾರ್ಪಣೆ: ಸಿಎಂ ಡಿ.ಕೆ. ಶಿವಕುಮಾರ್ ಸೇರಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಭಾಗಿ

ಕೊಪ್ಪಳ: ಜೂನ್ 25 ರಂದು ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿರುವ 33 ಸ್ವಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರು ಹಾಗೂ ಮೂರು ರಾಜ್ಯಗಳಿಗೆ ಸಂಬಂಧಪಟ್ಟ ಇಲಾಖೆ ಸಚಿವರು ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯುವ ಮುನಿರಾಬಾದ್‌ನ ಸರ್ಕಾರಿ ಶಾಲಾ ಆವರಣ ಹಾಗೂ ಐಆರ್‌ಬಿಯ ಹೆಲಿಪ್ಯಾಡ್‌ಗಳಿಗೆ ಸಂಸದ ಕೆ.ರಾಜಶೇಖರ ಹಿಟ್ನಾಳ, ಶಾಸಕ ಕೆ.ರಾಘವೇಂದ್ರ ಹಿಟ್ನಾಳ, ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಮಾಜಿ ಸಚಿವರಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ವಿಜಯನಗರ ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ವಿಜಯನಗರ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ.ಮಂಜುನಾಥ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಬಾವಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್‌ಕುಮಾರ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಎಸ್.ಬಿ ಮಲ್ಲಿಗೆವಾಡ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಪೂರ್ವಭಾವಿ ಸಭೆ

ಕೊಪ್ಪಳ: ಜೂನ್ 25 ರಂದು ಜಿಲ್ಲೆಯಲ್ಲಿ ನಡೆಯುವ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಅಚ್ಚುಕಟ್ಟು ವ್ಯವಸ್ಥೆ ಮಾಡಲು ಸಮಿತಿಗಳನ್ನು ರಚಿಸಿ ಕರ್ತವ್ಯ ಹಂಚಿಕೆ ಮಾಡಲಾಗಿದ್ದು, ಅದರನ್ವಯ ಅಧಿಕಾರಿಗಳು ಜವಾಬ್ದಾರಿ ಹಾಗೂ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜೂನ್ 25 ರಂದು ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ತುಂಗಭದ್ರಾ ಜಲಾಶಯಕ್ಕೆ ನೂತನವಾಗಿ ಅಳವಡಿಸಿರುವ 33 ಸ್ವಿಲ್‌ವೇ ಗೇಟುಗಳ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸರ್ಕಾರದ ಸಚಿವರುಗಳು ಹಾಗೂ ಮೂರು ರಾಜ್ಯಗಳಿಗೆ ಸಂಬಂಧಪಟ್ಟ ಇಲಾಖೆ ಸಚಿವರುಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಚ್ಚುಕಟ್ಟು ವ್ಯವಸ್ಥೆ ಹಾಗೂ ಕರ್ತವ್ಯ ನಿರ್ವಹಣೆಗಾಗಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸೋಮವಾರದಂದು ಮುನಿರಾಬಾದ್‌ನ ಇಂಡಿಯಾ ರಿಸರ್ವ್ ಬಟಾಲಿಯನ್‌ನ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂದು ಮುಖ್ಯಮಂತ್ರಿಗಳು ಸೇರಿದಂತೆ ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು ಜಿಲ್ಲೆಗೆ ಆಗಮಿಸಲಿದ್ದು, ತುಂಗಭದ್ರಾ ಜಲಾಶಯದ ನೂತನ ಸ್ವಿಲ್‌ವೇ ಗೇಟುಗಳನ್ನು ಲೋಕಾರ್ಪಣೆಗೊಳಿಸಿ, ನಂತರ ಐಆರ್‌ಬಿಯ ಆಡಿಟೋರಿಯಂ ಸಭಾಂಗಣದಲ್ಲಿ ಪ್ರಮುಖ ಸಮಾನಾಂತರ ಜಲಾಶಯಗಳು ಹಾಗೂ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ನಡೆಸುವರು. ನಂತರ ಮುನಿರಾಬಾದ್‌ನ ಸರ್ಕಾರಿ ಶಾಲಾ ಆವರಣದಲ್ಲಿ ವೇದಿಕೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಆದ್ದರಿಂದ ಈ ಉದ್ದೇಶಕ್ಕಾಗಿ ನಿರ್ಮಿಸಲಾದ ಹೆಲಿಪ್ಯಾಡ್, ವೇದಿಕೆ ಕಾರ್ಯಕ್ರಮ ಸೇರಿದಂತೆ ಪ್ರತಿಯೊಂದು ವಿಷಯಗಳ ಬಗ್ಗೆ ಅಧಿಕಾರಿಗಳು ಹೆಚ್ಚಿನ ಎಚ್ಚರಿಕೆ ವಹಿಸಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಲಿಪ್ಯಾಡ್, ವೇದಿಕೆ ಕಾರ್ಯಕ್ರಮದ ಸ್ಥಳ, ಐಆರ್‌ಬಿ ಗಳಲ್ಲಿ ಆರೋಗ್ಯ ಇಲಾಖೆಯಿಂದ ಅಂಬ್ಯುಲೆನ್ಸ್ ಗಳನ್ನು ಒದಗಿಸಬೇಕು. ಅಗ್ನಿಶಾಮಕ ದಳದಿಂದ ಸುಸಜ್ಜಿತ ವಾಹನ ಹಾಗೂ ಸೂಕ್ತ ರಕ್ಷಣಾ ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮದ ಅಂಗವಾಗಿ ಪಾಲ್ಗೊಳ್ಳುವ ಮುಖ್ಯಮಂತ್ರಿಗಳು, ಸಚಿವರು, ಪೈಲಟ್‌ಗಳು ಹಾಗೂ ಸಾರ್ವಜನಿಕರು ಸೇವಿಸುವ ಪ್ರತಿಯೊಂದು ಆಹಾರವನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯಿಂದ ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು. ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು. ನೀರಾವರಿ ಇಲಾಖೆಯಿಂದ ಕರ್ತವ್ಯ ಹಂಚಿಕೆ ಮಾಡಿ ನಿರ್ದಿಷ್ಟ ಸ್ಥಳಗಳಲ್ಲಿ ಸೂಕ್ತ ಮಾಹಿತಿಯೊಂದಿಗೆ ಅಧಿಕಾರಿಗಳನ್ನು ನಿಯೋಜಿಸಬೇಕು. ಲೋಕೋಪಯೋಗಿ ಇಲಾಖೆಯಿಂದ ಹೆಲಿಪ್ಯಾಡ್ ನಿರ್ಮಾಣ, ಇಲಾಖಾ ವ್ಯಾಪ್ತಿಯ ರಸ್ತೆಗಳ ದುರಸ್ಥಿಯನ್ನು ಕೈಗೊಳ್ಳಬೇಕು. ಅಬಕಾರಿ ಇಲಾಖೆಯು ಹೆಲಿಕ್ಯಾಪ್ಟರ್ ಪೈಲಟ್‌ಗಳ ಜವಾಬ್ದಾರಿ ನಿರ್ವಹಿಸಬೇಕು ಎಂದು ಹಂಚಿಕೆ ಮಾಡಲಾದ ಕರ್ತವ್ಯಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನಕಗಿರಿ ವಿಧಾನ ಸಭಾ ಕ್ಷೇತ್ರದ ಶಾಸಕ ಶಿವರಾಜ ತಂಗಡಗಿ ಅವರು ಮಾತನಾಡಿ, ವೇದಿಕೆ ಕಾರ್ಯಕ್ರಮದಲ್ಲಿ ಶಿಷ್ಠಾಚಾರ ಪಾಲನೆ ಕಡ್ಡಾಯ. ಈ ಬಗ್ಗೆ ನಿರ್ದಿಷ್ಟ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗುತ್ತದೆ. ವೇದಿಕೆ ಮೇಲೆ ಯಾರಿಗೂ ಅಗೌರವ ಉಂಟಾಗದಂತೆ ಹಾಗೂ ಗೊಂದಲಕ್ಕೆ ಆಸ್ಪದವಿಲ್ಲದಂತೆ ಶಿಷ್ಠಾಚಾರದಂತೆ ಆಸನಗಳ ವ್ಯವಸ್ಥೆ ಕಲ್ಪಿಸಬೇಕು. ಸಮಾನಾಂತರ ಜಲಾಶಯ ಹಾಗೂ ಪ್ರಮುಖ ನೀರಾವರಿ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿಯೊಂದಿಗೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಬೇಕು. ತುಂಗಭದ್ರಾ ನದಿಯು ಮೂರು ರಾಜ್ಯಗಳ ಜೀವನಾಡಿಯಾಗಿದ್ದು, ನೂತನವಾಗಿ ಅಳವಡಿಸಿದ ಸ್ವಿಲ್‌ಗೇಟುಗಳು ತಾಂತ್ರಿಕವಾಗಿ ಹೆಮ್ಮೆಯ ಪ್ರತೀಕವಾಗಿವೆ. ಕಡಿಮೆ ಅವಧಿಯಲ್ಲಿ ಗುಣಮಟ್ಟದ ಹಾಗೂ ಆಧುನಿಕ ಗೇಟುಗಳನ್ನು ಅಳವಡಿಸಿದ ತಂತ್ರಜ್ಞರು, ಕಾರ್ಮಿಕರಿಗೆ ಅಂದು ಸನ್ಮಾನಿಸಲಾಗುವುದು. ಆದ್ದರಿಂದ ಜವಾಬ್ದಾರಿ ಹಂಚಿಕೆಯಾದ ಅಧಿಕಾರಿಗಳು ನಿಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅವರು