LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಯೋಜನೆಗೆ ಸಿಮ್ ಕಾರ್ಡ್‌ ಕಡ್ಡಾಯ: ಶೀಘ್ರದಲ್ಲೇ 33ನೇ ಕಂತಿನ 2,480 ಕೋಟಿ ರೂ. ಬಿಡುಗಡೆ!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯಲ್ಲಿ ನಕಲಿ ಮತ್ತು ಅನರ್ಹ ಫಲಾನುಭವಿಗಳನ್ನು ತಡೆಯುವ ಉದ್ದೇಶದಿಂದ ಮನೆಯ ಯಜಮಾನಿಯ ಹೆಸರಿನಲ್ಲೇ ಸಿಮ್ ಕಾರ್ಡ್ ಹೊಂದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ. ಮದ್ದೂರು ತಾಲೂಕಿನ ಕೊಪ್ಪದಲ್ಲಿ ಮಾತನಾಡಿದ ಅವರು, ಈ ಹೊಸ ನಿಯಮದ ಮೂಲಕ ಪಾರದರ್ಶಕತೆ ಕಾಯ್ದುಕೊಳ್ಳಲಾಗುತ್ತಿದ್ದು, ಶೀಘ್ರದಲ್ಲೇ ಯೋಜನೆಯ 33ನೇ ಕಂತಿನ ಒಟ್ಟು 2,480 ಕೋಟಿ ರೂಪಾಯಿ ಅನುದಾನವನ್ನು ಅರ್ಹ ಮಹಿಳೆಯರ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಪರಿಶೀಲನೆ ವೇಳೆ ಸುಮಾರು 1.99 ಲಕ್ಷ ಮೃತಪಟ್ಟ ಮಹಿಳೆಯರ ಖಾತೆಗಳಿಗೆ ₹117 ಕೋಟಿ ಹಣ ವರ್ಗಾವಣೆಯಾಗಿರುವುದು ಹಾಗೂ ಕೆಲವೆಡೆ ಹಣವು ಪತಿಯ ಖಾತೆಗೆ ಅಥವಾ ರಾಜ್ಯದ ಹೊರಗಿನವರ ಪಾಲಾಗುತ್ತಿರುವುದು ಸಮಿತಿಯ ಗಮನಕ್ಕೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪಟ್ಟಿ ಪರಿಷ್ಕರಣೆಗೆ ಮನವಿ ಮಾಡಲಾಗಿತ್ತು. ಪ್ರಸ್ತುತ ನೂತನ ಮಾನದಂಡದಿಂದಾಗಿ 1 ಕೋಟಿ 24 ಲಕ್ಷ ನೈಜ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಯೋಜನೆ ಸಂಪೂರ್ಣವಾಗಿ ನೈಜ ಕನ್ನಡಿಗರಿಗೆ ಮಾತ್ರ ತಲುಪುವಂತೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಕಾಂಗ್ರೆಸ್ ಸರ್ಕಾರವು ನೀಡಿರುವ ಭರವಸೆಯಂತೆ ಐದೂ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೆ ತಂದಿದ್ದು, ಕುಟುಂಬದ ಯಜಮಾನಿಗೆ ತಿಂಗಳಿಗೆ ₹2,000 ಆರ್ಥಿಕ ನೆರವು ನೀಡಲಾಗುತ್ತಿದೆ. ರಾಜ್ಯದಲ್ಲಿ ಈವರೆಗೆ 32 ಕಂತುಗಳಲ್ಲಿ ತಲಾ ₹64,000 ಹಣವನ್ನು ಯಾವುದೇ ಮಧ್ಯವರ್ತಿಗಳಿಲ್ಲದೆ, 'ನೋ ಕಮಿಷನ್ ನೋ ಕರಪ್ಷನ್' ನೀತಿಯಡಿ ಡಿಬಿಟಿ (DBT) ಮೂಲಕ ನೇರವಾಗಿ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗಿದೆ. ಇದೀಗ ಬಿಡುಗಡೆಯಾಗುತ್ತಿರುವ 33ನೇ ಕಂತಿನ ಅನುದಾನವೂ ಶೀಘ್ರದಲ್ಲೇ ಫಲಾನುಭವಿಗಳ ಕೈಸೇರಲಿದೆ ಎಂದು ದಿನೇಶ್ ಗೂಳಿಗೌಡ ವಿವರಣೆ ನೀಡಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್