LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಯಶಸ್ವಿ: ಶೇ.74ರಷ್ಟು ಅಭ್ಯರ್ಥಿಗಳು ಹಾಜರು

ಬೆಂಗಳೂರು: ಉಳಿಕೆ ಮೂಲ ವೃಂದದ ಒಟ್ಟು 505 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಲಿಖಿತ ಪರೀಕ್ಷೆ ಯಾವುದೇ ಸಮಸ್ಯೆ ಇಲ್ಲದೆ ಸುಸೂತ್ರವಾಗಿ ನಡೆಯಿತು. ಒಟ್ಟು‌ ಶೇ 74 ರಷ್ಟು ಮಂದಿ ಪರೀಕ್ಷೆ ಗೆ ಹಾಜರಾಗಿದ್ದರು.

ಅರ್ಜಿ ಸಲ್ಲಿಸಿದ್ದ ಒಟ್ಟು 4,11,656 ಅಭ್ಯರ್ಥಿಗಳ ಪೈಕಿ ಬೆಳಗಿನ ಸಾಮಾನ್ಯ ಜ್ಞಾನ ಪತ್ರಿಕೆಯನ್ನು 3,04,096 (ಶೇ 74ರಷ್ಟು) ಮಂದಿ ಬರೆದರು. ಮಧ್ಯಾಹ್ಮದ ನಿರ್ದಿಷ್ಟ ಪತ್ರಿಕೆಯನ್ನು 3,03,058 (ಶೇ 74ರಷ್ಟು) ಮಂದಿ ಬರೆದಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ಹೇಳಿದರು.

ರಾಜ್ಯದ ಒಟ್ಟು 1,037 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಧಾರವಾಡದಲ್ಲಿ ಅತಿ ಹೆಚ್ಚು ಅಂದರೆ 60 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಬಿಗಿ ನಿಗಾ ವ್ಯವಸ್ಥೆ ಮಾಡಿದ್ದರಿಂದ ಯಾವುದೇ ತೊಂದರೆಗಳು ಎದುರಾಗಿಲ್ಲ ಎಂದು ಅವರು ತಿಳಿಸಿದರು.

ಲಿಖಿತ ಪರೀಕ್ಷೆ ಮುಗಿದು, ಒಎಂಆರ್ ಉತ್ತರ ಪತ್ರಿಕೆಗಳು ತಲುಪಿದ ಕ್ಷಣದಿಂದಲೇ ಅವುಗಳನ್ನು ಸ್ಕ್ಯಾನ್ ಮಾಡಿ‌, ಕೆಇಎ ವೆಬ್ ಸೈಟ್ ನಲ್ಲಿ ಅಪ್ ಲೋಡ್ ಮಾಡುವ ಕೆಲಸ‌ ಆರಂಭಿಸಲಾಯತು. ಕಲ್ಬುರ್ಗಿ, ರಾಯಚೂರು, ಧಾರವಾಡ, ಬಳ್ಳಾರಿ, ವಿಜಯಪುರ, ದಾವಣಗೆರೆ ಮತ್ತು ‌ಮೈಸೂರಿನಲ್ಲಿ ಸ್ಕ್ಯಾನಿಂಗ್ ಕೇಂದ್ರಗಳನ್ನು ತೆರೆದಿದ್ದು, ಸ್ಥಳೀಯ ಜಿಲ್ಲಾಧಿಕಾರಿಗಳ‌ ನೇತೃತ್ವದಲ್ಲಿ ಸ್ಕ್ಯಾನಿಂಗ್ ನಡೆಯುತ್ತಿದೆ. ಬೆಂಗಳೂರಿನದು ಕೆಇಎ ಕಚೇರಿಯಲ್ಲಿ ನಡೆಯುತ್ತಿದೆ. ‌ನಾಳೆ ಸಂಜೆ ವೇಳೆಗೆ ಎಲ್ಲ  ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ಕೆಇಎ ವೆಬ್ ಸೈಟ್ ನಲ್ಲಿ ಲಭ್ಯ ಇರಲಿವೆ ಎಂದು ಅವರು ಹೇಳಿದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್