LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಡಿಎಂಕೆ ಅವಧಿಯ 46 ಯೋಜನೆಗಳನ್ನು ರದ್ದುಗೊಳಿಸಿದ ತಮಿಳುನಾಡು ಸಿಎಂ ವಿಜಯ್: ಟಿವಿಕೆ ಸರ್ಕಾರದ ನಡೆಗೆ ಭಾರಿ ಬೆಂಬಲ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರವು ಹಿಂದಿನ ಡಿಎಂಕೆ ಸರ್ಕಾರದ ಅವಧಿಯ ಹಲವಾರು ಯೋಜನೆಗಳನ್ನು ರದ್ದುಗೊಳಿಸಿದೆ.

ತಮಿಳುನಾಡು ಸರ್ಕಾರವು ದೇವಸ್ಥಾನದ ಹಣವನ್ನು ಕಲ್ಯಾಣ ಮಂಟಪಗಳು ಮತ್ತು ವಾಣಿಜ್ಯ ಸಂಕೀರ್ಣಗಳಂತಹ ಇತರೆ ಉದ್ದೇಶಗಳಿಗೆ ಬಳಸುವುದಕ್ಕೆ ನಿಷೇಧ ಹೇರಿದೆ. ಸ್ಟಾಲಿನ್ ಸರ್ಕಾರದ ಅವಧಿಯಲ್ಲಿ ದೇವಸ್ಥಾನದ ನಿಧಿಯಿಂದ ಘೋಷಿಸಲಾಗಿದ್ದ 246 ಕೋಟಿ ರೂ. ಮೌಲ್ಯದ 46 ಯೋಜನೆಗಳನ್ನು ಸರ್ಕಾರ ರದ್ದುಗೊಳಿಸಿದೆ. ತಮಿಳುನಾಡಿನ ದೇವಸ್ಥಾನದ ಹಣವನ್ನು ದೇವಸ್ಥಾನಗಳ ಜೀರ್ಣೋದ್ಧಾರ ಮತ್ತು ಭಕ್ತರ ಕಲ್ಯಾಣಕ್ಕೆ ಮಾತ್ರ ಬಳಸಲು ಟಿವಿಕೆ ಸರ್ಕಾರ ತೀರ್ಮಾನಿಸಿದೆ.

ದೇವಾಲಯಗಳ ಆಸ್ತಿ ಮತ್ತು ಆದಾಯವನ್ನು ಕೇವಲ ಧಾರ್ಮಿಕ ಉದ್ದೇಶಗಳು ಮತ್ತು ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಸಬೇಕೆಂದು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯು ಆದೇಶಿಸಿದೆ. ಹಿಂದಿನ ಡಿಎಂಕೆ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ 29 ಮದುವೆ ಮಂಟಪಗಳು ಮತ್ತು 17 ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಯೋಜನೆಗಳನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ.

ದೇವಾಲಯಗಳ ಆಸ್ತಿಪಾಸ್ತಿಗಳ ಸಮಗ್ರ ಲೆಕ್ಕಪರಿಶೋಧನೆಯನ್ನು ನಡೆಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಭಕ್ತರು ನೀಡುವ ಕಾಣಿಕೆಯ ಚಿನ್ನವನ್ನು ಕರಗಿಸಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲಾಗುತ್ತಿದ್ದು, ಅದರಿಂದ ಬರುವ ಬಡ್ಡಿಯನ್ನು ದೇವಸ್ಥಾನದ ಅಭಿವೃದ್ಧಿಗೆ ಬಳಸಿಕೊಳ್ಳಲಾಗುತ್ತಿದೆ.

