LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬಿಪಿಎಲ್ ಕಾರ್ಡ್ ಆದಾಯ ಮಿತಿ ಹೆಚ್ಚಳಕ್ಕೆ ಶೀಘ್ರವೇ ಮುಹೂರ್ತ: 4.32 ಲಕ್ಷ ಅನರ್ಹ ಕಾರ್ಡ್‌ಗಳು ಎಪಿಎಲ್‌ಗೆ ಶಿಫ್ಟ್: ಸಚಿವ ಕೆ.ಎಚ್. ಮುನಿಯಪ್ಪ ಮಹತ್ವದ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ರೇಷನ್ ಕಾರ್ಡ್ ಪಡೆಯಲು ವಿಧಿಸಲಾಗಿರುವ ಪ್ರಸ್ತುತ ವಾರ್ಷಿಕ ಆದಾಯದ ಮಿತಿಯನ್ನು ಹೆಚ್ಚಿಸುವ ಮಹತ್ವದ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಈ ಕುರಿತು ಶೀಘ್ರದಲ್ಲೇ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್‌. ಮುನಿಯಪ್ಪ ಭರವಸೆ ನೀಡಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮಕ್ಕೆ ನೂತನವಾಗಿ ನೇಮಕಗೊಂಡಿರುವ 376 ಸಿಬ್ಬಂದಿಗೆ ವಿಧಾನಸೌಧದಲ್ಲಿ ಗುರುವಾರ ನೇಮಕಾತಿ ಪತ್ರ ವಿತರಿಸಿದ ನಂತರ ಸಚಿವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

ಆಡಳಿತ ಸುಧಾರಣಾ ಆಯೋಗದ ಶಿಫಾರಸು

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, “ಆರ್‌.ವಿ. ದೇಶಪಾಂಡೆ ಅವರ ಅಧ್ಯಕ್ಷತೆಯ ಆಡಳಿತ ಸುಧಾರಣಾ ಆಯೋಗವು ಬಿಪಿಎಲ್ ಕಾರ್ಡ್ ಪಡೆಯುವ ಆದಾಯದ ಮಿತಿಯನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಸಾರ್ವಜನಿಕ ವಲಯದಲ್ಲೂ ಈ ಬೇಡಿಕೆ ತೀವ್ರವಾಗಿರುವುದರಿಂದ, ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ತ್ವರಿತವಾಗಿ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಅನರ್ಹರ ಬಿಪಿಎಲ್ ಕಾರ್ಡ್‌ಗಳಿಗೆ ಕತ್ತರಿ: 4.32 ಲಕ್ಷ ಕಾರ್ಡ್‌ಗಳು ಎಪಿಎಲ್‌ಗೆ

ಪಡಿತರ ವ್ಯವಸ್ಥೆಯಲ್ಲಿನ ಅಕ್ರಮಗಳಿಗೆ ಬ್ರೇಕ್ ಹಾಕಿರುವ ಇಲಾಖೆ, ಅನರ್ಹರ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರವು ರಾಜ್ಯದಲ್ಲಿ ಗುರುತಿಸಿದ್ದ ಒಟ್ಟು 7.76 ಲಕ್ಷ ಅನುಮಾನಾಸ್ಪದ ಹಾಗೂ ಅನರ್ಹ ಬಿಪಿಎಲ್ ಕಾರ್ಡ್‌ಗಳ ಪೈಕಿ ಈಗಾಗಲೇ ಶೇ. 50 ರಷ್ಟು ಪರಿಷ್ಕರಣೆ ಪೂರ್ಣಗೊಂಡಿದೆ. ನಿಯಮಗಳನ್ನು ಮೀರಿ ಬಿಪಿಎಲ್ ಕಾರ್ಡ್ ಪಡೆದಿದ್ದ ಒಟ್ಟು 4,32,295 ಕಾರ್ಡ್‌ಗಳನ್ನು ಪತ್ತೆ ಹಚ್ಚಿ, ಅವುಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜೊತೆಗೆ, ಪಡಿತರ ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಕಳೆದ 3 ವರ್ಷಗಳಲ್ಲಿ ಒಟ್ಟು 1,497 ಎಫ್‌ಐಆರ್ ದಾಖಲಿಸಿ, ₹49.38 ಕೋಟಿ ಮೌಲ್ಯದ ಆಹಾರಧಾನ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ರೋಗಿಗಳಿಗೆ 15 ದಿನಗಳಲ್ಲಿ ಬಿಪಿಎಲ್ ಕಾರ್ಡ್: ತುರ್ತು ಆರೋಗ್ಯ ಸೇವೆಗಳ (Medical Emergency) ಕಾರಣಕ್ಕಾಗಿ ಬಿಪಿಎಲ್ ಕಾರ್ಡ್ ಕೋರಿ ಅರ್ಜಿ ಸಲ್ಲಿಸುವ ಸಾರ್ವಜನಿಕರಿಗೆ ಯಾವುದೇ ವಿಳಂಬವಿಲ್ಲದೆ ಕೇವಲ 15 ದಿನಗಳ ಒಳಗಾಗಿ ಕಾರ್ಡ್ ವಿತರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಗಡುವು ನೀಡಲಾಗಿದೆ.