ಮಾತನಾಡಿ, ಮೂರು ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಸಚಿವರು, ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸಲಿದ್ದು, ಅವರ ಭದ್ರತೆ ಹಾಗೂ ಶಿಷ್ಠಾಚಾರ ಪಾಲನೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕರ್ತವ್ಯ ನಿರ್ವಹಿಸಿ ಎಂದು ಹೇಳಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಸಂಸದ ಕೆ.ರಾಜಶೇಖರ ಹಿಟ್ನಾಳ ಅವರು ಮಾತನಾಡಿ, ತುಂಗಭದ್ರಾ ನದಿ ಮೂರು ರಾಜ್ಯಗಳಿಗೆ ಸಂಬಂಧಿಸಿದ್ದಾದರೂ, ಅದರ ಜಲಾಶಯವಿರುವುದು ನಮ್ಮ ರಾಜ್ಯ ಹಾಗೂ ನಮ್ಮದೇ ಜಿಲ್ಲೆಯಲ್ಲಿ. ಹಾಗಾಗಿ ನಮ್ಮ ಜಿಲ್ಲೆ ಅಂದು ಆಕರ್ಷಣೆಯ ಕೇಂದ್ರ ಬಿಂದುವಾಗಲಿದ್ದು, ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ ಬಯ್ಯಾಪೂರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್.ಅರಸಿದ್ದಿ, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ ಅಮ್ಮಿನಬಾವಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಉಪವಿಭಾಗಾಧಿಕಾರಿ ಕ್ಯಾ.ಮಹೇಶ ಮಾಲಗಿತ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್‌ಕುಮಾರ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರು ಎಸ್.ಬಿ ಮಲ್ಲಿಗೆವಾಡ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
BREAKING: ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ದುರ್ಮರಣರಾಜ್ಯಾದ್ಯಂತ ಸ್ಮಾರ್ಟ್, ತಂತ್ರಜ್ಞಾನ ಆಧಾರಿತ ಪೊಲೀಸ್ ವ್ಯವಸ್ಥೆ: ಗೃಹ ಇಲಾಖೆಗೆ 100 ದಿನಗಳ ಕಾರ್ಯಯೋಜನೆಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಮಹಾರಾಷ್ಟ್ರ ಟಿಇಟಿ ಪರೀಕ್ಷೆ ರದ್ದು: ಮೂವರು ಅರೆಸ್ಟ್ಮಾಲಿವುಡ್‌ಗೆ ಯಾರು ಬೇಕಾದರೂ ಬನ್ನಿ, ಆದರೆ ಏನನ್ನೂ ಬದಲಿಸುವ ಪ್ರಯತ್ನ ಮಾಡಬೇಡಿ, ಇಲ್ಲಿಂದ ಕಲಿತುಕೊಂಡು ಹೋಗಿ ಅಷ್ಟೇ: ಪೃಥ್ವಿರಾಜ್ ಸುಕುಮಾರನ್ ಖಡಕ್ ಹೇಳಿಕೆ; ವಿಡಿಯೊBREAKING: ದುಷ್ಕರ್ಮಿಗಳಿಂದ ದಾಳಿಗೊಳಗಾಗಿದ್ದ ರೌಡಿಶೀಟರ್ ಸಾವುBREAKING NEWS: RSS ವಿರುದ್ಧ ಅವಹೇಳನಕಾರಿ ಹೇಳಿಕೆ: ಪ್ರಿಯಾಂಕ್ ಖರ್ಗೆ, ನಲಪಾಡ್ ಗೆ ಸಮನ್ಸ್ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ ಪ್ರಕರಣ ಹೇಡಿತನದ ಕೃತ್ಯ: ಬಿ.ಕೆ.ಹರಿಪ್ರಸಾದ್BIG NEWS: ಅಯೋಧ್ಯೆ ರಾಮಮಂದಿರ ದೇಣಿಗೆ ಕಳ್ಳತನ ಕೇಸ್: ಚಂಪತ್ ರಾಯ್ ರಾಜೀನಾಮೆ ದೃಢಪಡಿಸಿದ ಟ್ರಸ್ಟ್, ಜು. 11ರಂದು ಪ್ರಮುಖರ ಸಭೆBREAKING NEWS: ರಾಷ್ಟ್ರ ರಾಜಧಾನಿ ದೆಹಲಿ, ಕಣಿವೆ ರಾಜ್ಯ ಜಮ್ಮು –ಕಾಶ್ಮೀರದಲ್ಲಿ ಪ್ರಬಲ ಭೂಕಂಪ: ಆಫ್ಘಾನಿಸ್ತಾನದಲ್ಲೂ ನಡುಗಿದ ಭೂಮಿFIFA ವಿಶ್ವಕಪ್: ಕೊಲಂಬಿಯಾ ಪಂದ್ಯಕ್ಕೂ ಮುನ್ನ ವಿಶೇಷ ಚಿನ್ನದ ಬಣ್ಣದ ಬೂಟುಗಳಲ್ಲಿ ತರಬೇತಿ ಪಡೆದ ಕ್ರಿಸ್ಟಿಯಾನೊ ರೊನಾಲ್ಡೊ