LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯಲ್ಲಿ ಚಿನ್ನ-ಹಣ ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್ ; ಮರುದಿನವೇ 944 ಗ್ರಾಂ ಬಂಗಾರ ಕಳ್ಳತನ |WATCH VIDEO

ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆಗಾಗಿ ಮಾಡುವ ಕೆಲವು ಕೆಲಸಗಳು ಕೆಲವೊಮ್ಮೆ ಊಹಿಸದಷ್ಟು ದೊಡ್ಡ ನಷ್ಟಕ್ಕೆ ಕಾರಣವಾಗುತ್ತವೆ. ಮನೆಯಲ್ಲಿ ಎಷ್ಟು ಚಿನ್ನ, ಹಣ ಹಾಗೂ ವಜ್ರಾಭರಣಗಳಿವೆ ಎಂಬುದನ್ನು ವಿಡಿಯೋ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರದರ್ಶಿಸಿದ್ದ ಖ್ಯಾತ ಯೂಟ್ಯೂಬರ್ ದಂಪತಿಗೆ ಇದೀಗ ಭಾರೀ ಆಘಾತ ಎದುರಾಗಿದೆ.

ಕೇರಳ ಗಡಿ ಪ್ರದೇಶವಾದ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಮಕ್ಕೋವಿಲ್ ಸಮೀಪದ ತಂಬಟ್ಟೂಕೋಣಂ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಹೌದು. ಸೋಷಿಯಲ್ ಮೀಡಿಯಾದಲ್ಲಿ ಮನೆಯಲ್ಲಿದ್ದ ಚಿನ್ನ, ವಜ್ರಾಭರಣ ಹಾಗೂ ಹಣವನ್ನು ತೋರಿಸಿ ರೀಲ್ಸ್ ಮಾಡಿದ್ದ ಯೂಟ್ಯೂಬರ್ ದಂಪತಿಗೆ ಇದೀಗ ಭಾರೀ ಶಾಕ್ ಎದುರಾಗಿದೆ. ವಿಡಿಯೋ ವೈರಲ್ ಆದ ಮರುದಿನವೇ ಕಳ್ಳರು ಮನೆಗೆ ನುಗ್ಗಿ ಬರೋಬ್ಬರಿ 944 ಗ್ರಾಂ (118 ಸವರನ್) ಚಿನ್ನಾಭರಣ, ವಜ್ರದ ಆಭರಣಗಳು ಹಾಗೂ ₹50 ಸಾವಿರ ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಆಸ್ತಿ ಪ್ರದರ್ಶನ ಮಾಡಿದ್ದೇ ಕಳ್ಳರಿಗೆ ಸುಳಿವು ನೀಡಿತೇ ಎಂಬ ಅನುಮಾನ ಮೂಡಿದೆ.

ಈ ಪ್ರದೇಶದಲ್ಲಿ ವಾಸಿಸುವ ವಿನೋದ್ ಕುಮಾರ್ ಮತ್ತು ಮಧುಮಿತಾ ದಂಪತಿ ಜನಪ್ರಿಯ ಯೂಟ್ಯೂಬರ್‌ಗಳಾಗಿದ್ದಾರೆ. ಇತ್ತೀಚೆಗೆ ಅವರು ತಮ್ಮ ಮನೆಯ ಪೂಜಾ ಕೊಠಡಿಯಲ್ಲಿದ್ದ ಭಾರೀ ಪ್ರಮಾಣದ ಚಿನ್ನಾಭರಣ, ವಜ್ರಾಭರಣ ಹಾಗೂ ನಗದನ್ನು ಸ್ಪಷ್ಟವಾಗಿ ತೋರಿಸುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ವೈರಲ್ ಆಗಿತ್ತು.