ಸ್ಮಾರ್ಟ್ ಪಿಡಿಎಸ್ ಜಾರಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಪಾರದರ್ಶಕಗೊಳಿಸಲು ಸ್ಮಾರ್ಟ್ ಪಿಡಿಎಸ್ ಯೋಜನೆಯನ್ನು ತರಲಾಗುತ್ತಿದ್ದು, ಇ-ಪಾಸ್ ಮತ್ತು ಎಲೆಕ್ಟ್ರಾನಿಕ್ ತೂಕದ ಯಂತ್ರಗಳ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಕನಿಷ್ಠ ಬೆಂಬಲ ಬೆಲೆ ಅಡಿ ಭರ್ಜರಿ ಖರೀದಿ: ಕಳೆದ 2025-26ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2,89,350 ರೈತರಿಂದ ಒಟ್ಟು ₹4,422.17 ಕೋಟಿ ಮೌಲ್ಯದ 5.69 ಲಕ್ಷ ಮೆಟ್ರಿಕ್ ಟನ್ ರಾಗಿ, 2.21 ಲಕ್ಷ ಮೆಟ್ರಿಕ್ ಟನ್ ಜೋಳ ಹಾಗೂ 0.0567 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಯಶಸ್ವಿಯಾಗಿ ಖರೀದಿಸಲಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ₹1,902.58 ಕೋಟಿ ಎಂಎಸ್‌ಪಿ ಮರುಪಾವತಿ ಮೊತ್ತದಲ್ಲಿ ಈ ಹಣಕಾಸು ವರ್ಷದಲ್ಲಿ ಈಗಾಗಲೇ ₹190.10 ಕೋಟಿ ಬಿಡುಗಡೆಯಾಗಿದೆ.

ಹೊಸ ಸಿಬ್ಬಂದಿ ನೇಮಕ ಹಾಗೂ ತಪಾಸಣಾ ವಾಹನಗಳಿಗೆ ಚಾಲನೆ

ಇದೇ ಸಂದರ್ಭದಲ್ಲಿ ಆಹಾರ ನಿಗಮದ ವಿವಿಧ ಹುದ್ದೆಗಳಿಗೆ ನೂತನವಾಗಿ ಆಯ್ಕೆಯಾಗಿರುವ 376 ಸಿಬ್ಬಂದಿಗೆ ಅಧಿಕೃತವಾಗಿ ನೇಮಕಾತಿ ಪತ್ರಗಳನ್ನು ವಿತರಿಸಲಾಯಿತು. ಇದರೊಂದಿಗೆ, ಕಾನೂನು ಮಾಪನಶಾಸ್ತ್ರ ಇಲಾಖೆಯಿಂದ ಗ್ರಾಹಕರ ಹಿತರಕ್ಷಣೆಗಾಗಿ ಮಾರುಕಟ್ಟೆಯಲ್ಲಿ ನಿರಂತರ ತಪಾಸಣೆ ನಡೆಸಲು ಅನುಕೂಲವಾಗುವಂತೆ 17 ಸುಸಜ್ಜಿತ ವಾಹನಗಳಿಗೆ ಸಚಿವ ಕೆ.ಎಚ್. ಮುನಿಯಪ್ಪ ಹಸಿರು ನಿಶಾನೆ ತೋರಿಸಿದರು.

ಈ ಮಹತ್ವದ ಕಾರ್ಯಕ್ರಮದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಕನಗವಲ್ಲಿ, ಆಯುಕ್ತ ರವಿಕುಮಾರ್ ಹಾಗೂ ಆಹಾರ ನಿಗಮದ ನಿರ್ದೇಶಕ ಜಗದೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!