LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೌಕರರ ಗಳಿಕೆ ರಜೆ ನಗದೀಕರಣದಲ್ಲಿ 4 ಕೋಟಿ ರೂ. ವಂಚನೆ: SDA ಅರೆಸ್ಟ್

ತುಮಕೂರು: ನೌಕರರ ಗಳಿಕೆ ರಜೆ ನಗದೀಕರಣ ಮಂಜೂರಾತಿ ಪ್ರಕರಣದಲ್ಲಿ 4.24 ಕೋಟಿ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಧುಗಿರಿ ತಾಲೂಕು ಪಂಚಾಯಿತಿ ದ್ವಿತೀಯ ದರ್ಜೆ ಸಹಾಯಕಿ ಸೌಮ್ಯಾ ಮತ್ತು ಅವರ ಪತಿ ಜಿ.ಆರ್. ರಮೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಬೆಳಕಿಗೆ ಬರುತ್ತಿದ್ದಂತೆ ಸೌಮ್ಯಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆಕ್ರಮದಲ್ಲಿ ಭಾಗಿಯಾಗಿರುವ ಪತಿ ಜೊತೆಗೆ ತಲೆಮರಿಸಿಕೊಂಡಿದ್ದ ಸೌಮ್ಯ ಮತ್ತು ರಮೇಶ್ ಅವರನ್ನು ಸೋಮವಾರ ರಾತ್ರಿ ಮಧುಗಿರಿ ಪೊಲೀಸರು ಬಂಧಿಸಿದ್ದಾರೆ.

ತಾಲೂಕು ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸಿ ನಿವೃತ್ತರಾದ ನೌಕರರ ಖಾತೆಗೆ ಗಳಿಕೆ ರಜೆ ಹಣ ವರ್ಗಾವಣೆಯಲ್ಲಿ ಸೌಮ್ಯಾ ಅಕ್ರಮ ಎಸಗಿದ್ದಾರೆ. ನೌಕರರು ಮತ್ತು ಅವರ ಕುಟುಂಬದವರ ಹೆಸರಿನಲ್ಲಿರುವ ರೆಸಿಪಿಟೆಂಟ್ ಐಡಿ ಬಳಸಿಕೊಂಡು ವಿವಿಧ ಬ್ಯಾಂಕ್ ಖಾತೆಗಳಿಗೆ 118 ಬಾರಿ ಬಿಲ್ ಗಳನ್ನು ಸೃಜಿಸಿ ಒಟ್ಟು 4.24 ಕೋಟಿ ರೂ. ಹಣ ದುರುಪಯೋಗ ಪಡಿಸಿಕೊಂಡಿದ್ದಾರೆ.

ನೌಕರರ ಕುಟುಂಬದವರಿಗೆ ಸೇರಬೇಕಿದ್ದ ಹಣವನ್ನು ತಮ್ಮ ಪತಿ ಜೊತೆ ಸೇರಿ ಸಂಬಂಧಿಕರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಪತಿ ರಮೇಶ್ ಅವರ ನಾಲ್ಕು ಖಾತೆಗಳಿಗೆ ಎರಡು ಕೋಟಿಗೂ ಹೆಚ್ಚು ಹಣ ವರ್ಗಾವಣೆ ಮಾಡಿದ್ದಾರೆ. ಇವರಿಬ್ಬರ ಜೊತೆಗೆ ಪ್ರವೀಣ್, ಕುಮಾರ್, ಮೀನಾಕ್ಷಿ, ಶಿವಲೀಲಾ ಎಂಬುವರ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈ ಕುರಿತಾಗಿ ದೂರು ದಾಖಲಾದ 2 ತಿಂಗಳ ಬಳಿಕ ಮಧುಗಿರಿ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?