LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿವಿಧ ಕಾಮಗಾರಿಗಳಲ್ಲಿ 78 ಕೋಟಿ ರೂ. ಭ್ರಷ್ಟಾಚಾರ ಆರೋಪ: KRIDL ಕಾರ್ಯನಿರ್ವಾಹಕ ಎಂಜಿನಿಯರ್ ಅರೆಸ್ಟ್

ಕೊಪ್ಪಳ: ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಕೊಪ್ಪಳ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ(KRIDL) ಕಾರ್ಯನಿರ್ವಾಹಕ ಎಂಜಿನಿಯರ್ ಜರಣಪ್ಪ ಎಂ. ಚಿಂಚೋಳಿಕರ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇಲಾಖೆಯಲ್ಲಿ ಗ್ರೂಪ್ ಲೀಡರ್ ಆಗಿದ್ದ ದೇವರಾಜ ರೇಷ್ಮೆ ಎಂಬುವರನ್ನು ಕೂಡ ಬಂಧಿಸಿ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಭ್ರಷ್ಟಾಚಾರದ ಬೆಳಕಿಗೆ ಬಂದ ಬಳಿಕ ಸರ್ಕಾರ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ಲೋಕಾಯುಕ್ತ ಡಿವೈಎಸ್ಪಿ ಮಲ್ಲಿಕಾರ್ಜುನ ಚುಕ್ಕಿ ನೇತೃತ್ವದಲ್ಲಿ ಬೆಂಗಳೂರು ಮತ್ತು ಕೊಪ್ಪಳ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಜರಣಪ್ಪ ಎಂ. ಚಿಂಚೋಳಿಕರ ವಿರುದ್ಧ ಯಲಬುರ್ಗಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳ ಕಾರ್ಯನಿರ್ವಹಣೆಯಲ್ಲಿ ಅವ್ಯವಹಾರ ನಡೆಸಿದ ಆರೋಪ ಸಾಬೀತಾಗಿದೆ. ಎರಡು ವರ್ಷಗಳ ಹಿಂದೆ ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿತ್ತು. ನಂತರ ಸೇವೆಯಿಂದಲೂ ವಜಾಗೊಳಿಸಲಾಗಿತ್ತು.

ಯಲಬುರ್ಗಾ ಕ್ಷೇತ್ರದಲ್ಲಿ 2016-18ರ ಅವಧಿಯಲ್ಲಿ ಸುವರ್ಣ ಗ್ರಾಮ ಯೋಜನೆ ಕಾಮಗಾರಿಗಳನ್ನು ನಿರ್ವಹಿಸದೆ ಅನುದಾನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ 2020ರಲ್ಲಿ ದೂರು ನೀಡಿದ್ದರು. ಈ ದೂರಿನ ಅನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯಲ್ಲಿನ ಎಂಜಿನಿಯರಿಂಗ್ ಗಳ ಅಧ್ಯಕ್ಷತೆಯಲ್ಲಿ ಪಂಚನಾಮೆ ಸಮಿತಿ ರಚಿಸಲಾಗಿತ್ತು. ಲೋಕಾಯುಕ್ತ ಪೊಲೀಸರು ಜರಣಪ್ಪ ಅವರ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದರು. ಈ ಪ್ರಕರಣ ಸೇರಿದಂತೆ KRIDL ನಲ್ಲಿ ನಡೆದ 78 ಕೋಟಿ ರೂ. ಮೊತ್ತದ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

FOR SALE

Premium Domain

allaboutbelagavi.com

Domain Age: 11 Years 6 Month Old
ಈ ಪ್ರೀಮಿಯಂ ನ್ಯೂಸ್ ಡೊಮೇನ್ ಮತ್ತು ಸಂಪೂರ್ಣವಾಗಿ ಕಾನ್ಫಿಗರ್ ಮಾಡಲಾದ ಪೋರ್ಟಲ್ ತಕ್ಷಣದ ಸ್ವಾಧೀನಕ್ಕೆ ಲಭ್ಯವಿದೆ. ಸ್ಥಳೀಯ ಸುದ್ದಿಗಳಿಗೆ ಹೆಚ್ಚಿನ ಸಾಮರ್ಥ್ಯ.
This premium news domain and fully configured portal is available for immediate acquisition. High potential for localized news.
Contact / Contact Us
LATEST
ಕಲ್ಯಾಣ ಕರ್ನಾಟಕ ಜನತೆಗೆ ಗುಡ್ ನ್ಯೂಸ್: KKRTC ಗೆ 400 ಹೊಸ ಬಸ್ ಮಂಜೂರುಮನೆಗಳ್ಳತನ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರು ವಶಕ್ಕೆ: ಲಕ್ಷಾಂತರ ರೂ. ಮೌಲ್ಯದ ಆಭರಣ ವಶಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ BNP ಅಭ್ಯರ್ಥಿ ಮಿರ್ಜಾ ಫಖ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆBREAKING: ಲಡಾಖ್ ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ಪೀಠ ಸ್ಥಾಪನೆಗೆ ಕೇಂದ್ರ ನಿರ್ಧಾರ: ಅಮಿತ್ ಶಾ ಘೋಷಣೆಅನುಮತಿ ಇಲ್ಲದೆ ಸಚಿವ ಕೃಷ್ಣ ಬೈರೇಗೌಡರ ಪೋಸ್ಟರ್ ಅಂಟಿಸಿದ್ದ ವ್ಯಕ್ತಿ ವಿರುದ್ಧ ಕೇಸ್ ದಾಖಲುಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿKPME ಉಲ್ಲಂಘನೆ: ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ದಂಡ, ಪರವಾನಗಿ ರದ್ದುಮೋದಿ ದೇವರಿಗೆ ಪೂಜೆ: ಭಕ್ತರಿಂದ ‘ಜೈ ಜೈ ಮೋದಿ, ಹರ್ ಹರ್ ಮೋದಿ’ ಘೋಷಣೆ; ದೆಹಲಿ ಪ್ರೆಸ್ ಕ್ಲಬ್‌ನಲ್ಲಿ ‘ಮೋದಿ ಚಾಲೀಸಾ’ ಕಾರ್ಯಕ್ರಮ!ತಪ್ಪಾಯ್ತು ಕ್ಷಮಿಸಿಬಿಡಿ: ರಸ್ತೆ ಮುಚ್ಚಿದ್ದಕ್ಕೆ ಭಾರತೀಯ ಸೇನೆಗೆ ‘ನಾನು GenZ’ ಎಚ್ಚರಿಕೆ ನೀಡಿದ್ದ ಯುವತಿಯಿಂದ ಕ್ಷಮೆಯಾಚನೆಲೋಕಸಭಾ ಕ್ಷೇತ್ರ ಹೆಚ್ಚಳ ಮಾಡಬಾರದು; 1971ರ ಜನಸಂಖ್ಯೆ ಆಧಾರವನ್ನು ಗೌರವಿಸಬೇಕು ಸಿಎಂ ಡಿ.ಕೆ.ಶಿವಕುಮಾರ್ ಮನವಿ