LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೋಯ್ಡಾದಲ್ಲಿ 43ನೇ ಮಹಡಿಯಿಂದ ಜಿಗಿದು ಟೆಕ್ಕಿ ಆತ್ಮಹತ್ಯೆ; ₹3 ಕೋಟಿ ಜೀವನಾಂಶದ ವದಂತಿಗೆ ಪೊಲೀಸರ ಸ್ಪಷ್ಟನೆ

ನೋಯ್ಡಾ: ಕೌಟುಂಬಿಕ ಕಲಹ ಮತ್ತು ಆರ್ಥಿಕ ಸಂಕಷ್ಟದಿಂದ ನೊಂದ 28 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್‌ ಒಬ್ಬರು ನೋಯ್ಡಾದ ಬಹುಮಹಡಿ ಕಟ್ಟಡದ 43ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಸಂಭವ್ ಜೈನ್ ಎಂದು ಗುರುತಿಸಲಾಗಿದೆ. ಮಗನ ಅನಾರೋಗ್ಯದ ಚಿಕಿತ್ಸೆಗಾಗಿ ಮಾಡಿಕೊಂಡಿದ್ದ ಸಾಲ ಹಾಗೂ ದಾಂಪತ್ಯ ಜೀವನದಲ್ಲಿನ ಸಮಸ್ಯೆಗಳು ಅವರ ಮೇಲೆ ಒತ್ತಡ ತಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಗೂ ಮುನ್ನ ಸಂಭವ್ ಅವರು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ದಾಖಲಿಸಿದ್ದರು ಎನ್ನಲಾಗಿದೆ. ಅದರಲ್ಲಿ ತಮ್ಮ ತೀವ್ರ ಆರ್ಥಿಕ ಸಂಕಷ್ಟದ ಬಗ್ಗೆ ಮಾತನಾಡಿದ್ದರು. ಆದರೆ, ತಮ್ಮ ಸಾವಿಗೆ ನಿರ್ದಿಷ್ಟವಾಗಿ ಯಾರನ್ನೂ ಹೊಣೆ ಮಾಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಭವ್ ಅವರಿಗೆ ಮಗನಿದ್ದು, ಮಗನ ಅನಾರೋಗ್ಯದ ಚಿಕಿತ್ಸೆಗಾಗಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಇದರ ಜೊತೆಗೆ ಪತ್ನಿಯೊಂದಿಗಿನ ದಾಂಪತ್ಯ ಕಲಹ ಮತ್ತು ವಿಚ್ಛೇದನದ ವಿಚಾರವೂ ಅವರಿಗೆ ಒತ್ತಡ ಉಂಟುಮಾಡಿತ್ತು ಎಂದು ಪೊಲೀಸರು ಹೇಳಿದ್ದಾರೆ. ಸುಮಾರು 140 ಕೆಜಿ ತೂಕ ಹೊಂದಿದ್ದ ಸಂಭವ್, ತಮ್ಮ ತೂಕ ಮತ್ತು ಆರೋಗ್ಯದ ಬಗ್ಗೆಯೂ ಆತಂಕದಲ್ಲಿದ್ದರು ಎನ್ನಲಾಗಿದೆ.

https://x.com/HamzaLone112614/status/2106944787643613278

₹3 ಕೋಟಿ ಜೀವನಾಂಶದ ವದಂತಿ; ಪೊಲೀಸರ ಸ್ಪಷ್ಟನೆ

ಸಂಭವ್ ಸಾವಿನ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ₹3 ಕೋಟಿ ಜೀವನಾಂಶದ ವಿಚಾರ ಭಾರೀ ಚರ್ಚೆಗೆ ಕಾರಣವಾಯಿತು. ಕೇವಲ ಎರಡು ವರ್ಷಗಳ ದಾಂಪತ್ಯದ ಬಳಿಕ ಪತ್ನಿಗೆ ₹3 ಕೋಟಿ ಜೀವನಾಂಶ ನೀಡಬೇಕಾಗಿತ್ತು ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಆದರೆ ಈ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದು, ₹3 ಕೋಟಿ ಜೀವನಾಂಶದ ಯಾವುದೇ ಒಪ್ಪಂದ ನಡೆದಿಲ್ಲ ಎಂದು ಹೇಳಿದ್ದಾರೆ. ಪತಿ-ಪತ್ನಿಯ ನಡುವೆ ಒಟ್ಟು ₹15 ಲಕ್ಷಕ್ಕೆ ಇತ್ಯರ್ಥವಾಗಿತ್ತು. ಅದರಲ್ಲಿ ಸಂಭವ್ ಅವರು ಮೊದಲ ಕಂತಾಗಿ ₹7.5 ಲಕ್ಷ ಪಾವತಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ವೈವಾಹಿಕ ಕಾನೂನುಗಳ ಬಗ್ಗೆ ಚರ್ಚೆ

ಪೊಲೀಸರ ಈ ಸ್ಪಷ್ಟನೆಯ ನಡುವೆಯೂ ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಕೆಲವರು ದೇಶದ ವಿಚ್ಛೇದನ ಮತ್ತು ಜೀವನಾಂಶ ಕಾನೂನುಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

2024ರಲ್ಲಿ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನೂ ಕೆಲವರು ಉಲ್ಲೇಖಿಸಿದ್ದಾರೆ. ವೈವಾಹಿಕ ವಿವಾದಗಳಲ್ಲಿ ಪುರುಷರ ಆರ್ಥಿಕ ಸ್ಥಿತಿ ಮತ್ತು ಮಾನಸಿಕ ಒತ್ತಡವನ್ನೂ ಪರಿಗಣಿಸಬೇಕು ಎಂದು ಕೆಲ ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಚ್ಛೇದನ ಪ್ರಕರಣಗಳಲ್ಲಿ ಜೀವನಾಂಶದ ನಿಯಮಗಳನ್ನು ಮತ್ತಷ್ಟು ಸ್ಪಷ್ಟಪಡಿಸಬೇಕು ಎಂಬ ಆಗ್ರಹವೂ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದೆ. ಆದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ₹3 ಕೋಟಿ ಜೀವನಾಂಶ ನೀಡಬೇಕಾಗಿತ್ತು ಎಂಬ ಆರೋಪವನ್ನು ಪೊಲೀಸರು ಈಗಾಗಲೇ ತಳ್ಳಿಹಾಕಿದ್ದಾರೆ.

ಸದ್ಯ ನೋಯ್ಡಾ ಪೊಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ಕಟ್ಟಡದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಕುಟುಂಬಸ್ಥರು ಸೇರಿದಂತೆ ಸಂಬಂಧಪಟ್ಟವರಿಂದ ಮಾಹಿತಿ ಪಡೆಯಲಾಗುತ್ತಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!