LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಫಾರ್ಮ್ 7 ದುರುಪಯೋಗ: SIT ರಚನೆಗೆ ಸಚಿವ ರಾಮಲಿಂಗಾರೆಡ್ಡಿ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಹೆಸರುಗಳನ್ನು ಕೈಬಿಡಲು ಬಳಸುವ 'ಫಾರ್ಮ್ 7' (Form 7) ಅನ್ನು ವ್ಯಾಪಕವಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದ್ದು, ಈ ಕುರಿತು ಸಮಗ್ರ ವಿಚಾರಣೆ ನಡೆಸಲು ಸರ್ಕಾರ ತಕ್ಷಣವೇ 'ವಿಶೇಷ ತನಿಖಾ ತಂಡ' (SIT) ರಚಿಸಬೇಕು ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಒತ್ತಾಯಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಫಾರ್ಮ್ 7 ಅಕ್ರಮ ಬಳಕೆ ಹಾಗೂ ಮತದಾರರ ಪಟ್ಟಿ ತಿರುಚುವಿಕೆ ವಿಚಾರವಾಗಿ ಗಂಭೀರ ಆರೋಪಗಳನ್ನು ಮಾಡಿದರು. ಜಯನಗರ ಕ್ಷೇತ್ರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ಸ್ಥಳೀಯ ಶಾಸಕರ ವಿರುದ್ಧ ಈಗಾಗಲೇ ಅಧಿಕೃತವಾಗಿ ದೂರು ದಾಖಲಿಸಿದ್ದು, ಈ ಸಂಬಂಧ ಎಫ್‌ಐಆರ್ ದಾಖಲಾಗಿದೆ ಎಂದು ತಿಳಿಸಿದರು.

ಆರ್‌ಎಸ್‌ಎಸ್-ಬಿಜೆಪಿ ಕುಮ್ಮಕ್ಕಿನಿಂದ ವೋಟ್ ಕಳ್ಳತನ: ಸಚಿವರ ಗಂಭೀರ ಆರೋಪ

"ಕಾಂಗ್ರೆಸ್ ಬೆಂಬಲಿಗರು ಮತ್ತು ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಅಳಿಸಿಹಾಕುವ ಹುನ್ನಾರ ನಡೆಯುತ್ತಿದೆ. ಬಿಜೆಪಿ ಶಾಸಕರ ಕಚೇರಿಯಿಂದಲೇ ಆರ್‌ಎಸ್‌ಎಸ್ (RSS) ಕುಮ್ಮಕ್ಕಿನೊಂದಿಗೆ ಈ ಮತ ಕಳ್ಳತನದ ವ್ಯವಸ್ಥಿತ ಜಾಲ ಕಾರ್ಯಾಚರಿಸುತ್ತಿದೆ" ಎಂದು ರಾಮಲಿಂಗಾರೆಡ್ಡಿ ನೇರವಾಗಿ ಆಪಾದಿಸಿದರು.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಸ್ವತಃ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗಿದೆ ಎಂದ ಅವರು, ಜಯನಗರದಲ್ಲಿ ಈ ಅಕ್ರಮಕ್ಕೆ ಸಂಬಂಧಿಸಿದ ಆಡಿಯೋ ಸಂಭಾಷಣೆಯೊಂದು ಬಹಿರಂಗವಾಗಿ ವೈರಲ್ ಆಗಿದೆ. ಈ ಆಡಿಯೋ ಸಾಕ್ಷ್ಯವನ್ನು ಪರಿಗಣಿಸಿ ಆರ್‌ಎಸ್‌ಎಸ್ ಹಾಗೂ ಬಿಜೆಪಿ ನಾಯಕರ ಪಾತ್ರದ ಬಗ್ಗೆ ಆಳವಾದ ತನಿಖೆ ನಡೆಸಬೇಕಿದೆ ಎಂದು ಆಗ್ರಹಿಸಿದರು.

ಸಿಐಡಿ ಅಥವಾ ಎಸ್‌ಐಟಿ ತನಿಖೆಗೆ ಬಿಗಿಪಟ್ಟು:

ಕೇವಲ ಜಯನಗರ ಮಾತ್ರವಲ್ಲದೆ ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲೂ ಫಾರ್ಮ್ 7 ದುರ್ಬಳಕೆ ಮಾಡಿಕೊಂಡು ನೈಜ ಮತದಾರರ ಹಕ್ಕು ಕಸಿಯುತ್ತಿರುವ ಬಗ್ಗೆ ದೂರುಗಳು ನಿರಂತರವಾಗಿ ಬರುತ್ತಿವೆ. ಹೀಗಾಗಿ ಈ ಹಗರಣವನ್ನು ಸಿಐಡಿ (CID) ತನಿಖೆಗೆ ಒಪ್ಪಿಸಬೇಕು ಅಥವಾ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (SIT) ರಚಿಸಿ, ಷಡ್ಯಂತ್ರದ ಹಿಂದಿರುವ ಕಾಣದ ಕೈಗಳನ್ನು ಬಯಲಿಗೆಳೆಯಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!