LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮ ಮರಳು ದಂಧೆಕೋರರಿಗೆ ಶಾಕ್: 3000 ಮೆಟ್ರಿಕ್ ಟನ್ ಮರಳು ಜಪ್ತಿ

ಕೊಪ್ಪಳ: ತಾಲೂಕಿನ ಹಲುವಾಗಲಿ ಸೀಮಾದ ತುಂಗಭದ್ರಾ ನದಿಯ ಹಿನ್ನೀರು ಪ್ರದೇಶದಲ್ಲಿ ಕಾನೂನು ಬಾಹಿರವಾಗಿ ಮರಳು ಸಂಗ್ರಹಿಸಿ ಕಳ್ಳತನ ಮಾಡಲು ಯತ್ನಿಸುತ್ತಿದ್ದ ದಂಧೆಕೋರರ ಜಾಲಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಅಳವಂಡಿ ಪೊಲೀಸರು ಜಂಟಿಯಾಗಿ ದಾಳಿ ನಡೆಸಿದ್ದಾರೆ.

ಶನಿವಾರ ಮಧ್ಯಾಹ್ನ ಜಂಟಿ ದಾಳಿ ನಡೆಸಿರುವ ಅಧಿಕಾರಿಗಳ ತಂಡ, ಸುಮಾರು 2,40,000 ರೂ. ಮೌಲ್ಯದ 3,000 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದೆ.

ಕೊಪ್ಪಳ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂವಿಜ್ಞಾನಿಗೆ ಹಲುವಾಗಲಿ ಸೀಮಾದ ತುಂಗಭದ್ರಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಕಳ್ಳಸಾಗಣೆಗೆ ಸಂಚು ರೂಪಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಲಭ್ಯವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅವರು, ಮೇಲಾಧಿಕಾರಿಗಳ ಆದೇಶದ ಮೇರೆಗೆ ಅಳವಂಡಿ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿದರು.

ಶನಿವಾರ ಮಧ್ಯಾಹ್ನ 2:45ರ ಸುಮಾರಿಗೆ ಅಧಿಕಾರಿಗಳ ತಂಡ ಜಂಟಿಯಾಗಿ ಹಲುವಾಗಲಿ ಸೀಮಾದ ಹೊಲವೊಂದರ ಸಮೀಪವಿರುವ ತುಂಗಭದ್ರಾ ನದಿ ಪಾತ್ರಕ್ಕೆ ದಾಳಿ ಮಾಡಿದ ವೇಳೆ ಅಪರಿಚಿತ ಕಳ್ಳರು ಕಳ್ಳತನದ ಉದ್ದೇಶದಿಂದ ಬೃಹತ್ ಪ್ರಮಾಣದಲ್ಲಿ ಮರಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಅಧಿಕಾರಿಗಳ ವಾಹನ ಬರುತ್ತಿದ್ದಂತೆ ದಂಧೆಕೋರರು ಅಲ್ಲಿಂದ ಪರಾರಿಯಾಗಿದ್ದಾರೆ.

ಜಪ್ತಿಯಾದ ಮರಳಿನ ವಿವರ:

ಒಟ್ಟು ಸುಮಾರು 3000 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಲಾಗಿದ್ದು, ಇದರ ಅಂದಾಜು ಮೌಲ್ಯ ರೂ. 2,40,000/- (ಎರಡು ಲಕ್ಷದ ನಲವತ್ತು ಸಾವಿರ ರೂ.) ಆಗಿದೆ. ಸ್ಥಳದಲ್ಲಿ ಹಾಜರಿದ್ದ ಅಳವಂಡಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಸಹಾಯಕರ ಸಮ್ಮುಖದಲ್ಲಿ ಕಂದಾಯ ಮತ್ತು ಪೊಲೀಸ್ ಇಲಾಖೆ ಜಂಟಿ ಪಂಚನಾಮೆ ನಡೆಸಿದ್ದು, ಮಧ್ಯಾಹ್ನ 2:45 ರಿಂದ 3:00 ಗಂಟೆಯ ಅವಧಿಯಲ್ಲಿ ಜಪ್ತಿ ಪಂಚನಾಮೆ ಪ್ರಕ್ರಿಯೆ ಜರುಗಿತು. ಜಪ್ತಿ ಮಾಡಲಾದ ಬೃಹತ್ ಮರಳಿನ ದಾಸ್ತಾನನ್ನು ಪ್ರಸ್ತುತ ಅಳವಂಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ತುಂಗಭದ್ರಾ ನದಿ ಪಾತ್ರದಲ್ಲಿ ಪ್ರಕೃತಿ ಸಂಪತ್ತನ್ನು ಲೂಟಿ ಮಾಡಲು ಯತ್ನಿಸಿದ ಕಳ್ಳರನ್ನು ಪತ್ತೆ ಹಚ್ಚಿ, ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಭೂವಿಜ್ಞಾನಿಗಳು ಅಳವಂಡಿ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದಾರೆ. ಈ ಸಂಬಂಧ ಅಳವಂಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಮರಳು ಕಳ್ಳರ ಪತ್ತೆಗಾಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?