LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರೀ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಗೆ 500 ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ

ಬೆಂಗಳೂರು: ಭಾರೀ ವಿರೋಧದ ನಡುವೆಯೂ ಬಿಡದಿ ಟೌನ್ ಶಿಪ್ ಗೆ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಮೊದಲ ಹಂತದಲ್ಲಿ 500 ಎಕರೆ ಭೂಸ್ವಾಧೀನಕ್ಕೆ ಚಾಲನೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ರಾಮನಗರ ಭಾಗದಲ್ಲಿ ಬಿಡದಿ ಬಳಿ ಗ್ರೇಟರ್ ಬೆಂಗಳೂರು ಸಮಗ್ರ ಉಪನಗರಕ್ಕೆ ಅಧಿಸೂಚನೆ ಹೊರಡಿಸಲಾಗಿದೆ.

ರೈತರ ಪ್ರತಿಭಟನೆಯ ನಡುವೆಯೇ ಬಿಡದಿ ಟೌನ್ ಶಿಪ್ ಗಾಗಿ ರಾಮನಗರ ಮತ್ತು ಹಾರೋಹಳ್ಳಿ ತಾಲೂಕು ವ್ಯಾಪ್ತಿಯ ಮೂರು ಗ್ರಾಮಗಳ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ರಾಮನಗರ ತಾಲೂಕಿನ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಮತ್ತು ಹಾರೋಹಳ್ಳಿ ತಾಲೂಕಿನ ವಡೇರಹಳ್ಳಿಗಳ 755 ಭೂ ಮಾಲೀಕರಿಂದ 519.05 ಎಕರೆ ಭೂಸ್ವಾಧೀನಕ್ಕೆ 2025ರ ಮಾರ್ಚ್ ನಲ್ಲಿ ಪ್ರಾಥಮಿಕ ಅಧಿಸೂಚನೆ ಪ್ರಕಟಿಸಲಾಗಿತ್ತು. ಇದೀಗ ಆ ಭೂಮಿಯ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಪೈಕಿ 20 ಎಕರೆ ಕರಾಬು ಭೂಮಿಯಾಗಿದ್ದು, ಉಳಿದ 499.14 ಎಕರೆ ಖಾಸಗಿ ಭೂಮಿಯಾಗಿದೆ.

ಈ ಭೂಮಿಯನ್ನು ಈಗ ಪರಿಹಾರ ನೀಡಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಯೋಜನೆಗಾಗಿ ಭೂಮಿ ನೀಡುವವರಿಗೆ ಸರ್ಕಾರ ಪರಿಹಾರ ನಿಗದಿಪಡಿಸಿದೆ. ಕೆಂಪಯ್ಯನ ಪಾಳ್ಯ ವ್ಯಾಪ್ತಿ ಭೂಮಿ ನೀಡುವವರಿಗೆ ಎಕರೆಗೆ ತಲಾ 2.07 ಕೋಟಿ ರೂ. ಪರಿಹಾರ ನೀಡಲಾಗುವುದು. ಮಂಡಲಹಳ್ಳಿ, ವಡೇರಹಳ್ಳಿ ಗ್ರಾಮಗಳ ಭೂಮಿಗೆ ಎಕರೆಗೆ ತಲಾ 2.14 ಕೋಟಿ ರೂಪಾಯಿ ನಿಗದಿ ಮಾಡಲಾಗಿದೆ. ನಗದು ಪರಿಹಾರ ಪಡೆದುಕೊಳ್ಳದವರಿಗೆ ತಮ್ಮ ಭೂಮಿ ಪ್ರಮಾಣದ ಶೇಕಡ 50ರಷ್ಟು ಅಭಿವೃದ್ಧಿ ಹೊಂದಿದ ಭೂಮಿ ನೀಡಲು ನಿರ್ಧರಿಸಲಾಗಿದೆ. ಬಿಡದಿ ಟೌನ್ ಶಿಪ್ ಯೋಜನೆಗಾಗಿ 9 ಗ್ರಾಮಗಳ 7400 ಎಕರೆಗೂ ಹೆಚ್ಚಿನ ಭೂಮಿ ಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಚಿತ್ರಕೃಪೆ: ಎಐ

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!