LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಾಗರದ ನಾಡಕಲಸಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ₹8.93 ಲಕ್ಷ ನಿವ್ವಳ ಲಾಭ: ಸದಸ್ಯರಿಗೆ ಶೇ.5 ಡಿವಿಡೆಂಡ್‌ ಘೋಷಣೆ

ಸಾಗರ: ತಾಲೂಕಿನ ಪ್ರಮುಖ ಗ್ರಾಮೀಣ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ನಾಡಕಲಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2025-26ನೇ ಸಾಲಿನಲ್ಲಿ ₹8,93,603 ನಿವ್ವಳ ಲಾಭ ಗಳಿಸುವ ಮೂಲಕ ಆರ್ಥಿಕ ಸದೃಢತೆಯ ಹಾದಿಯಲ್ಲಿ ಮುನ್ನಡೆದಿದೆ.

ಬುಧವಾರ ಸಂಘದ ಆವರಣದಲ್ಲಿ ಜರುಗಿದ 24ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಶ್ರೀಧರ ಭಟ್ ಕಲಸಿ, "ಸಂಸ್ಥೆಯು ಹಿಂದಿನ ವರ್ಷಕ್ಕಿಂತಲೂ ಉತ್ತಮ ಪ್ರಗತಿ ದಾಖಲಿಸಿದೆ. ಪ್ರಸ್ತುತ ಸಂಘದಲ್ಲಿ 932 ಮಂದಿ ಸದಸ್ಯರಿದ್ದು, ₹48.75 ಲಕ್ಷಕ್ಕೂ ಮಿಕ್ಕಿ ಶೇರು ಬಂಡವಾಳ ಸಂಗ್ರಹವಾಗಿದೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಸದಸ್ಯರ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ನೀಡಲು ₹3 ಕೋಟಿಗೂ ಅಧಿಕ ಮೊತ್ತದ ಕೆಸಿಸಿಎಲ್ (KCCL) ಸಾಲ ಹಾಗೂ ₹75 ಲಕ್ಷ ಮಧ್ಯಮಾವಧಿ ಸಾಲ ವಿತರಿಸಲಾಗಿದೆ," ಎಂದು ಮಾಹಿತಿ ನೀಡಿದರು.

ಇದೇ ವೇಳೆ ಷೇರುದಾರರಿಗೆ ಶೇಕಡಾ ಐದರಷ್ಟು ಲಾಭಾಂಶ (ಡಿವಿಡೆಂಡ್) ವಿತರಿಸಲು ತೀರ್ಮಾನಿಸಲಾಗಿದ್ದು, ಸದಸ್ಯರು ಸಂಘದೊಂದಿಗೆ ಹೆಚ್ಚಿನ ಆರ್ಥಿಕ ವಹಿವಾಟು ನಡೆಸಿ ಸಂಸ್ಥೆಯ ಶ್ರೇಯೋಭಿವೃದ್ಧಿಗೆ ಕೈಜೋಡಿಸಬೇಕೆಂದು ಅವರು ಮನವಿ ಮಾಡಿದರು.

news_1789033598_0_404.webp

ಸನ್ಮಾನ ಮತ್ತು ಪುರಸ್ಕಾರ:

ಸಂಘಕ್ಕೆ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಕಾರ್ಯದರ್ಶಿ ವೆಂಕಟರಮಣ ಅವರನ್ನು ಸಮಾರಂಭದಲ್ಲಿ ಸಾರ್ವಜನಿಕವಾಗಿ ಗೌರವಿಸಲಾಯಿತು. ಜತೆಗೆ ಸದಸ್ಯರ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದ ಆರಂಭದಲ್ಲಿ ಉಪಾಧ್ಯಕ್ಷ ವೆಂಕಟೇಶ ಸ್ವಾಗತಿಸಿದರೆ, ನಿರ್ದೇಶಕ ಉಮೇಶ್ ವಂದನಾರ್ಪಣೆ ಮಾಡಿದರು. ಸಭೆಯಲ್ಲಿ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ನೂರಾರು ಸದಸ್ಯರು ಉಪಸ್ಥಿತರಿದ್ದರು.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?BREAKING: ಇನ್ಮುಂದೆ ವೃತ್ತಿಪರ ಕೋರ್ಸ್ ಗಳಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ: ರಾಜ್ಯ ಸರ್ಕಾರ ಅಧಿಕೃತ ಆದೇಶGOOD NEWS: ಗೃಹಜ್ಯೋತಿ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮಾಹಿತಿ ದಾಖಲಿಸಲು ಅವಧಿ ವಿಸ್ತರಣೆ!ಗ್ರಾಹಕರಿಗೆ ಜಿಯೋ ಭರ್ಜರಿ ಆಫರ್: 1,499 ರೂ. JioBharat ಫೋನ್ ನೊಂದಿಗೆ 6 ತಿಂಗಳ ಉಚಿತ ರೀಚಾರ್ಜ್BREAKING: ಇನ್ಮುಂದೆ ಔಷಧಿ ಬಿಲ್‌ನಲ್ಲಿ ಮೂಲ ಬೆಲೆ, MRP ವಿವರ ಕಡ್ಡಾಯ: ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ!CJP ಪ್ರತಿಭಟನೆ: 3,000ಕ್ಕೂ ಹೆಚ್ಚು ಜನರ ಬಂಧನ; ದೇಶದಲ್ಲೀಗ ಅಘೋಷಿತ ತುರ್ತು ಪರಿಸ್ಥಿತಿ ಎಂದ ಸೋನಮ್ ವಾಂಗ್ ಚುಕ್