ಅಧಿಕೃತ ವಿವರಗಳ ಪ್ರಕಾರ, 115.77 ಕೋಟಿ ರೂ. ಬಜೆಟ್‌ನ 29 ಕಲ್ಯಾಣ ಮಂಟಪ ಯೋಜನೆಗಳ ಅನುಮೋದನೆಯನ್ನು ಅಧಿಕೃತವಾಗಿ ಹಿಂಪಡೆಯಲಾಗಿದೆ. ಇದರೊಂದಿಗೆ, 130.08 ಕೋಟಿ ರೂ. ವೆಚ್ಚದ 17 ಯೋಜಿತ ವಾಣಿಜ್ಯ ಸಂಕೀರ್ಣಗಳ ನಿರ್ಮಾಣವನ್ನು ಸಹ ಕೈಬಿಡಲಾಗಿದೆ. ಈ ರದ್ದತಿ ಆದೇಶ ಹೊರಬೀಳುವ ಮುನ್ನ ಈ 46 ಯೋಜನೆಗಳ ಪೈಕಿ ಯಾವುದೇ ಯೋಜನೆಯ ಕಾಮಗಾರಿ ಅಥವಾ ನಿರ್ಮಾಣ ಕಾರ್ಯಗಳು ಪ್ರಾಯೋಗಿಕವಾಗಿ ಆರಂಭವಾಗಿರಲಿಲ್ಲ ಎಂಬುದನ್ನು ಸರ್ಕಾರಿ ವರದಿಗಳು ಖಚಿತಪಡಿಸಿವೆ.

ತಮಿಳುನಾಡಿನಲ್ಲಿ ಹಿಂದಿನ ಡಿಎಂಕೆ ಸರ್ಕಾರದ ಅವಧಿಯಲ್ಲಿ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮೂಲಕ ದೇವಸ್ಥಾನಗಳ ಹೆಚ್ಚುವರಿ ಹಣವನ್ನು ವಿವಿಧ ಸಾರ್ವಜನಿಕ ಯೋಜನೆಗಳು ಮತ್ತು ಕಾಲೇಜುಗಳ ಸ್ಥಾಪನೆಗೆ ಬಳಸಿಕೊಳ್ಳಲು ನಿರ್ಧರಿಸಲಾಗಿತ್ತು. ಆದರೆ, ದೇವಸ್ಥಾನದ ಹಣವನ್ನು ಕೇವಲ ಧಾರ್ಮಿಕ ಮತ್ತು ಭಕ್ತರ ಸೌಕರ್ಯಗಳಿಗೆ ಮಾತ್ರ ಬಳಸಬೇಕು ಎಂದು ಹಿಂದೂ ಸಂಘಟನೆಗಳು ಹಾಗೂ ಭಕ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ವಿಜಯ್ ಸರ್ಕಾರ ಭಕ್ತರ ಭಾವನೆಗಳಿಗೆ ಮನ್ನಣೆ ನೀಡಿದ್ದು, ಡಿಎಂಕೆ ಅವಧಿಯ ಆ ಯೋಜನೆಗಳಿಗೆ ತಕ್ಷಣದಿಂದಲೇ ಬ್ರೇಕ್ ಹಾಕಿದೆ. ಸ್ಥಗಿತಗೊಂಡ ಯೋಜನೆಗಳಿಗಾಗಿ ಕಾಯ್ದಿರಿಸಲಾಗಿದ್ದ 245.85 ಕೋಟಿ ರೂ.ಗಳನ್ನು ದೇವಸ್ಥಾನಗಳ ಖಾತೆಗೆ ಮರುಜಮೆ ಮಾಡಲಾಗಿದೆ. ಅಲ್ಲದೇ ಮೊತ್ತವನ್ನು ದೇವಸ್ಥಾನಗಳಿಗೆ ಬರುವ ಭಕ್ತರ ಮೂಲಸೌಕರ್ಯ ಅಭಿವೃದ್ಧಿ, ಉಚಿತ ಅನ್ನದಾಸೋಹ, ಧರ್ಮಶಾಲೆಗಳ ನವೀಕರಣ ಮತ್ತು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಬಳಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ವಿಜಯ್ ನೇತೃತ್ವದ ಟಿವಿಕೆ ಸರ್ಕಾರದ ಈ ನಡೆಗೆ ಹಿಂದೂ ಧಾರ್ಮಿಕ ಮುಖಂಡರು ಮತ್ತು ಭಕ್ತರು ವ್ಯಾಪಕ ಬೆಂಬಲ ವ್ಯಕ್ತಪಡಿಸಿದ್ದಾರೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!