LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದಿಂದ ಗುತ್ತಿಗೆದಾರರ 38,000 ಕೋಟಿ ಬಿಲ್ ಬಾಕಿ: ಬಿಡುಗಡೆಗೆ ಸಿಎಂ ಡಿಕೆಶಿಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ನಾನಾ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಿರುವ ಬರೋಬ್ಬರಿ ₹38,000 ಕೋಟಿ ರೂ. ಬಾಕಿ ಮೊತ್ತವನ್ನು ತಕ್ಷಣವೇ ಪಾವತಿಸಬೇಕೆಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕೃತ ಮನವಿ ಸಲ್ಲಿಸಿದೆ. ಈ ಹಿಂದೆ ನೀಡಿದ್ದ ಭರವಸೆಗಳು ಈಡೇರದ ಕಾರಣ ಗುತ್ತಿಗೆದಾರರು ಹಾಗೂ ಅವರನ್ನು ನಂಬಿರುವ ಲಕ್ಷಾಂತರ ಕುಟುಂಬಗಳು ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿವೆ ಎಂದು ಸಂಘ ತೀವ್ರ ಅಸಮಾಧಾನ ಹೊರಹಾಕಿದೆ.

ಹಳೆಯ ಭರವಸೆ ನೆನಪಿಸಿದ ಸಂಘಟನೆ

ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಫ್ರೀಡಂ ಪಾರ್ಕ್ ಧರಣಿ ವೇಳೆ ನೀಡಿದ್ದ ಭರವಸೆ ಹಾಗೂ ಬಳಿಕ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆಸಿದ ಸಭೆಗಳಲ್ಲಿ ನೀಡಿದ್ದ ಮಾತುಗಳನ್ನು ಸಂಘಟನೆ ಮುಖ್ಯಮಂತ್ರಿಗಳಿಗೆ ನೆನಪಿಸಿದೆ. ಎರಡು ತಿಂಗಳ ಒಳಗಾಗಿ ಬಾಕಿ ಹಣ ಪಾವತಿಗೆ ಕ್ರಮ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಲಾಗಿತ್ತಾದರೂ, 2021-22ನೇ ಸಾಲಿನಿಂದ ಇಂದಿನವರೆಗೂ ಬಾಕಿ ಬಿಡುಗಡೆಯಾಗಿಲ್ಲ. ಇದರಿಂದಾಗಿ ಕಾಮಗಾರಿ ಮುಗಿಸಿರುವ ಗುತ್ತಿಗೆದಾರರು ಹಾಗೂ ಅವರನ್ನು ಅವಲಂಬಿಸಿರುವ ಸುಮಾರು 1.50 ಲಕ್ಷ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ ಎಂದು ಪತ್ರದಲ್ಲಿ ನೋವು ತೋಡಿಕೊಳ್ಳಲಾಗಿದೆ.

ಬಿಲ್ ಪಾವತಿಯಲ್ಲಿ ಪಾರದರ್ಶಕತೆ ಮತ್ತು ಜ್ಯೇಷ್ಠತೆ ನಿಯಮ ಪಾಲನೆಗೆ ಪಟ್ಟು

ಲೋಕೋಪಯೋಗಿ ಹಾಗೂ ಬಿಬಿಎಂಪಿ ಹೊರತುಪಡಿಸಿ ಉಳಿದ ಇಲಾಖೆಗಳಲ್ಲಿ ಬಿಲ್ ಮಂಜೂರಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯೇ ಇಲ್ಲದಂತಾಗಿದೆ ಎಂದು ಸಂಘ ಆಪಾದಿಸಿದೆ. ಕಾಮಗಾರಿ ಪೂರ್ಣಗೊಳಿಸಿದ ಹಿರಿತನ ಅಥವಾ ಜ್ಯೇಷ್ಠತೆಯ (ಸೀನಿಯಾರಿಟಿ) ಆಧಾರದ ಮೇಲೆ ಹಣ ಬಿಡುಗಡೆ ಮಾಡಬೇಕು. ನಿಯಮಗಳನ್ನು ಗಾಳಿಗೆ ತೂರಿ ನೀಡಲಾಗುತ್ತಿರುವ 'ಸ್ಪೆಷಲ್ ಎಲ್‌ಒಸಿ' (Special LOC) ಪದ್ಧತಿಯನ್ನು ತಕ್ಷಣವೇ ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸಲಾಗಿದೆ.

