LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶಕ್ತಿ ಯೋಜನೆ ದುರ್ಬಳಕೆಗೆ ಬ್ರೇಕ್: 250 ಕೋಟಿ ವೆಚ್ಚದಲ್ಲಿ 1 ಕೋಟಿ ಮಹಿಳೆಯರಿಗೆ 'ಶಕ್ತಿ ಸ್ಮಾರ್ಟ್ ಕಾರ್ಡ್' ವಿತರಣೆ ಮುಂದಾದ ಸರ್ಕಾರ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ ಜಾರಿಯಾಗಿ ಮೂರು ವರ್ಷಗಳಾಗುತ್ತ ಬಂದರೂ, ಇದರ ದುರ್ಬಳಕೆ ಕುರಿತು ದೂರುಗಳು ಕೇಳಿಬರುತ್ತಿದ್ದವು. ಹೊರರಾಜ್ಯದ ಮಹಿಳೆಯರು ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸಿ KSRTC ಹಾಗೂ BMTC ಸೇರಿದಂತೆ ನಾಲ್ಕೂ ಸಾರಿಗೆ ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುತ್ತಿರುವುದರಿಂದ ಸಾರಿಗೆ ಸಂಸ್ಥೆಗಳಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿತ್ತು. ಈ ಅಕ್ರಮ ಮತ್ತು ದುರ್ಬಳಕೆಗೆ ತಡೆ ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಇದೀಗ 250 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ ಸುಮಾರು 1 ಕೋಟಿ ಮಹಿಳೆಯರಿಗೆ 'ಶಕ್ತಿ ಸ್ಮಾರ್ಟ್ ಕಾರ್ಡ್' ನೀಡಲು ಅಧಿಕೃತವಾಗಿ ಟೆಂಡರ್ ಕರೆದಿದೆ.

ಈ ನೂತನ ಯೋಜನೆಯಡಿ ಪ್ರಾಯೋಗಿಕವಾಗಿ ಮೊದಲಿಗೆ ಬೆಂಗಳೂರಿನ BMTC ಮಹಿಳಾ ಪ್ರಯಾಣಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲಾಗುವುದು, ತದನಂತರ ಉಳಿದ ಸಾರಿಗೆ ನಿಗಮಗಳ ವ್ಯಾಪ್ತಿಗೆ ವಿಸ್ತರಿಸಲಾಗುತ್ತದೆ. ಉಚಿತ ಪ್ರಯಾಣದ ದುರ್ಬಳಕೆ ತಡೆಯಲು ಕರ್ನಾಟಕದ ವೋಟರ್ ಐಡಿ (ಮತದಾರರ ಗುರುತಿನ ಚೀಟಿ) ಹೊಂದಿರುವವರಿಗೆ ಮಾತ್ರ ಈ ಸ್ಮಾರ್ಟ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ. ಇದರಿಂದಾಗಿ ಬೇರೆ ರಾಜ್ಯದ ಮಹಿಳೆಯರು ನಕಲಿ ದಾಖಲೆ ಬಳಸಿ ಪ್ರಯಾಣಿಸುವುದಕ್ಕೆ ಪೂರ್ಣ ವಿರಾಮ ಬೀಳಲಿದೆ. ಇಷ್ಟೇ ಅಲ್ಲದೆ, ಈ ಸ್ಮಾರ್ಟ್ ಕಾರ್ಡ್ ಅನ್ನು 'ನಮ್ಮ ಮೆಟ್ರೋ' ಸಂಚಾರಕ್ಕೂ ಬಳಸಲು ಅವಕಾಶ ಕಲ್ಪಿಸುವ ಚಿಂತನೆಯಿದ್ದು, BMTC ಯಲ್ಲಿ ಈಗಾಗಲೇ 11,000 ಹೊಸ ಇಟಿಎಂ (ETM) ಯಂತ್ರಗಳನ್ನು ಗುತ್ತಿಗೆ ಆಧಾರದಲ್ಲಿ ಪಡೆಯಲಾಗಿದೆ.

ಉಚಿತವಾಗಿ ವಿತರಿಸಲಾಗುವ ಈ ಸ್ಮಾರ್ಟ್ ಕಾರ್ಡ್‌ನಲ್ಲಿ ಅತ್ಯಾಧುನಿಕ ಎನ್‌‌ಎಫ್‌ಸಿ (NFC) ತಂತ್ರಜ್ಞಾನವನ್ನು ಬಳಸಲಾಗುತ್ತಿದ್ದು, ಮಹಿಳೆಯರು ಹಾಗೂ ತೃತೀಯಲಿಂಗಿಗಳು ಇದನ್ನು ಪಡೆಯಬಹುದು. ಕಾರ್ಡ್‌ನಲ್ಲಿ ಫಲಾನುಭವಿಯ ಹೆಸರು, ಫೋಟೋ, ಆಧಾರ್ ಸಂಖ್ಯೆ ಮತ್ತು ವಿಳಾಸದ ಸಂಪೂರ್ಣ ವಿವರ ಇರಲಿದ್ದು, ಇದನ್ನು ಇತರರಿಗೆ ವರ್ಗಾಯಿಸಲು (Transfer) ಅವಕಾಶವಿರುವುದಿಲ್ಲ. ಅರ್ಹ ಮಹಿಳೆಯರು ಬೆಂಗಳೂರು ಒನ್, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಸೈಬರ್ ಸೆಂಟರ್‌ಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬಹುದು. ಜೊತೆಗೆ ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲೂ ಕಾರ್ಡ್ ವಿತರಣೆಗೆ ವ್ಯವಸ್ಥೆ ಮಾಡಲಾಗುತ್ತಿದೆ.

ಸರ್ಕಾರದ ಈ ತೀರ್ಮಾನಕ್ಕೆ ಮಹಿಳಾ ಪ್ರಯಾಣಿಕರಿಂದಲೂ ಧನಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಯೋಜನೆ ನಿಜವಾದ ಫಲಾನುಭವಿಗಳಿಗೆ ತಲುಪಲು ಈ ಪರಿಷ್ಕರಣೆ ಒಳ್ಳೆಯದು ಎಂದು ಅಭಿಪ್ರಾಯಪಟ್ಟಿದ್ದಾರೆ. ಒಟ್ಟಿನಲ್ಲಿ, 250 ಕೋಟಿ ರೂಪಾಯಿ ವೆಚ್ಚದ ಈ ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿಗೆ ಬಂದ ಬಳಿಕ ಹೊರರಾಜ್ಯದವರ ಉಚಿತ ಸಂಚಾರಕ್ಕೆ ಸಂಪೂರ್ಣ ಬ್ರೇಕ್ ಬೀಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್