LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಂಗಪಟ್ಟಣ ದಸರಾ: 416ನೇ ಸಂಭ್ರಮಕ್ಕೆ ನಟ ರವಿಚಂದ್ರನ್ ಉದ್ಘಾಟಕರಾಗಿ ಆಯ್ಕೆ; ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಮಂಡ್ಯ: ಪ್ರಸಕ್ತ ಸಾಲಿನ 416ನೇ ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಸ್ಯಾಂಡಲ್‌ವುಡ್‌ನ ಪ್ರಸಿದ್ಧ ನಟ, ನಿರ್ದೇಶಕ ಹಾಗೂ ನಿರ್ಮಾಪಕ 'ಕ್ರೇಜಿ ಸ್ಟಾರ್' ರವಿಚಂದ್ರನ್ ಅವರನ್ನು ಆಯ್ಕೆ ಮಾಡಲಾಗಿದೆ. ಮುಂಬರುವ ಅಕ್ಟೋಬರ್ 15 ರಂದು ನಡೆಯಲಿರುವ ಈ ವೈಭವೋಪೇತ ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಚಾಲನೆ ನೀಡುವಂತೆ ಮಂಡ್ಯ ಜಿಲ್ಲಾಡಳಿತವು ನಟ ರವಿಚಂದ್ರನ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದೆ.

ಮಂಡ್ಯದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ನಟ ರವಿಚಂದ್ರನ್ ಅವರ ನಿವಾಸಕ್ಕೆ ತೆರಳಿ, ಅವರಿಗೆ ಹೂಗುಚ್ಚ ಹಾಗೂ ನೆನಪಿನ ಕಾಣಿಕೆ ನೀಡಿ ಗೌರವಪೂರ್ವಕವಾಗಿ ಆಹ್ವಾನ ಪತ್ರಿಕೆಯನ್ನು ಹಸ್ತಾಂತರಿಸಿದರು. ಆಹ್ವಾನವನ್ನು ಪ್ರೀತಿಯಿಂದ ಸ್ವೀಕರಿಸಿರುವ ರವಿಚಂದ್ರನ್ ಅವರು ಶ್ರೀರಂಗಪಟ್ಟಣ ದಸರಾವನ್ನು ಉದ್ಘಾಟಿಸಲು ಸಮ್ಮತಿ ಸೂಚಿಸಿದ್ದಾರೆ. ಈ ಬಾರಿಯ ದಸರಾ ಮಹೋತ್ಸವವು ರವಿಚಂದ್ರನ್ ಅವರ ಉಪಸ್ಥಿತಿಯಿಂದಾಗಿ ಇನ್ನಷ್ಟು ಕಳೆಗಟ್ಟಲಿದ್ದು, ಮಂಡ್ಯ ಜಿಲ್ಲೆಯ ಜನರಲ್ಲಿ ವಿಶೇಷ ಕುತೂಹಲ ಹಾಗೂ ಸಂಭ್ರಮ ಮನೆಮಾಡಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!