ಆದರೆ, ಇದೇ ವಿಡಿಯೋ ಕಳ್ಳರಿಗೆ ಮನೆಯಲ್ಲಿದ್ದ ಸಂಪತ್ತಿನ ಬಗ್ಗೆ ಮಾಹಿತಿ ನೀಡಿದಂತಾಗಿದೆ. ವಿಡಿಯೋವನ್ನು ಗಮನಿಸಿದ ದುಷ್ಕರ್ಮಿಗಳು ಮನೆ ದೋಚಲು ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ.

ಸಿಸಿಟಿವಿ ಇದ್ದರೂ ಕಳ್ಳತನ

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಮರುದಿನವೇ ಕಳ್ಳರು ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದ್ದಾರೆ ಎನ್ನಲಾಗಿದೆ. ದಂಪತಿ ಮನೆಯಲ್ಲಿ ಇಲ್ಲದ ಸಮಯವನ್ನು ನೋಡಿಕೊಂಡು ಮನೆಗೆ ನುಗ್ಗಿದ ಕಳ್ಳರು, ಮನೆಯ ಹಿಂಭಾಗದ ಬಾಗಿಲುಗಳನ್ನು ಒಡೆದು ಒಳಪ್ರವೇಶಿಸಿದ್ದಾರೆ.

ನಂತರ ಪೂಜಾ ಕೊಠಡಿಯಲ್ಲಿ ಇರಿಸಲಾಗಿದ್ದ 118 ಸವರನ್‌ಗಳಷ್ಟು ಚಿನ್ನಾಭರಣ ಮತ್ತು ವಜ್ರಾಭರಣ, ಜೊತೆಗೆ ₹50 ಸಾವಿರ ನಗದನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.

ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳು ಕಾಣೆಯಾಗಿರುವುದನ್ನು ಗಮನಿಸಿದ ದಂಪತಿ ತಕ್ಷಣ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಆರಂಭಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮನೆಯಲ್ಲಿರುವ ಚಿನ್ನ, ಹಣ ಸೇರಿದಂತೆ ಬೆಲೆಬಾಳುವ ವಸ್ತುಗಳ ಮಾಹಿತಿಯನ್ನು ಬಹಿರಂಗವಾಗಿ ಹಂಚಿಕೊಳ್ಳುವುದು ಭದ್ರತಾ ಅಪಾಯಕ್ಕೆ ಕಾರಣವಾಗಬಹುದು ಎಂಬುದನ್ನು ಈ ಘಟನೆ ಮತ್ತೊಮ್ಮೆ ಎಚ್ಚರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆಗಾಗಿ ಮನೆಯಲ್ಲಿರುವ ಚಿನ್ನ, ಹಣ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಬಹಿರಂಗವಾಗಿ ಪ್ರದರ್ಶಿಸುವುದು ಕೆಲವೊಮ್ಮೆ ಭಾರೀ ಅಪಾಯಕ್ಕೆ ಕಾರಣವಾಗಬಹುದು. ಈ ಘಟನೆಯಲ್ಲೂ ಯೂಟ್ಯೂಬರ್ ದಂಪತಿ ಹಂಚಿಕೊಂಡಿದ್ದ ವಿಡಿಯೋವನ್ನು ಗಮನಿಸಿದ ಬಳಿಕ ಕಳ್ಳತನ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈಯಕ್ತಿಕ ಆಸ್ತಿ ಹಾಗೂ ಮನೆಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಹಂಚಿಕೊಳ್ಳುವಾಗ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಹಬ್ಬದ ಸಂದರ್ಭದಲ್ಲೆ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ : ರಾಜ್ಯದಲ್ಲಿ ಗಗನಕ್ಕೇರಿದ ಅಕ್ಕಿ, ತೊಗರಿಬೇಳೆ ಬೆಲೆ!GOOD NEWS : 'KSRTC' ಯಿಂದ ದಸರಾ ಸಂಭ್ರಮಕ್ಕೆ ಸ್ಪೆಷಲ್ ಗಿಫ್ಟ್: 3,000ಕ್ಕೂ ಹೆಚ್ಚು ವಿಶೇಷ ಬಸ್‌ಗಳ ಸಂಚಾರ!ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!