ಜಿಎಸ್‌ಟಿ ವ್ಯತ್ಯಾಸದ ಮೊತ್ತ ಹಾಗೂ ಇ-ಪ್ರೊಕ್ಯೂರ್‌ಮೆಂಟ್ ನಿಯಮಗಳ ಸಡಿಲಿಕೆ

2017-18 ಮತ್ತು 2018-19ನೇ ಸಾಲಿನಲ್ಲಿ ವ್ಯಾಟ್‌ನಿಂದ ಜಿಎಸ್‌ಟಿಗೆ ಬದಲಾದ ಸಂದರ್ಭದಲ್ಲಿ ಉಂಟಾದ ಶೇ. 8 ರಷ್ಟು ವ್ಯತ್ಯಾಸದ ಮೊತ್ತವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಲು ಹಣಕಾಸು ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಬೇಕು. ಇದರ ಜೊತೆಗೆ, ಇ-ಸಂಗ್ರಹಣಾ ವೇದಿಕೆಯ 'ಗುತ್ತಿಗೆ ನಿರ್ವಹಣಾ ಮಾಡ್ಯೂಲ್'ನಲ್ಲಿ (Contract Management Module) ಕಾಮಗಾರಿಗಳ ವಿವರ ಅಪ್‌ಲೋಡ್ ಮಾಡಿದ ನಂತರವೇ ಖಜಾನೆಯಿಂದ ಹಣ ನೀಡಬೇಕೆಂಬ ಕಡ್ಡಾಯ ನಿಯಮವನ್ನು ಕೈಬಿಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಸ್ಥಳೀಯರಿಗೆ ಟೆಂಡರ್ ಆದ್ಯತೆ ಮತ್ತು ಲೈಸೆನ್ಸ್ ನವೀಕರಣಕ್ಕೆ ರಿಯಾಯಿತಿ

ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ನಡೆಯುವ ಕಾಮಗಾರಿಗಳ ಟೆಂಡರ್‌ಗಳಲ್ಲಿ ಸ್ಥಳೀಯ ಗುತ್ತಿಗೆದಾರರಿಗೆ ಮೊದಲ ಆದ್ಯತೆ ನೀಡಬೇಕು. ಹೊರ ಜಿಲ್ಲೆ ಮತ್ತು ಹೊರ ರಾಜ್ಯದವರಿಗೆ ಮಣೆ ಹಾಕಿ ಸ್ಥಳೀಯರನ್ನು ಕಡೆಗಣಿಸುವುದನ್ನು ಕಟ್ಟುನಿಟ್ಟಾಗಿ ತಡೆಯಬೇಕು. ಕೋವಿಡ್ ಸಾಂಕ್ರಾಮಿಕ ಹಾಗೂ ವ್ಯವಸ್ಥೆಯ ಏರುಪೇರುಗಳಿಂದ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ದೀರ್ಘಕಾಲದಿಂದ ಕಾಮಗಾರಿಗಳು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಗುತ್ತಿಗೆ ಪರವಾನಗಿ ನವೀಕರಿಸಲು ಮತ್ತು ಕಾಮಗಾರಿ ಅನುಭವದ ನಿಯಮವನ್ನು 10 ವರ್ಷಗಳ ವರೆಗೆ ವಿಸ್ತರಿಸಬೇಕು ಎಂಬ ಬೇಡಿಕೆಯನ್ನು ಮುಂದಿಡಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕೆ ತುರ್ತು ಸಭೆ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕಾಮಗಾರಿಗಳ ಹಣವನ್ನು ನಿರ್ಮಿತಿ ಕೇಂದ್ರ ಹಾಗೂ ಕೆ.ಆರ್.ಐ.ಡಿ.ಎಲ್ ಮುಂತಾದ ಇತರ ಸಂಸ್ಥೆಗಳಿಗೆ ಪರಭಾರೆ ಮಾಡುತ್ತಿರುವುದನ್ನು ನಿಲ್ಲಿಸಬೇಕು. ಜತೆಗೆ, ಕೆ.ಕೆ.ಆರ್.ಡಿ.ಬಿ ಅಡಿಯಲ್ಲಿ ಕೈಗೆತ್ತಿಕೊಂಡಿರುವ 'ಕಲ್ಯಾಣ ಪಥ' ಯೋಜನೆಯಲ್ಲಿನ ತಾಂತ್ರಿಕ ಲೋಪದೋಷಗಳ ಕುರಿತು ಗುತ್ತಿಗೆದಾರರೊಂದಿಗೆ ಚರ್ಚಿಸಲು ಮುಖ್ಯಮಂತ್ರಿಗಳು ತಕ್ಷಣವೇ ಪ್ರತ್ಯೇಕ ಅಧಿಕೃತ ಸಭೆ ಕರೆಯಬೇಕು ಎಂದು ಸಂಘ ಆಗ್ರಹಿಸಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್