LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಾಕ್ಸ್ ಆಫೀಸ್‌ನಲ್ಲಿ ದೃಶ್ಯಂ 3 ಅಬ್ಬರ: ಧುರಂಧರ್ 2 ನಂತರದ ಅತಿದೊಡ್ಡ ವೀಕೆಂಡ್ ಓಪನರ್!

ಬಾಲಿವುಡ್ ಸೂಪರ್ ಸ್ಟಾರ್ ಅಜಯ್ ದೇವಗನ್ ಅಭಿನಯದ ಬಹುನಿರೀಕ್ಷಿತ ‘ದೃಶ್ಯಂ 3 : ದಿ ಕನ್ಕ್ಲೂಷನ್’ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆಗಳ ಸೃಷ್ಟಿ ಮುಂದುವರಿಸಿದೆ. ಹಬ್ಬದ ಶುಭದಿನದಂದು ತೆರೆಕಂಡ ಈ ಚಿತ್ರವು ಬಿಡುಗಡೆಯಾದ ಕೇವಲ ಮೂರೇ ದಿನಗಳಲ್ಲಿ ಭಾರತದಲ್ಲಿ ಬರೋಬ್ಬರಿ ೧೭೬.೫೦ ಕೋಟಿ ರೂಪಾಯಿ ನಿವ್ವಳ (ನೆಟ್) ಕಲೆಕ್ಷನ್ ಮಾಡುವ ಮೂಲಕ ಪ್ರಸಕ್ತ ವರ್ಷದ ಎರಡನೇ ಅತಿ ದೊಡ್ಡ ವೀಕೆಂಡ್ ಓಪನರ್ ಆಗಿ ಹೊರಹೊಮ್ಮಿದೆ.

ಚಿತ್ರದ ಗಳಿಕೆಯ ಅಂಕಿಅಂಶಗಳನ್ನು ನೋಡುವುದಾದರೆ, ಬಿಡುಗಡೆಯಾದ ಮೊದಲ ದಿನವಾದ ಶುಕ್ರವಾರ 62 ಕೋಟಿ ರೂಪಾಯಿ ಗಳಿಸಿದ್ದ ಈ ಸಿನಿಮಾ, ಶನಿವಾರ 53.50 ಕೋಟಿ ಹಾಗೂ ಮೂರನೇ ದಿನವಾದ ಭಾನುವಾರ 61 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ಗ್ರಾಸ್ ಗಳಿಕೆ 211.80 ಕೋಟಿ ರೂಪಾಯಿಗೇರಿದೆ. ಇನ್ನು ವಿದೇಶಗಳಲ್ಲೂ ಭಾರಿ ಸದ್ದು ಮಾಡುತ್ತಿರುವ ‘ದೃಶ್ಯಂ ೩’, ವಿದೇಶಿ ಮಾರುಕಟ್ಟೆಯಿಂದ ಒಟ್ಟು 61 ಕೋಟಿ ರೂಪಾಯಿ ಕಲೆಹಾಕಿದ್ದು, ಜಾಗತಿಕವಾಗಿ (ವರ್ಲ್ಡ್‌ವೈಡ್) 272.80 ಕೋಟಿ ರೂಪಾಯಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ಧುರಂಧರ್ 2 ಚಿತ್ರದ ನಂತರದ ಸ್ಥಾನ ಪಡೆದುಕೊಂಡಿದೆ.

ಅಭಿಷೇಕ್ ಪಾಠಕ್ ನಿರ್ದೇಶನದ ಈ ಚಿತ್ರದಲ್ಲಿ ಅಜಯ್ ದೇವಗನ್ ಅವರೊಂದಿಗೆ ಜೈದೀಪ್ ಅಹ್ಲಾವತ್, ಟಬು, ಶ್ರಿಯಾ ಶರಣ್, ರಜತ್ ಕಪೂರ್, ಪ್ರಕಾಶ್ ರಾಜ್ ಮತ್ತು ಇಶಿತಾ ದತ್ತ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಹಿಂದಿನ ಎರಡು ಭಾಗಗಳು ಮಲಯಾಳಂ ಮೂಲದ ಕಥೆಯಾಗಿದ್ದರೆ, ಈ ಮೂರನೇ ಭಾಗವನ್ನು ಸಂಪೂರ್ಣ ಸ್ವತಂತ್ರ ಕಥೆಯೊಂದಿಗೆ ನಿರ್ಮಿಸಲಾಗಿದ್ದು, ಚಿತ್ರಮಂದಿರಗಳಲ್ಲಿ ಪ್ರೇಕ್ಷಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!