ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ 5,000 ಕೋಟಿ ರೂಪಾಯಿ ಏನಾಯಿತು? ಎಲ್ಲಿಗೆ ಹೋಯಿತು ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಮತ್ತೆ ಅರ್ಜಿ ಕರೆದ ಪ್ರಕ್ರಿಯೆ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, ಈಗ ಗೃಹಲಕ್ಷ್ಮಿ ಗೃಹಜ್ಯೋತಿ ಯೋಜನೆಗಳಲ್ಲಿರುವ ಲೋಪಗಳನ್ನು ಸರಿಪಡಿಸಲು ಮುಂದಾಗಿದ್ದಾರೆ. ಈ ಯೋಜನೆಗಳನ್ನು ಜಾರಿಗೊಳಿಸುವ ಸಂದರ್ಭದಲ್ಲಿ ಈ ಬಗ್ಗೆ ಯೋಚಿಸಬೇಕಿತ್ತು. ಆಗ ಮುಂದಾಗುವ ಅನಾಹುತದ ಬಗ್ಗೆ ಯೋಚಿಸಲಿಲ್ಲ, ಈಗ ಅನುಭವವಾಗಿದೆ. ಎಚ್ಚೆತ್ತುಕೊಂಡು ಪರಿಷ್ಕರಣೆಗೆ ಇಳಿದಿದ್ದಾರೆ ಎಂದು ಟೀಕಿಸಿದ್ದಾರೆ.
ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ನೀಡದಿರುವ ಬಗ್ಗೆ ಸರ್ಕಾರ ಜಾಣ ಮೌನ ತೋರಿಸಿದೆ. ಈ ಬಗ್ಗೆ ಮಾತನಾಡುತ್ತಿಲ್ಲ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ 5000 ಕೋಟಿ ರೂಪಾಯಿ ಏನಾಯಿತು, ಎಲ್ಲಿಗೆ ಹೋಯಿತು ಎಂದು ಹೆಚ್.ಡಿ.ಕೆ. ಪ್ರಶ್ನಿಸಿದ್ದಾರೆ.