LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಭೀಕರ ಬರ : ₹40,000 ಕೋಟಿಗೂ ಅಧಿಕ ನಷ್ಟದ ಅಂದಾಜು : ಡಿಸಿಎಂ ಜಿ. ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಬರ ಪರಿಸ್ಥಿತಿಯಿಂದಾಗಿ ಒಟ್ಟು ನಷ್ಟದ ಪ್ರಮಾಣ ₹40,000 ಕೋಟಿಗೂ ಅಧಿಕವಾಗುವ ಸಾಧ್ಯತೆಯಿದೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈಗಾಗಲೇ ಮೊದಲ ಹಂತದ ಮೆಮೊರಾಂಡಂ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಮುಂದಿನ ದಿನಗಳಲ್ಲಿ ಪರಿಷ್ಕೃತ ಮೆಮೊರಾಂಡಂಗಳನ್ನು ಸಲ್ಲಿಸಲಾಗುವುದು. ಅಂತಿಮವಾಗಿ ಸಂಪೂರ್ಣ ನಷ್ಟದ ಅಂದಾಜು ಸಿದ್ಧಪಡಿಸಿ, ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳನ್ವಯ ರಾಜ್ಯಕ್ಕೆ ಅಗತ್ಯವಿರುವ ಪರಿಹಾರದ ಮೊತ್ತವನ್ನು ಕೇಂದ್ರದ ಗಮನಕ್ಕೆ ತರಲಾಗುವುದು ಎಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಅವರು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರದಿಂದ ಎನ್‌ಡಿಆರ್‌ಎಫ್ ನೆರವು ಬರುವುದನ್ನು ನಿರೀಕ್ಷಿಸುತ್ತಿದ್ದರೂ, ರೈತರ ಪ್ರಸ್ತುತ ಸಂಕಷ್ಟವನ್ನು ಪರಿಗಣಿಸಿ ರಾಜ್ಯ ಸರ್ಕಾರವೇ ತಕ್ಷಣದ ಪರಿಹಾರ ಕ್ರಮಕ್ಕೆ ಮುಂದಾಗಿದೆ. ಮೊದಲ ಹಂತದಲ್ಲಿ ಪ್ರತಿ ರೈತರಿಗೆ ₹2,500 ರಂತೆ ಇನ್‌ಪುಟ್ ಸಬ್ಸಿಡಿ ನೀಡಲು ನಿರ್ಧರಿಸಲಾಗಿದೆ. ಈ ಯೋಜನೆಯಿಂದ ರಾಜ್ಯದ ಸುಮಾರು 45 ರಿಂದ 50 ಲಕ್ಷ ರೈತರಿಗೆ ನೆರವು ತಲುಪಲಿದ್ದು, ಇದಕ್ಕಾಗಿ ರಾಜ್ಯ ಸರ್ಕಾರದ ಬೊಕ್ಕಸದಿಂದ ಸುಮಾರು ₹1,250 ಕೋಟಿ ವೆಚ್ಚವಾಗಲಿದೆ.

ರೈತರಿಗೆ ರಾಜ್ಯ ಸರ್ಕಾರ ಈಗಾಗಲೇ ವಿವಿಧ ರೀತಿಯ ಬೆಂಬಲ ನೀಡುತ್ತಿರುವುದನ್ನು ಉಲ್ಲೇಖಿಸಿದ ಅವರು, ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಪೂರೈಸಲು ವರ್ಷಕ್ಕೆ ಸುಮಾರು ₹22,000 ಕೋಟಿ ವಿದ್ಯುತ್ ಸಬ್ಸಿಡಿ ನೀಡಲಾಗುತ್ತಿದೆ. ಈಗ ಘೋಷಿಸಿರುವ ₹1,250 ಕೋಟಿ ಮೊದಲ ಹಂತದ ಪರಿಹಾರ ಸಣ್ಣ ಮೊತ್ತವಲ್ಲ. ಕೇಂದ್ರದಿಂದ ಬರುವ ಪರಿಹಾರದ ಆಧಾರದ ಮೇಲೆ ಮುಂದಿನ ಹಂತದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಡಿಸಿಎಂ, ಪ್ರಸ್ತುತ ಹಂತದಲ್ಲಿ ಯಾವುದೇ ಪರಿಷ್ಕೃತ ಬದ್ಧತೆ ನೀಡಲು ಸಾಧ್ಯವಿಲ್ಲ ಎಂದರು.

ರಾಜ್ಯದ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಐಎಎಸ್ ಅಧಿಕಾರಿಯೊಬ್ಬರ ನೇತೃತ್ವದಲ್ಲಿ ಅಧ್ಯಯನ ತಂಡವನ್ನು ಕಳುಹಿಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ಪತ್ರ ಬರೆದಿದೆ. ಈ ತಂಡದ ಭೇಟಿಯ ದಿನಾಂಕ ಇನ್ನು ನಿಗದಿಯಾಗಬೇಕಿದೆ. ಕೇಂದ್ರದ ತಂಡವು ರಾಜ್ಯಕ್ಕೆ ಆಗಮಿಸಿ ತನ್ನದೇ ಮಾರ್ಗಸೂಚಿಗಳ ಪ್ರಕಾರ ನಷ್ಟದ ಮೌಲ್ಯಮಾಪನ ನಡೆಸಿದ ನಂತರವಷ್ಟೇ ಕೇಂದ್ರದಿಂದ ಸಿಗುವ ಅಂತಿಮ ಪರಿಹಾರದ ಪ್ರಮಾಣ ಸ್ಪಷ್ಟವಾಗಲಿದೆ ಎಂದು ಅವರು ವಿವರಣೆ ನೀಡಿದರು.

ಬರ ಪರಿಹಾರದ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಈಗಾಗಲೇ ವಿಧಾನಸಭೆಯಲ್ಲೂ ಮುಖ್ಯಮಂತ್ರಿಗಳು ಹಾಗೂ ತಾವು ಸ್ಪಷ್ಟಪಡಿಸಿದ್ದು, ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆದು ಎಲ್ಲ ನಾಯಕರನ್ನು ವಿಶ್ವಾಸಕ್ಕೆ ಪಡೆಯಲಾಗುವುದು. ವಿರೋಧ ಪಕ್ಷದ ನಾಯಕರು ಬರಲು ಸಿದ್ಧರಿದ್ದರೆ ಅವರನ್ನು ಸಹ ನಿಯೋಗದಲ್ಲಿ ಕರೆದೊಯ್ಯಲು ಸರ್ಕಾರ ಸಂಪೂರ್ಣ ಸಿದ್ಧವಾಗಿದೆ.

ಭೇಟಿಯ ವೇಳೆ ಪ್ರಧಾನಮಂತ್ರಿ, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಕರ್ನಾಟಕದ ಬರ ಪರಿಸ್ಥಿತಿ ಮತ್ತು ರೈತರ ಸ್ಥಿತಿಗತಿಯನ್ನು ವಿವರವಾಗಿ ಮನವರಿಕೆ ಮಾಡಿಕೊಡಲಾಗುವುದು. ನಿಯೋಗದ ದೆಹಲಿ ಭೇಟಿಯ ಅಂತಿಮ ದಿನಾಂಕವನ್ನು ಶೀಘ್ರದಲ್ಲೇ ನಿಗದಿಪಡಿಸಲಾಗುವುದು ಎಂದು ಡಿಸಿಎಂ ಪರಮೇಶ್ವರ್ ಮಾಹಿತಿ ನೀಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!